Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬ್ರಿಟನ್ ಪ್ರಧಾನಿಯಾಗಿ ರಿಷಿ ಸುನಕ್...

ಬ್ರಿಟನ್ ಪ್ರಧಾನಿಯಾಗಿ ರಿಷಿ ಸುನಕ್ ಆಯ್ಕೆ: ಸಿಎಂ ಬೊಮ್ಮಾಯಿ ಹರ್ಷ

ವಾರ್ತಾಭಾರತಿವಾರ್ತಾಭಾರತಿ24 Oct 2022 10:33 PM IST
share
ಬ್ರಿಟನ್ ಪ್ರಧಾನಿಯಾಗಿ ರಿಷಿ ಸುನಕ್ ಆಯ್ಕೆ: ಸಿಎಂ ಬೊಮ್ಮಾಯಿ ಹರ್ಷ

ಶಿಗ್ಗಾಂವಿ, ಅ.24: ಬ್ರಿಟನ್ ಪ್ರಧಾನಿಯಾಗಿ ಭಾರತೀಯ ಮೂಲದ ರಿಷಿ ಸುನಕ್ ಅವರು ಆಯ್ಕೆಯಾಗಿರುವುದು ಅತ್ಯಂತ ಹೆಮ್ಮೆ ಹಾಗೂ ಸಂತಸ ತಂದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.

ಅವರು ಇಂದು ಶಿಗ್ಗಾಂವಿ ಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. 

ಬ್ರಿಟಿಷರು ಭಾರತವನ್ನು 200 ವರ್ಷಗಳ ಕಾಲ ಆಳಿದರು. ಅವರು ಈ ಬೆಳವಣಿಗೆಯನ್ನು ನಿರೀಕ್ಷಿಸಿರಲಾರರು. ಭಾರತೀಯರು ವಿಶ್ವದಲ್ಲಿ ಎಲ್ಲ ರಂಗಗಳಲ್ಲಿ ಮುಂದಿದ್ದಾರೆ. ಹಲವು ದೇಶಗಳಲ್ಲಿ ಸಂಸದರಾಗಿಯೂ ಆಯ್ಕೆಯಾದವರಿದ್ದಾರೆ. ಇದೀಗ ರಿಷಿ ಸುನಕ್ ಅವರು ಬ್ರಿಟನ್ ಪ್ರಧಾನಿಯಾಗುವುದು ಅತ್ಯಂತ ವಿಶೇಷವಾದುದು. ಚಕ್ರ ಪೂರ್ತಿ ತಿರುಗಿದೆ ಎಂದು ಅಭಿಪ್ರಾಯ ಪಟ್ಟರು.

ಶಿಗ್ಗಾಂವಿಯಲ್ಲಿ ಕಿತ್ತೂರು ಚೆನ್ನಮ್ಮನ ಸ್ಮರಣಾರ್ಥ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ್ದ ಮುಖ್ಯಮಂತ್ರಿಗಳು ರಾಣಿ ಚೆನ್ನಮ್ಮನ ಪ್ರೇರಣೆಯಿಂದ ಸ್ತ್ರೀಶಕ್ತಿ ಸ್ವಸಹಾಯ ಸಂಘಗಳಿಗೆ 5 ಲಕ್ಷ ವರೆಗೆ ಬೀಜಧನ ಹಾಗೂ ಸಾಲ ಸೌಲಭ್ಯ ಒದಗಿಸುವ ಸ್ತ್ರೀ ಸಾಮರ್ಥ್ಯ ಯೋಜನೆಯನ್ನು ಜಾರಿಗೊಳಿಸಲಾಗುತ್ತದೆ. ಈ ಯೋಜನೆಯಡಿ ಅವರ ಉತ್ಪನ್ನಗಳಿಗೆ ಮಾರುಕಟ್ಟೆ ಸೌಲಭ್ಯ ಮತ್ತಿತರ ಬೆಂಬಲ ನೀಡಲಾಗುವುದು ಎಂದು ತಿಳಿಸಿದರು. ಇದೇ ರೀತಿ ಸ್ವಾಮಿ ವಿವೇಕಾನಂದ ಯುವಶಕ್ತಿ ಸಂಘಗಳ ಮೂಲಕ ಯುವಕರಿಗೆ ನೆರವು ನೀಡಲಾಗುವುದು. ಡಿಸೆಂಬರ್ ನಲ್ಲಿ ಎರಡೂ ಯೋಜನೆಗಳಿಗೆ ಚಾಲನೆ ನೀಡಲಾಗುವುದು ಎಂದು ತಿಳಿಸಿದರು. 

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳಿಗೆ ಮೀಸಲಾತಿ ಹೆಚ್ಚಿಸುವ ಅಧ್ಯಾದೇಶ ಜಾರಿಗೆ ಬಂದಿರುವುದು ನಿಜಕ್ಕೂ ಸಂತಸ ತಂದಿದೆ. ಈ ಸಮುದಾಯಗಳ 50 ವರ್ಷದ ಬೇಡಿಕೆ ಈಡೆರಿಸಿದಂತಾಗಿದೆ. ನ್ಯಾಯಮೂರ್ತಿ ನಾಗಮೋಹನ್ ದಾಸ್ ವರದಿಯನ್ನು ಆಧರಿಸಿ, ಸುಗ್ರೀವಾಜ್ಞೆ ಹೊರಡಿಸಲಾಗಿದ್ದು ಮುಂದಿನ ಅಧಿವೇಶನದಲ್ಲಿ ಅಂಗೀಕಾರ ಪಡೆದು, ಸಂವಿಧಾನದ 9ನೆ ಪರಿಚ್ಛೇದದಲ್ಲಿ ಸೇರ್ಪಡೆಗೊಳಿಸಲು ಕೇಂದ್ರಕ್ಕೆ ಕಳುಹಿಸಲಾಗುವುದು ಎಂದು ತಿಳಿಸಿದರು. 

ಸಿದ್ದರಾಮಯ್ಯನವರು ಅಹಿಂದ ನಾಯಕರಾಗಿ ಮಾಡದ ಕೆಲಸವನ್ನು ನೀವು ಮಾಡಿದ್ದೀರಿ ಎಂದ ಪತ್ರಕರ್ತರ ಮಾತಿಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ನಾನು ನನ್ನ ಚಿಂತನೆ, ನನ್ನ ಕರ್ತವ್ಯ ವನ್ನಷ್ಟೆ ಮಾಡುತ್ತಿದ್ದೇನೆ ಎಂದು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X