Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಂಧನ ಹಿಂಪಡೆಯುವಂತೆ ಕೋರಿದ್ದ...

ಬಂಧನ ಹಿಂಪಡೆಯುವಂತೆ ಕೋರಿದ್ದ ಅಮಾನತುಗೊಂಡ ಬಿಜೆಪಿ ಶಾಸಕ ರಾಜಾ ಸಿಂಗ್‌ ಮನವಿ ತಿರಸ್ಕರಿಸಿದ ಸರಕಾರ

27 Oct 2022 2:47 PM IST
share
ಬಂಧನ ಹಿಂಪಡೆಯುವಂತೆ ಕೋರಿದ್ದ ಅಮಾನತುಗೊಂಡ ಬಿಜೆಪಿ ಶಾಸಕ ರಾಜಾ ಸಿಂಗ್‌ ಮನವಿ ತಿರಸ್ಕರಿಸಿದ ಸರಕಾರ

ಹೈದರಾಬಾದ್: ಜೈಲಿನಲ್ಲಿರುವ ಶಾಸಕ ಟಿ .ರಾಜಾ ಸಿಂಗ್ ಬಂಧನ ಆದೇಶವನ್ನು ಹಿಂಪಡೆಯಲು ಮಾಡಿದ ಮನವಿಯನ್ನು ತೆಲಂಗಾಣ ಸರ್ಕಾರ ಬುಧವಾರ ತಿರಸ್ಕರಿಸಿದೆ ಎಂದು Thenewsminute ವರದಿ ಮಾಡಿದೆ.

"ಸರ್ಕಾರವು ಪ್ರಾತಿನಿಧ್ಯವನ್ನು ಎಚ್ಚರಿಕೆಯಿಂದ ಪರಿಶೀಲಿಸಿದ ನಂತರ, ಬಂಧನ ಆದೇಶಗಳನ್ನು ರದ್ದುಗೊಳಿಸಲು/ಹಿಂತೆಗೆದುಕೊಳ್ಳಲು ಯಾವುದೇ ಮಾನ್ಯ ಆಧಾರಗಳು ಮತ್ತು ಕಾರಣಗಳಿಲ್ಲ ಎಂದು ಗಮನಿಸಿದೆ" ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ಸಿಂಗ್ ಪರ ವಕೀಲ ಕೆ. ಕರುಣಾ ಸಾಗರ್ ಅವರು, ನಿರಾಕರಣೆಯ ಆದೇಶ ಅಂತಿಮವಲ್ಲ ಮತ್ತು ಈ ಕುರಿತು ಹೈಕೋರ್ಟ್‌ನಲ್ಲಿ ಪ್ರಶ್ನಿಸಲಾಗುವುದು ಎಂದು ಹೇಳಿದರು. "ಈ ಆದೇಶವು ಬಾಕಿ ಉಳಿದಿರುವ ರಿಟ್ ಅರ್ಜಿಯ ಮೇಲೆ ಪರಿಣಾಮ ಬೀರುವುದಿಲ್ಲ" ಎಂದು ಅವರು ಹೇಳಿದರು.

ಪ್ರವಾದಿ ಮುಹಮ್ಮದ್ ರವರ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಕ್ಕಾಗಿ ಸಿಂಗ್ ನನ್ನು ಆಗಸ್ಟ್ 25 ರಂದು ಬಂಧಿಸಲಾಗಿತ್ತು. ಇದು ಹೈದರಾಬಾದ್‌ನಲ್ಲಿ ದೊಡ್ಡ ಪ್ರಮಾಣದ ಪ್ರತಿಭಟನೆಗೆ ಕಾರಣವಾಗಿತ್ತು. ಆತನನ್ನು ಪಕ್ಷದಿಂದ ಅಮಾನತು ಕೂಡ ಮಾಡಲಾಗಿತ್ತು. ಆಗಸ್ಟ್ 20 ರಂದು ಹೈದರಾಬಾದ್‌ನಲ್ಲಿ ನಡೆದ ಹಾಸ್ಯನಟ ಮುನವರ್ ಫಾರುಕಿ ಅವರ ಕಾರ್ಯಕ್ರಮಕ್ಕೆ ಪ್ರತಿಕ್ರಿಯೆಯಾಗಿ ಪೋಸ್ಟ್ ಮಾಡಿದ್ದ ವೀಡಿಯೋದ ಭಾಗದಲ್ಲಿ ಸಿಂಗ್‌ ಹೇಳಿಕೆ ವಿವಾದಕ್ಕೀಡಾಗಿತ್ತು.

ಸೆಪ್ಟೆಂಬರ್ 29 ರಂದು, ಸಿಂಗ್ ಪತ್ನಿ ಉಷಾ ಬಾಯಿ ಅವರು ಬಂಧನ ಆದೇಶವನ್ನು ಹಿಂಪಡೆಯಲು ಮನವಿ ಮಾಡಿದ್ದರು ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ಅಕ್ಟೋಬರ್ 20 ರಂದು, ರಾಜಾ ಸಿಂಗ್‌ನನ್ನು ಬಿಡುಗಡೆ ಮಾಡಬೇಕೆಂದು ಅವರು ತೆಲಂಗಾಣ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು ಎಂದು ದಿ ಹಿಂದೂ ವರದಿ ಮಾಡಿದೆ. ನ್ಯಾಯಮೂರ್ತಿಗಳಾದ ಎ ಅಭಿಷೇಕ್ ರೆಡ್ಡಿ ಮತ್ತು ಜುವ್ವಾದಿ ಶ್ರೀದೇವಿ ಅವರನ್ನೊಳಗೊಂಡ ಪೀಠವು ಅಕ್ಟೋಬರ್ 28 ರೊಳಗೆ ಪ್ರತಿ ಅಫಿಡವಿಟ್ ಸಲ್ಲಿಸುವಂತೆ ಸರ್ಕಾರಕ್ಕೆ ಸೂಚಿಸಿದೆ.

ಈ ನಡುವೆ, 2004 ರಿಂದ ರಾಜಾ ಸಿಂಗ್ ವಿರುದ್ಧ 101 ಕ್ರಿಮಿನಲ್ ಪ್ರಕರಣಗಳಿವೆ, ಅವುಗಳಲ್ಲಿ 18 ಕೋಮು ಅಪರಾಧಗಳಾಗಿವೆ ಎಂದು ಉಷಾ ಬಾಯಿ ಅವರ ಮನವಿಯನ್ನು ಹೈದರಾಬಾದ್ ಪೊಲೀಸರು ಬುಧವಾರ ವಿರೋಧಿಸಿದ್ದಾರೆ ಎಂದು ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

share
Next Story
X