ಮಂಗಳೂರು: ಲಾರಿ ಢಿಕ್ಕಿ; ಓರ್ವ ವ್ಯಕ್ತಿ ಮೃತ್ಯು
ಮಂಗಳೂರು: ನಗರದ ಕೊಟ್ಟಾರ ಚೌಕಿಯಲ್ಲಿ ಇಂದು ಮುಂಜಾನೆ ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟ ಬಗ್ಗೆ ವರದಿಯಾಗಿದೆ.
ಮೃತ ವ್ಯಕ್ತಿಯನ್ನು ಆಕಾಶಭವನದ ಅಶೋಕ್ (45) ಎಂದು ಗುರುತಿಸಲಾಗಿದೆ. ಅಶೋಕ್ ಅವರು ತನ್ನ ಆ್ಯಕ್ಟಿವಾ ದ್ವಿಚಕ್ರ ವಾಹನವನ್ನು ರಸ್ತೆ ಪಕ್ಕ ನಿಲ್ಲಿಸಿ ರಸ್ತೆ ದಾಟುತ್ತಿದ್ದ ವೇಳೆ ಅತೀ ವೇಗ ಮತ್ತು ಅಜಾಗರೂಕತೆಯಿಂದ ಹರ್ಯಾಣ ರಾಜ್ಯದ ನೋಂದಣಿ ಹೊಂದಿದ್ದ ಲಾರಿಯು ಢಿಕ್ಕಿ ಹೊಡೆಯಿತು ಎನ್ನಲಾಗಿದೆ.
ಇದರಿಂದ ಅಶೋಕ್‌ಗೆ ಗಂಭೀರ ಗಾಯವಾಗಿದ್ದು, ತಕ್ಷಣ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಪರೀಕ್ಷಿಸಿದ ವೈದ್ಯರು ಅಶೋಕ್ ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ ಎಂದು ಪ್ರಕರಣ ದಾಖಲಿಸಿರುವ ಸಂಚಾರ ಉತ್ತರ ಠಾಣೆಯ ಪೊಲೀಸರು ತಿಳಿಸಿದ್ದಾರೆ.
Next Story