Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಗುತ್ತಿಗೆದಾರರಿಗೆ ಅಕ್ರಮ ಲಾಭಮಾಡಿಕೊಟ್ಟ...

ಗುತ್ತಿಗೆದಾರರಿಗೆ ಅಕ್ರಮ ಲಾಭಮಾಡಿಕೊಟ್ಟ ಇಂಜಿನಿಯರ್‌ಗಳು

ನಾರಾಯಣಪುರ ಬಲದಂಡೆ ಸೀಳುಗಾಲುವೆಗಳ ಕಾಮಗಾರಿಯಲ್ಲಿ ಭ್ರಷ್ಟಾಚಾರ

ಜಿ.ಮಹಾಂತೇಶ್ಜಿ.ಮಹಾಂತೇಶ್25 Oct 2022 8:05 AM IST
share
ಗುತ್ತಿಗೆದಾರರಿಗೆ ಅಕ್ರಮ ಲಾಭಮಾಡಿಕೊಟ್ಟ ಇಂಜಿನಿಯರ್‌ಗಳು

ಬೆಂಗಳೂರು, ಅ.24: ನಾರಾಯಣಪುರ ಬಲದಂಡೆ ಕಾಲುವೆಯ ಸರಪಳಿ 0.000 ಕಿ.ಮೀ.ನಿಂದ 95 ಕಿ.ಮೀ.ವರೆಗೆ  ಬರುವ ವಿತರಣಾ ಕಾಲುವೆ ಸಂಖ್ಯೆ 1ರಿಂದ 15 ಹಾಗೂ ಅದರಡಿ ಬರುವ ಸೀಳುಗಾಲುವೆಗಳ ಆಧುನೀಕರಣ ಕಾಮಗಾರಿಗಳ ಹಲವು ನ್ಯೂನತೆಗಳೊಂದಿಗೆ ಅಂದಾಜು ಪತ್ರಿಕೆ ತಯಾರಿಸಿ ಗುತ್ತಿಗೆದಾರರಿಗೆ ಕೋಟ್ಯಂತರ ರೂ. ಅಕ್ರಮವಾಗಿ ಲಾಭ ಮಾಡಿಕೊಟ್ಟ ಇಂಜಿನಿಯರ್‌ಗಳ ಪಟ್ಟಿ ಇದೀಗ ಬಹಿರಂಗವಾಗಿದೆ.

 ಎನ್‌ಆರ್‌ಬಿಸಿ ಕಾಲುವೆಗಳ ಆಧುನೀಕರಣ ಕಾಮಗಾರಿಗಳ ಸಂಬಂಧ ಸಲ್ಲಿಕೆಯಾಗಿದ್ದ ದೂರನ್ನಾಧರಿಸಿ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿದ್ದ ವಿಧಾನಮಂಡಲದ ಅಂದಾಜು ಸಮಿತಿ ಸದಸ್ಯ ಶಾಸಕರಿಗೆ ಅಡ್ಡಿಯನ್ನುಂಟು ಮಾಡಿದ್ದಲ್ಲದೇ ಅವರ ಮೇಲೆ ಗುತ್ತಿಗೆದಾರರು ಹಲ್ಲೆಗೆ ಮುಂದಾಗಿದ್ದ ಘಟನೆ ಬಳಿಕ 25 ಇಂಜಿನಿಯರ್‌ಗಳ ಪಟ್ಟಿಯು ಮುನ್ನೆಲೆಗೆ ಬಂದಿದೆ. ಈ ಪಟ್ಟಿಯು ''the-file.in''ಗೆ ಲಭ್ಯವಾಗಿದೆ.
ಕಾಮಗಾರಿಯಲ್ಲಿನ ಲೋಪದೋಷ ಹಾಗೂ ನ್ಯೂನತೆಗಳೊಂದಿಗೆ ತಯಾರಿಸಲಾದ ಅಂದಾಜು ಪತ್ರಿಕೆಗೆ ಕಾರಣರಾದ ಮತ್ತು ಕಾಮಗಾರಿ ನಿರ್ಮಾಣ ಹಂತದಲ್ಲಿ ಅನಾವಶ್ಯ ಐಟಂಗಳ ಹೆಚ್ಚುವರಿ ಪರಿಮಾಣವನ್ನು ಅಳತೆ ಪುಸ್ತಕದಲ್ಲಿ ನಮೂದಿಸಿ ಬಿಲ್ ಪಾವತಿಗೆ ಕಾರಣರಾದ ಯೋಜನಾ ಅಧಿಕಾರಿಗಳನ್ನು ಗುರುತಿಸಿ ಅವರನ್ನು ಅಮಾನತಿನಲ್ಲಿಡಲು ಸೂಕ್ತ ಪ್ರಸ್ತಾವ ಸಲ್ಲಿಸಬೇಕು ಎಂದು ಜಲಸಂಪನ್ಮೂಲ ಇಲಾಖೆಯ ಸರಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯು ಕೃಷ್ಣ ಭಾಗ್ಯ ಜಲನಿಗಮ ವ್ಯವಸ್ಥಾಪಕ ನಿರ್ದೇಶಕರಿಗೆ 2022ರ ಜೂನ್ 17ರಂದು ಪತ್ರ ಬರೆದು ನಿರ್ದೇಶಿಸಿದ್ದರು. ಈ ಪತ್ರದ ಪ್ರತಿಯೂ ''the-file.in''ಗೆ ಲಭ್ಯವಾಗಿದೆ.
ಪ್ರಸ್ತಾವಿತ ಆಧುನೀಕರಣ ಕಾಮಗಾರಿಯಲ್ಲಿ ಅನಾವಶ್ಯ ಐಟಂಗಳ /ಹೆಚ್ಚುವರಿ ಪರಿಮಾಣಗಳಿಗಾಗಿ ಪಾವತಿಸಲಾದ ಬಿಲ್ ಮೊತ್ತವನ್ನು ಗುತ್ತಿಗೆದಾರರಿಂದ ವಸೂಲಿ ಮಾಡಿ ಕೈಗೊಂಡ ಕ್ರಮದ ವರದಿಯನ್ನು ಸಲ್ಲಿಸಬೇಕು ಎಂದು ಜಲ ಸಂಪನ್ಮೂಲ ಇಲಾಖೆಯ ಸರಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್  ಅವರು ಕೃಷ್ಣಭಾಗ್ಯ ಜಲನಿಗಮದ ವ್ಯವಸ್ಥಾಪಕ ನಿರ್ದೇಶಕರಿಗೆ ಪತ್ರ ಬರೆದು ಸೂಚಿಸಿದ್ದರು.
ಅದರಂತೆ ಕೃಷ್ಣ ಭಾಗ್ಯ ಜಲನಿಗಮವು ಸಹಾಯಕ ಮತ್ತು ಕಿರಿಯ ಇಂಜಿನಿಯರ್‌ಗಳ ಪಟ್ಟಿಯನ್ನು ಸರಕಾರಕ್ಕೆ ಒದಗಿಸಿದೆ. ನಾರಾಯಣಪುರ ಬಲದಂಡೆ  ಕಾಲುವೆ ಉಪ ವಿಭಾಗದ ರೋಡಲಬಂಡಾ ಸೇರಿದಂತೆ ಇನ್ನಿತರ ವಲಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಹಾಯಕ ಮತ್ತು ಕಿರಿಯ ಇಂಜಿನಿಯರ್‌ಗಳು ಗುತ್ತಿಗೆದಾರರು ಮತ್ತು ಪ್ರಭಾವಿ ಕಂಪೆನಿಗಳೊಂದಿಗೆ ಕೈಜೋಡಿಸಿ ಕೋಟ್ಯಂತರ ರೂ. ಮೊತ್ತ ಪಾವತಿಗೆ ಕಾರಣರಾಗಿದ್ದರು ಎಂಬುದು ತಿಳಿದು ಬಂದಿದೆ.
 ಅದೇ ರೀತಿ ಕಾಮಗಾರಿ ನಿರ್ಮಾಣ ಹಂತದಲ್ಲಿ ಅನಾವಶ್ಯ ಐಟಂಗಳ/ಹೆಚ್ಚುವರಿ ಪರಿಮಾಣ ಲೀಡ್ ಆ್ಯಂಡ್ ಲಿಫ್ಟ್ನೊಂದಿಗೆ ಅಳತೆ ಪುಸ್ತಕದಲ್ಲಿ ನಮೂದಿಸಿ ಬಿಲ್ ಪಾವತಿಗೆ ಎಕ್ಸಿಕ್ಯೂಟಿವ್, ಅಸಿಸ್ಟೆಂಟ್ ಎಕ್ಸಿಕ್ಯೂಟಿವ್ ಇಂಜಿನಿಯರ್‌ಗಳು ಕಾರಣರಾಗಿದ್ದರು.
 ಇಂಜಿನಿಯರ್‌ಗಳ ಹೆಸರಿನ ಪಟ್ಟಿ ಇಲ್ಲಿದೆ: ಭೀಮಣ್ಣ ನಾಗಠಾಣ, ಪುಟ್ಟಣ್ಣ, ಸಂತೋಷ ಕೆ., ಶಿವಕುಮಾರ್, ಬೈಲಪ್ಪ, ಭರತಕುಮಾರ್, ಮುಹಮ್ಮದ್ ಮೂಸಾ, ಅನಂದ, ಶ್ರೀಧರ ಬಳ್ಳಿದವ, ಶಿವಕುಮಾರ, ನರೇಂದ್ರ, ಸಂತೋಷ ಪಾಟೀಲ, ವೀರೇಶ, ಮಿಥುನ ಪವಾ, ಸೂರಪ್ಪ ಬಿ., ಅನಿಲ ಪಾಟೀಲ, ನಾಗರಾಜ ಬಿ, ಗೋಪಾಲಸಿಂಗ್ ಠಾಕೂರ, ಮೆಹಬೂಬ್ ಸಾಬ್, ಎಂ.ಎಸ್.ಬಜಂತ್ರಿ, ವಿ. ಎಸ್.ಮಲ್ಲಿಕಾರ್ಜುನ, ಅಮೃತ ಪವಾರ, ಗೋವಿಂದರಾಜು ವಿ, ಅನಿಲ ರಾಜ, ಶಂಕರ ಇವರು ಅಂದಾಜು ಪತ್ರಿಕೆಯಲ್ಲಿನ ಲೋಪದೋಷ ಮತ್ತು ನ್ಯೂನತೆಗಳಿಗೆ ಕಾರಣರಾಗಿದ್ದರು ಎಂಬುದು ಪಟ್ಟಿಯಿಂದ ತಿಳಿದು ಬಂದಿದೆ.
 ಕೃಷ್ಣಭಾಗ್ಯ ಜಲನಿಗಮದ ನಾರಾಯಣಪುರ ಬಲದಂಡೆ ಕಾಲುವೆ ಆಧುನೀಕರಣ, ನವೀಕರಣ ಮತ್ತು ವಿಸ್ತರಣೆ ಕಾಮಗಾರಿಗಳ ಗುಣಮಟ್ಟ ಮತ್ತು ಭೌತಿಕ ಪರಿಶೀಲನೆಗೆ ತೆರಳಿದ್ದ ಬಿಜೆಪಿ ಶಾಸಕ ಅಭಯ್ ಪಾಟೀಲ್ ಅಧ್ಯಕ್ಷತೆಯ ಕರ್ನಾಟಕ ವಿಧಾನಸಭೆಯ ಅಂದಾಜುಗಳ ಸಮಿತಿಯ ಶಾಸಕ ಸದಸ್ಯರ ಮೇಲೆ ಗುತ್ತಿಗೆದಾರರ ಬೆಂಬಲಿಗರ ಗುಂಪೊAದು ಮುಗಿಬಿದ್ದು ಹಲ್ಲೆಗೂ ಮುಂದಾಗುವ ಮೂಲಕ ರಾಜ್ಯದಲ್ಲಿ ಬಿಹಾರ ವಾತಾವರಣವನ್ನು ಸೃಷ್ಟಿ ಮಾಡಿದ್ದರು. 
ರಾಯಚೂರು ಜಿಲ್ಲೆಯ ಲಿಂಗಸಗೂರು ಮತ್ತು ಸುತ್ತಮುತ್ತ ತಾಲೂಕುಗಳಲ್ಲಿ 95 ಕಿ.ಮೀವರೆಗೆ ಪ್ರವಾಸ ನಡೆಸಿದ್ದರೂ ಅಂದಾಜುಗಳ ಸಮಿತಿಯ ಶಾಸಕರಿಗೆ ಪೊಲೀಸ್ ಅಧಿಕಾರಿಗಳು ಸಮರ್ಪಕವಾಗಿ ಬಂದೋಬಸ್ತ್ ಒದಗಿಸಿರಲಿಲ್ಲ. ಕಾಲುವೆಗಳ ಭೌತಿಕ ಪರಿಶೀಲನೆಗೆ 2022ರ ಮೇ 4 ಮತ್ತು 5ರಂದು ಕೈಗೊಂಡಿದ್ದ ಪ್ರವಾಸದ ವೇಳೆಯಲ್ಲಿ ಭದ್ರತಾ ವೈಫಲ್ಯವೂ ಕಂಡು ಬಂದಿತ್ತು.
 ಕಾಲುವೆಗಳ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡುತ್ತಿದ್ದಂತೆ ಗುತ್ತಿಗೆದಾರರ ಗುಂಪೊಂದು ಮುಗಿಬಿದ್ದು ಅವಾಚ್ಯ ಪದಗಳಿಂದ ನಿಂದಿಸಿರುವುದಲ್ಲದೆ ಶಾಸಕರುಗಳಿದ್ದ ವಾಹನಗಳ ಸಂಚಾರಕ್ಕೂ ಅಡ್ಡಿಯುಂಟು ಮಾಡಿರುವುದು ಮತ್ತು ಸದಸ್ಯರನ್ನೇ ಗುರಿಯಾಗಿಸಿಕೊಂಡು ನುಗ್ಗಿದ ಗುಂಪೊಂದು ಸಮಿತಿಯ ಸದಸ್ಯರನ್ನು ತಳ್ಳಾಡಿತ್ತು.
ಈ ಸಮಿತಿಯಲ್ಲಿ ಅಧ್ಯಕ್ಷ ಅಭಯ್ ಪಾಟೀಲ್ ಸೇರಿ ಒಟ್ಟು 15 ಮಂದಿ ಶಾಸಕರಿದ್ದರು. ಕಾಲುವೆಗಳ ಕಾಮಗಾರಿ ಭೌತಿಕ ಪರಿಶೀಲನೆಗೆ ಮುಂದಾಗುತ್ತಿದ್ದತೆ ಇದ್ದಕ್ಕಿದ್ದಂತೆ ಗುತ್ತಿಗೆದಾರರ ಗುಂಪೊAದು ಸಮಿತಿಯ ಸುತ್ತಲೂ ಘೇರಾಯಿಸಿ ಬೆದರಿಕೆಯನ್ನೂ ಒಡ್ಡಿತು ಮತ್ತು ಪರಿಶೀಲನೆಗೆ ಅಡ್ಡಿಯುಂಟು ಮಾಡಿತು. ಆದರೆ ಈ ವೇಳೆಯಲ್ಲಿ ಬೆರಳಣಿಕೆಯಷ್ಟು ಪೊಲೀಸರು ಇದ್ದುದ್ದರಿಂದಾಗಿ ಸಮಿತಿಯ ಸದಸ್ಯರ ಜೀವಕ್ಕೂ ಆಪತ್ತು ಬಂದೊದಗಿತ್ತು.
ನಾರಾಯಣಪುರ ಬಲದಂಡೆ ಮುಖ್ಯ ಕಾಲುವೆ, ಸೀಳುಗಾಲುವೆ ಸೇರಿದಂತೆ ಇನ್ನಿತರ ಕಾಮಗಾರಿಗಳನ್ನು ಡಿ.ವೈ.ಉಪ್ಪಾರ್ ಮತ್ತು ಎನ್.ಡಿ.ವಡ್ಡರ್ ಎಂಬ ಗುತ್ತಿಗೆದಾರರು ನಿರ್ವಹಿಸಿದ್ದರು ಎಂದು ತಿಳಿದು ಬಂದಿದೆ. ಈ ಪೈಕಿ ಎನ್.ಡಿ.ವಡ್ಡರ್ ಅವರು ಬಿಜೆಪಿಯ ಮಾಜಿ ಶಾಸಕ ಮಾನಪ್ಪವಜ್ಜಲ್ ಅವರ ಸಂಬಂಧಿ ಎಂದು ಹೇಳಲಾಗಿತ್ತು.
 ವಿಶೇಷವೆಂದರೆ ಸಮಿತಿ ಸದಸ್ಯರಿಗೆ ಬಂದೋಬಸ್ತ್ ಮತ್ತು ಭದ್ರತೆ ನೀಡಲು ನಿಯೋಜಿತವಾಗಿದ್ದ ಡಿವೈಎಸ್ಪಿ ಮಲ್ಲಿಕಾರ್ಜುನ ಸಾಲಿ ಎಂಬವರು ಪೊಲೀಸ್ ಸಬ್ 
ಇನ್‌ಸ್ಪೆಕ್ಟರ್ ನೇಮಕಾತಿಯ ಹಗರಣದಲ್ಲಿ ಭಾಗಿ ಆಗಿದ್ದಾರೆ ಎಂಬ ಆರೋಪದಡಿ ಸಮಿತಿ 
ಭೇಟಿ ನೀಡಿದ ದಿನದಂದೇ ಬಂಧನಕ್ಕೊಳಗಾಗಿದ್ದರು.
ನಾರಾಯಣಪುರ ಬಲದಂಡೆ ಮುಖ್ಯ ಕಾಲುವೆ, ಉಪ ಕಾಲುವೆ ಮತ್ತು ಸೀಳು ಕಾಲುವೆ ಕಾಮಗಾರಿಯು ಗುಣಮಟ್ಟದಿಂದ ಕೂಡಿಲ್ಲ. ಕಾಮಗಾರಿಗಳಲ್ಲಿ ಬೋಗಸ್ ಬಿಲ್ ಸೃಷ್ಟಿಸಿ ಅವ್ಯವಹಾರ ಎಸಗಲಾಗಿದೆ ಎಂದು ಸ್ಥಳೀಯ ಶಾಸಕರೂ ಸೇರಿದಂತೆ ಇನ್ನಿತರರು ಅಂದಾಜುಗಳ ಸಮಿತಿಗೆ ದೂರು ಸಲ್ಲಿಸಿತ್ತು. ಇದನ್ನಾಧರಿಸಿ ಸಮಿತಿಯು ಪ್ರವಾಸ ನಡೆಸಿ ಭೌತಿಕ ಪರಿಶೀಲನೆಗೆ 
ಮುಂದಾಗಿತ್ತು.

share
ಜಿ.ಮಹಾಂತೇಶ್
ಜಿ.ಮಹಾಂತೇಶ್
Next Story
X