ಮಂಗಳೂರು : ಹ್ಯಾಮಿಲ್ಟನ್ ವೃತ್ತದಲ್ಲಿ ಸೌಹಾರ್ದ ದೀಪಾವಳಿ ಆಚರಣೆ
ಮಂಗಳೂರು: ದೀಪಾವಳಿಯನ್ನು ಸೌಹಾರ್ದ ದೀಪಾವಳಿಯನ್ನಾಗಿ ಆಚರಿಸಬೇಕೆಂಬ ತೀರ್ಮಾನದ ಭಾಗವಾಗಿ ʼಸಮಾನ ಮನಸ್ಕರು ಮಂಗಳೂರುʼ ಇದರ ಆಶ್ರಯದಲ್ಲಿ ಇಂದು ನಗರದ ಸ್ಟೇಟ್ ಬ್ಯಾಂಕ್ ಬಳಿಯಲ್ಲಿರುವ ಹ್ಯಾಮಿಲ್ಟನ್ ವೃತ್ತದಲ್ಲಿ ಸೌಹಾರ್ದ ದೀಪಾವಳಿಯನ್ನು ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಮಾಜಿ ಮೇಯರ್ ಶಶಿಧರ್ ಹೆಗ್ಡೆ, DYFI ನಾಯಕ ಮುನೀರ್ ಕಾಟಿಪಳ್ಳ, ಮಾಜಿ ಉಪಮೇಯರ್ ಮಹಮ್ಮದ್ ಕುಂಜತ್ತಬೈಲ್, ಸ್ಥಳೀಯ ಕಾರ್ಪೊರೇಟರ್ ಅಬ್ದುಲ್ ಲತೀಫ್, ಕಾರ್ಮಿಕ ನಾಯಕರಾದ ಸುನಿಲ್ ಕುಮಾರ್ ಬಜಾಲ್, ಸಾಮರಸ್ಯ ಮಂಗಳೂರಿನ ಮಂಜುಳಾ ನಾಯಕ್, ಸಮರ್ಥ್ ಭಟ್, ಯುವಜನ ನಾಯಕರಾದ ಸಂತೋಷ್ ಬಜಾಲ್, ನವೀನ್ ಕೊಂಚಾಡಿ, ಮನೋಜ್ ವಾಮಂಜೂರು, ತಯ್ಯೂಬ್ ಬೆಂಗರೆ, ಸಾಮಾಜಿಕ ಚಿಂತಕರಾದ ಅಸುಂತ ಡಿಸೋಜ, ಕ್ವೀನಿ ಪರ್ಸಿ ಆನಂದ್ ಮುಂತಾದವರು ಹಾಜರಿದ್ದರು.
ಖ್ಯಾತ ಹಾಡುಗಾರ್ತಿ ಮೇಘನಾ ಕುಂದಾಪುರ ಸೌಹಾರ್ದ ಹಾಡುಗಳನ್ನು ಹಾಡಿದರು.
Next Story