Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರಾಜ್ಯದಲ್ಲಿ ಬಿ.ಟಿ. ಹತ್ತಿ ಪ್ರಯೋಗಕ್ಕೆ...

ರಾಜ್ಯದಲ್ಲಿ ಬಿ.ಟಿ. ಹತ್ತಿ ಪ್ರಯೋಗಕ್ಕೆ ಪ್ರಸ್ತಾವ

ಜಿ.ಮಹಾಂತೇಶ್ಜಿ.ಮಹಾಂತೇಶ್26 Oct 2022 8:29 AM IST
share
ರಾಜ್ಯದಲ್ಲಿ ಬಿ.ಟಿ. ಹತ್ತಿ ಪ್ರಯೋಗಕ್ಕೆ ಪ್ರಸ್ತಾವ

ಬೆಂಗಳೂರು , ಅ.25: ಮಹಾರಾಷ್ಟ್ರ ಹೈಬ್ರಿಡ್ಸ್ ಸೀಡ್ ಕಂಪೆನಿ ಲಿಮಿಟೆಡ್ (ಮಹಿಕೋ)ಯು ಬೋಲ್ಗಾರ್ಡ್ ಬಿಟಿ ಹತ್ತಿ ತಳಿಯ ಮಾರ್ಪಾಡಿತ ಬಿ.ಟಿ. ಹತ್ತಿಯ  ಜೈವಿಕ ಸುರಕ್ಷತೆ ಸಂಶೋಧನಾ ಮಟ್ಟ,  ಕೀಟ ಮತ್ತು ಕಳೆ ನಿರ್ವಹಣೆ ಹಾಗೂ ಜೈವಿಕ ದಕ್ಷತೆಯನ್ನು ರಾಜ್ಯದಲ್ಲಿ ಪ್ರಯೋಗ ಮಾಡಲು ಸರಕಾರಕ್ಕೆ ಪ್ರಸ್ತಾವ ಸಲ್ಲಿಸಿರುವುದು ಇದೀಗ ಬಹಿರಂಗವಾಗಿದೆ.

 ಈ ಕುರಿತು 2022ರ ಮಾರ್ಚ್ 9ರಂದೇ ಸರಕಾರಕ್ಕೆ ಪತ್ರವನ್ನು ಬರೆದಿರುವ ಕಂಪೆನಿಯು ರಾಜ್ಯದಲ್ಲಿ ಪ್ರಯೋಗ ಮಾಡಲು ನಿರಾಕ್ಷೇಪಣಾ ಪತ್ರ ನೀಡಲು ಕೋರಿದೆ. ಈ ಕುರಿತು ತೀರ್ಮಾನ ಕೈಗೊಳ್ಳಲು ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ 2022ರ ಜುಲೈ 4ರಂದು ಸಭೆ ನಡೆದಿದೆ.
 ಮಹಿಕೋ ಕಂಪೆನಿಯು ದೇಶದಲ್ಲಿ ಇದೇ ಮೊದಲ ಬಾರಿಗೆ ಬೋಲ್ಗಾರ್ಡ್ ಬಿ.ಟಿ. ಹತ್ತಿ ಮತ್ತು ಬೋಲ್ಗಾರ್ಡ್ II ಬಿ.ಟಿ. ಹತ್ತಿಯನ್ನು ಪರಿಚಯಿಸುತ್ತಿದೆ. ಇದು  ಹತ್ತಿ ಹುಳುಗಳನ್ನು ನಿರ್ವಹಿಸುವ ಭಾರತದ ರೈತರಿಗೆ ಪರಿಣಾಮಕಾರಿಯಾಗಿ ಉಪಯೋಗವಾಗಲಿದೆ. ಅಲ್ಲದೆ ಮುಂದಿನ ಪೀಳಿಗೆಗೆ ಜಿಎಂ ಕಾಟನ್ ತಂತ್ರಜ್ಞಾನವನ್ನೂ ಪರಿಚಯಿಸುತ್ತಿದೆ. ಇದಕ್ಕೆ ಬೋಲ್ಗಾರ್ಡ್ ರೌಂಡ್ ಅಪ್ ರೆಡಿ ಫ್ಲೆಕ್ಸ್ ಬಿ.ಟಿ. ಹತ್ತಿ ಎಂದು ಹೆಸರಿಡಲಾಗಿದೆ.
 2007, 2008, 2009ರಲ್ಲಿಯೂ ಜೈವಿಕ ತಂತ್ರಜ್ಞಾನ ಮಂಡಳಿಯ ಅನುಮತಿ ಪಡೆದು ಈ ಹಿಂದೆಯೂ ಬಿಜಿಆರ್‌ಆರ್‌ಎಫ್ ಮತ್ತು ಆರ್‌ಆರ್‌ಎಫ್ ತಳಿಯ ಹತ್ತಿ ಬೆಳೆ ಪ್ರಯೋಗಕ್ಕೆ ಒಡ್ಡಲಾಗಿತ್ತು. ಹೀಗಾಗಿ  ಹೊಸದಾಗಿ ಪರಿಚಯಿಸುತ್ತಿರುವ ಬಿ.ಟಿ. ಹತ್ತಿಯ  ಜೈವಿಕ ಸುರಕ್ಷತೆ ಸಂಶೋಧನಾ ಮಟ್ಟ,  ಕೀಟ ಮತ್ತು ಕಳೆ ನಿರ್ವಹಣೆ ಹಾಗೂ ಜೈವಿಕ ದಕ್ಷತೆಯನ್ನು ರಾಜ್ಯದಲ್ಲಿ ಪ್ರಯೋಗ ಮಾಡಲು ಮಂಡಳಿಯು ಅನುಮತಿ ನೀಡಬೇಕು ಎಂದು ಕಂಪೆನಿ ಕೋರಿದೆ ಎಂದು ತಿಳಿದು ಬಂದಿದೆ.
‘ರಾಜ್ಯದಲ್ಲಿ ಜೈವಿಕ ಸಂಶೋಧನೆ, ಸಂಶೋಧನೆಯ 2ನೇ ಹಂತದ ಪ್ರಯೋಗ ಮಾಡಲು ಉದ್ದೇಶಿಸಿದೆ. ಜೈವಿಕ ಸುರಕ್ಷತೆ ಸಂಶೋಧನಾ ಮಟ್ಟ,  ಕೀಟ ಮತ್ತು ಕಳೆ ನಿರ್ವಹಣೆ ಹಾಗೂ   ಜೈವಿಕ ದಕ್ಷತೆ, ಸಾಮಾಜಿಕ, ಆರ್ಥಿಕ ಲಾಭಗಳು ಕುರಿತಾಗಿ ಪ್ರಯೋಗಕ್ಕೆ ಒಡ್ಡಬೇಕಿದೆ,’ಎಂದು ಪತ್ರದಲ್ಲಿ ವಿವರಿಸಿದೆ. ಕಂಪೆನಿಯು ಹೊಸದಾಗಿ ಪರಿಚಯಿಸುತ್ತಿರುವ ಬಿ.ಟಿ. ಹತ್ತಿಯ ತಳಿಯನ್ನು ರಾಯಚೂರು, ಧಾರವಾಡ ಕೃಷಿ ವಿಶ್ವವಿದ್ಯಾನಿಲಯದಲ್ಲಿ ಪ್ರಯೋಗ ಮಾಡಲು ಮುಂದಾಗಿದೆ.
 ಬೀಜ ಅಧಿನಿಯಮ 1966ರ ಸೆಕ್ಷನ್ 14(1)ರ ಅನ್ವಯ ರಾಜ್ಯಾದ್ಯಂತ ಮಹಿಕೋ ಕಂಪೆನಿಯ ಬಿ.ಟಿ.ಹತ್ತಿ ಬೀಜದ ಮಾರಾಟವನ್ನು ನಿಷೇಧಿಸಿ ಕೃಷಿ ಇಲಾಖೆ ನಿರ್ದೇಶಕರು 2014ರಲ್ಲೇ ಆದೇಶ ಹೊರಡಿಸಲಾಗಿತ್ತು. ಇದಲ್ಲದೇ ಕೃಷಿ ಇಲಾಖೆಯ ಬೀಜ ಪೂರೈಕೆಯ ಟೆಂಡರ್ ಪ್ರಕ್ರಿಯೆಯಲ್ಲಿ ಭಾಗವಹಿಸದಂತೆ ಕಪ್ಪು ಪಟ್ಟಿಯಲ್ಲಿ ಸೇರಿಸಿದ್ದನ್ನು ಸ್ಮರಿಸಬಹುದು. ಯಾವುದೇ ಬೀಜ ಮಾರಾಟಗಾರರು ಮಹಿಕೋ ಕಂಪೆನಿಯ ಬಿ.ಟಿ.ಹತ್ತಿ ಬೀಜವನ್ನು ಮುಂದಿನ ಆದೇಶದವರೆಗೆ ಮಾರಾಟ ಮಾಡಬಾರದೆಂದು ಎಚ್ಚರಿಸಿದ್ದರು. ಅದೇರೀತಿ ರೈತರು ಸಹ ಮಹಿಕೋ ಕಂಪೆನಿಯ ಬಿ.ಟಿ.ಹತ್ತಿ ಬೀಜ ಖರೀದಿಸಬಾರದೆಂದು ಕೋರಿದ್ದರು. 2013ರ ಮುಂಗಾರು ಹಂಗಾಮಿನಲ್ಲಿ ಮಹಿಕೋ ಕಂಪೆನಿಯ ಬಿ.ಟಿ.ಹತ್ತಿ ಬೀಜದ ಇಳುವರಿ ಶೇ.50ಕ್ಕಿಂತ ಕಡಿಮೆ ಕೊಟ್ಟಿರುವ ಹಿನ್ನೆಲೆಯಲ್ಲಿ ಕೃಷಿ ನಿರ್ದೇಶಕರು ಈ ಆದೇಶ ಹೊರಡಿಸಿದ್ದನ್ನು ಸ್ಮರಿಸಬಹುದು.

share
ಜಿ.ಮಹಾಂತೇಶ್
ಜಿ.ಮಹಾಂತೇಶ್
Next Story
X