Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಪ್ರವರ್ಗ 2 'ಬಿ' ಮೀಸಲಾತಿ ಶೇ.8ಕ್ಕೆ...

ಪ್ರವರ್ಗ 2 'ಬಿ' ಮೀಸಲಾತಿ ಶೇ.8ಕ್ಕೆ ಹೆಚ್ಚಿಸಲು ಹಿಂದುಳಿದ ವರ್ಗಗಳ ಆಯೋಗಕ್ಕೆ ಮನವಿ

ವಾರ್ತಾಭಾರತಿವಾರ್ತಾಭಾರತಿ25 Oct 2022 6:44 PM IST
share
ಪ್ರವರ್ಗ 2 ಬಿ ಮೀಸಲಾತಿ ಶೇ.8ಕ್ಕೆ ಹೆಚ್ಚಿಸಲು ಹಿಂದುಳಿದ ವರ್ಗಗಳ ಆಯೋಗಕ್ಕೆ ಮನವಿ

ಬೆಂಗಳೂರು: ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದಿರುವ ಮುಸ್ಲಿಮ್ ಸಮುದಾಯಕ್ಕೆ ರಾಜ್ಯ ಸರಕಾರವು ಪ್ರವರ್ಗ 2 ಬಿ ಯಲ್ಲಿ ನೀಡಿರುವ ಶೇಕಡಾ 4 ರ ಮೀಸಲಾತಿಯನ್ನು ಶೇಕಡಾ 8ಕ್ಕೆ ಏರಿಸಲು ಸರಕಾರಕ್ಕೆ ಶಿಫಾರಸ್ಸು ಮಾಡಬೇಕು ಎಂದು ಕರ್ನಾಟಕ ಮುಸ್ಲಿಮ್ ಯುನಿಟಿ ಸಂಘಟನೆಯು ಒತ್ತಾಯಿಸಿದೆ.

ಬೆಂಗಳೂರಿನಲ್ಲಿ ಮಂಗಳವಾರ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ ಹೆಗ್ಡೆ ಅವರನ್ನು ಭೇಟಿಯಾದ ಸಂಘಟನೆಯ ಸಂಚಾಲಕರಾದ ಜಬ್ಬಾರ್ ಕಲ್ಬುರ್ಗಿ ಮತ್ತು ಪತ್ರಕರ್ತ ಬಿ.ಎಂ.ಹನೀಫ್ ನೇತೃತ್ವದ ನಿಯೋಗವು ಈ ನಿಟ್ಟಿನಲ್ಲಿ ವಿಸ್ತ್ರತವಾದ ಮನವಿ ಪತ್ರವನ್ನು ನೀಡಿತು. ಆಯೋಗದ ಸದಸ್ಯೆ ಶಾರದಾ ನಾಯಕ್ ಅವರೂ ಈ ಸಂದರ್ಭದಲ್ಲಿ ಹಾಜರಿದ್ದರು.

ಮನವಿ ಪತ್ರವನ್ನು ಸ್ವೀಕರಿಸಿ ನಿಯೋಗದ ಸದಸ್ಯರ ಜೊತೆ ಚರ್ಚೆ ನಡೆಸಿದ ಜಯಪ್ರಕಾಶ್ ಹೆಗ್ಡೆ ಅವರು, ತಾವು ಅಧ್ಯಕ್ಷರಾದ ಬಳಿಕ ಇದೇ ಮೊದಲ ಬಾರಿಗೆ ಮುಸ್ಲಿಮರ ನಿಯೋಗವೊಂದು ಅಧಿಕೃತವಾಗಿ ಭೇಟಿಯಾಗಿ ಮನವಿ ಅರ್ಪಿಸಿದೆ. ಮನವಿಯನ್ನು ಸಹಾನುಭೂತಿಯಿಂದ ಪರಿಶೀಲಿಸಿ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಹೇಳಿದರು.

"ರಾಜ್ಯ ಸರಕಾರವು ಈ ಹಿಂದೆ ನೇಮಿಸಿದ ಹಿಂದುಳಿದ ವರ್ಗಗಳ ಎಲ್ಲ ಆಯೋಗಗಳೂ ಮುಸ್ಲಿಮರು ತೀವ್ರ ಹಿಂದುಳಿದ ಸಮುದಾಯವೆಂದು ಗುರುತಿಸಿದೆ. ಕಾಂತರಾಜು ಅಧ್ಯಕ್ಷತೆಯ ಆಯೋಗವು ರಾಜ್ಯದಲ್ಲಿ ಮುಸ್ಲಿಮರ ಜನಸಂಖ್ಯೆಯು ಶೇಕಡಾ 16 ರಷ್ಟು ಇದೆ ಎಂದು ಗುರುತಿಸಿದೆ. ಈ ಜನಸಂಖ್ಯೆ ಮತ್ತು ಹಿಂದುಳಿದಿರುವಿಕೆಗೆ ಅನುಗುಣವಾಗಿ 2 ಬಿ ಪ್ರವರ್ಗದ ಮೀಸಲಾತಿಯನ್ನು ಶೇಕಡಾ 8 ಕ್ಕೆ ಹೆಚ್ಚಿಸಬೇಕಾದ ಅಗತ್ಯವಿದೆ. ಮುಸ್ಲಿಮರ ಹಿಂದುಳಿದಿರುವಿಕೆಯ ಸದ್ಯದ ಸ್ಥಿತಿ ಗತಿಯನ್ನು ತಿಳಿದುಕೊಳ್ಳಲು ಅಗತ್ಯ ಬಿದ್ದರೆ ಪ್ರತ್ಯೇಕ ಸಮೀಕ್ಷೆಯನ್ನು ನಡೆಸಬೇಕು" ಎಂದು ನಿಯೋಗದ ಸದಸ್ಯರು ಒತ್ತಾಯಿಸಿದ್ದಾರೆ.

ನಿಯೋಗದಲ್ಲಿ ರಿಯಾಜ್ ಮುಲ್ಲಾ, ಮೌಲಾನಾ ಮಹಮ್ಮದ್ ಯೂನುಸ್, ಎಂ.ಎಲ್.ಸರ್ಕಾವಸ್, ನಝೀರ್ ಹರ್ಕಾರಿ, ಅಲ್ತಾಫ್ ಕಲ್ಬುರ್ಗಿ ಮತ್ತು ಚಿಕ್ಕಮಗಳೂರಿನ ಕೆ.ಎ.ಇಮ್ದಾದ್ ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X