ಗೂಡುದೀಪ ಪಂತ ಸಮಾರೋಪ: ವಿಜೇತರಿಗೆ ಬಹುಮಾನ ವಿತರಣೆ

ಮಂಗಳೂರು: ನಮ್ಮ ಕುಡ್ಲ ಸಂಸ್ಥೆ ವತಿಯಿಂದ ಕುದ್ರೋಳಿ ಗೋಕರ್ಣನಾಥ ದೇವಸ್ಥಾನದಲ್ಲಿ ನಡೆದ ಗೂಡು ದೀಪ ಪಂತದ ಸಮಾರೋಪ ಸಮಾರಂಭದಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ಶ್ರೀ ಧಾಮ ಮಾಣಿಲದ ಮೋಹನದಾಸ ಪರಮಹಂಸ ಸ್ವಾಮೀಜಿ, ಕಟೀಲಿನ ಕಮಲಾದೇವಿಪ್ರಸಾದ ಆಸ್ರಣ್ಣ ಆಶೀರ್ವಚನ ನೀಡಿದರು. ಸಾಂಪ್ರದಾಯಿಕ, ಆಧುನಿಕ ಮತ್ತು ಪ್ರತಿಕೃತಿ ವಿಭಾಗದ ಗೂಡುದೀಪ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಂಗಾರದ ಮತ್ತು ಬೆಳ್ಳಿ ಪದಕಗಳನ್ನು ಬಹುಮಾನವಾಗಿ ವಿತರಿಸಲಾಯಿತು.
ದಕ್ಷಿಣ ಕನ್ನಡ ಜಿಲ್ಲಾ ಮೊಗವೀರ ಮಹಾಸಭಾದ ಅಧ್ಯಕ್ಷ ಜಯ ಸಿ. ಕೋಟ್ಯಾನ್ ಬೆಳ್ಳಂಪಳ್ಳಿ ಅವರಿಗೆ ನಮ್ಮ ಕುಡ್ಲ ಪ್ರಶಸಿತಿ, ಜಾಗತಿಕ ಬಂಟರ ಸಂಘಗಳ ಒಕ್ಕೂಟ ಅಧ್ಯಕ್ಷ ಐಕಳ ಹರೀಶ ಶೆಟ್ಟಿ ಅವರಿಗೆ ನಮ್ಮ ತುಳುವೆರ್ ಪ್ರಶಸ್ತಿ ಮತ್ತು ಉಡುಪಿ ಯಕ್ಷಗಾನ ಕಲಾರಂಗ ಸಂಸ್ಥೆಗೆ ಬಿ. ಪಿ. ಕರ್ಕೇರ ಪ್ರಶಸ್ತಿಪ್ರದಾನ ಮಾಡಲಾಯಿತು. ಯಕ್ಷಗಾನ ಕಲಾರಂಗ ಪರವಾಗಿ ಅಧ್ಯಕ್ಷ ಎಂ. ಗಂಗಾಧರ ರಾವ್ ಮತ್ತು ಕಾರ್ಯದರ್ಶಿ ಮುರಲಿ ಕಡೆಕಾರ್ ಪ್ರಶಸ್ತಿ ಸ್ವೀಕರಿಸಿದರು.
ಶಾಸಕ ವೇದವ್ಯಾಸ ಕಾಮತ್, ಮಾಜಿ ಸಚಿವ ಬಿ. ರಮಾನಾಥ ರೈ, ದ.ಕ. ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಸುಚರಿತ ಶೆಟ್ಟಿ, ಮಾಜಿ ಮೇಯರ್ ಪ್ರೇಮಾನಂದ ಶೆಟ್ಟಿ, ಚಾರ್ಟರ್ಡ್ ಅಕೌಂಟೆಂಟ್ ಎಸ್. ಎಸ್. ನಾಯಕ್, ಉದ್ಯಮಿ ವರದರಾಜ ಪೈ, ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿಯವರ ಪುತ್ರ ಸಂತೋಷ ಜೆ. ಪೂಜಾರಿ, ಕುದ್ರೋಳಿ ಕ್ಷೇತ್ರದ ಆಡಳಿತ ಮಂಡಳಿ ಅಧ್ಯಕ್ಷ ಎಚ್. ಎಸ್. ಸಾಯಿರಾಮ್, ಕೋಶಾಕಾರಿ ಆರ್. ಪದ್ಮರಾಜ್, ಕುದ್ರೋಳಿ ಕ್ಷೇತ್ರಾಭಿವೃದ್ಧಿ ಸಮಿತಿ ಅಧ್ಯಕ್ಷ ದೇವೇಂದ್ರ ಪೂಜಾರಿ ಮತ್ತು ಸದಸ್ಯರು, ಸೂರ್ಯ ಕಾಂತ್ ಜೆ. ಸುವರ್ಣ, ಶೇಖರ ಪೂಜಾರಿ ಅತಿಥಿಗಳಾಗಿದ್ದರು.
ನಮ್ಮ ಕುಡ್ಲ ಸಂಸ್ಥೆಯ ನಿರ್ದೇಶಕರಾದ ಹರೀಶ್ ಬಿ. ಕರ್ಕೇರ, ಸಂತೋಷ್ ಬಿ. ಕರ್ಕೇರ, ಮೋಹನ್ ಬಿ. ಕರ್ಕೇರ, ಲೀಲಾಕ್ಷ ಬಿ. ಕರ್ಕೇರ, ಸಂತೋಷ್ ಬಿ. ಕರ್ಕೇರ, ಸಂಸ್ಥೆಯ ಭಾಸ್ಕರ ರೈ ಕುಕ್ಕುವಳ್ಳಿ, ಪ್ರೊ. ಎಂ. ಎಸ್. ಕೋಟ್ಯಾನ್, ದಯಾನಂದ ಕಟೀಲ್, ಜಯಾ ರಮೇಶ್ ರೈ, ಡಾ. ಪ್ರಿಯಾ ಹರೀಶ್, ಸುರೇಖಾ ಶೆಟ್ಟಿ ಉಪಸ್ಥಿತರಿದ್ದರು.
ಕದ್ರಿ ನವನೀತ ಶೆಟ್ಟಿ ಸ್ವಾಗತಿಸಿದರು. ನಿತಿನ್ ಸಾಲ್ಯಾನ್ ಕಾರ್ಯಕ್ರಮ ನಿರ್ವಹಿಸಿದರು. ಲೀಲಾಕ್ಷ ಬಿ. ಕರ್ಕೇರ ವಂದಿಸಿದರು.







