'ಹೆಡ್ ಬುಷ್' ಚಿತ್ರದ ನಿರ್ಮಾಪಕರು, ನಿರ್ದೇಶಕರು ಮರು ಚಿಂತನೆ ನಡೆಸುವುದು ಸೂಕ್ತ: ಸಚಿವ ಸುನಿಲ್ ಕುಮಾರ್
ವೀರಗಾಸೆ ಕುಣಿತಕ್ಕೆ ಅವಮಾನ ಆರೋಪ

ಬೆಂಗಳೂರು: ಡಾಲಿ ಧನಂಜಯ್ ನಟನೆಯ ಮತ್ತು ನಿರ್ಮಾಣದ 'ಹೆಡ್ ಬುಶ್' ಚಿತ್ರದ ಒಂದು ದೃಶ್ಯದಲ್ಲಿ ವೀರಗಾಸೆಗೆ ಅವಮಾನ ಆಗಿದೆ ಎಂಬ ಆರೋಪಕ್ಕೆ ಸಂಬಂಧಿಸಿ ಕನ್ನಡ–ಸಂಸ್ಕೃತಿ ಮತ್ತು ಇಂಧನ ಸಚಿವ ಸುನಿಲ್ ಕುಮಾರ್ ಪ್ರತಿಕ್ರಿಯಿಸಿದ್ದಾರೆ.
ಈ ಸಂಬಂಧ ಸದ್ದಿಗಾರರೊಂದಿಗೆ ಮಾತನಾಡಿದ ಅವರು, 'ಹೆಡ್ ಬುಷ್ ಚಿತ್ರದಲ್ಲಿ ವೀರಗಾಸೆ ಕುಣಿತಕ್ಕೆ ಅಪಮಾನವಾಗಿದೆ ಎಂಬ ಚರ್ಚೆ ಮಾಧ್ಯಮ ಹಾಗೂ ಜಾಲತಾಣದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ವೀರಗಾಸೆ ಕನ್ನಡದ ಹೆಮ್ಮೆಯ ಜಾನಪದ ಪರಂಪರೆ. ಚಲನಚಿತ್ರವೂ ಸೇರಿದಂತೆ ಯಾವುದೇ ಮನೋರಂಜನಾ ಮಾಧ್ಯಮದಿಂದ ಜಾನಪದ ಸಂಸ್ಕೃತಿಗೆ ಅವಮಾನವಾಗದಂತೆ ನೋಡಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿ' ಎಂದು ಹೇಳಿದ್ದಾರೆ.
'ಒಂದೊಮ್ಮೆ ಹೆಡ್ ಬುಷ್ ಚಿತ್ರದಲ್ಲಿ ವೀರಗಾಸೆಗೆ ಅಪಮಾನವಾದರೆ ನಿರ್ಮಾಪಕರು ಹಾಗೂ ನಿರ್ದೇಶಕರು ಮರು ಚಿಂತನೆ ನಡೆಸುವುದು ಸೂಕ್ತ' ಎಂದು ಸಲಹೆ ನೀಡಿದ್ದಾರೆ.
ಹೆಡ್ ಬುಷ್ ಸಿನೆಮಾದಲ್ಲಿನ ವೀರಗಾಸೆ ಕಲೆಗೆ ಅಪಮಾನವಾಗುವ ದೃಶ್ಯಗಳನ್ನು ಮರು ಚಿತ್ರೀಕರಣ ಮಾಡಬೇಕು
— SAMEERISM (@SameerDalasanur) October 27, 2022
-ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ #SunilKumar@Dhananjayaka #Dhananjay #KannadaMovie #KannadaAndCultureDepartment #DaaliDhananjay #HeadBush #WeAreWithDhananjaya pic.twitter.com/TZIDkWiJqp







