Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರು: ಜೆಡಿಎಸ್ ಪಂಚರತ್ನ...

ಬೆಂಗಳೂರು: ಜೆಡಿಎಸ್ ಪಂಚರತ್ನ ರಥಯಾತ್ರೆಗೆ ಸಾಂಕೇತಿಕ ಚಾಲನೆ ನೀಡಿದ ಮಾಜಿ ಸಿಎಂ ಕುಮಾರಸ್ವಾಮಿ

'ನವೆಂಬರ್ 1ರಿಂದ ಮುಳಬಾಗಿಲಿನಿಂದ ಪೂರ್ಣ ಪ್ರಮಾಣದಲ್ಲಿ ರಥಯಾತ್ರೆ ಆರಂಭವಾಗಲಿದೆ'

27 Oct 2022 4:05 PM IST
share
ಬೆಂಗಳೂರು: ಜೆಡಿಎಸ್ ಪಂಚರತ್ನ ರಥಯಾತ್ರೆಗೆ ಸಾಂಕೇತಿಕ ಚಾಲನೆ ನೀಡಿದ ಮಾಜಿ ಸಿಎಂ ಕುಮಾರಸ್ವಾಮಿ
'ನವೆಂಬರ್ 1ರಿಂದ ಮುಳಬಾಗಿಲಿನಿಂದ ಪೂರ್ಣ ಪ್ರಮಾಣದಲ್ಲಿ ರಥಯಾತ್ರೆ ಆರಂಭವಾಗಲಿದೆ'

ಬೆಂಗಳೂರು: ಜೆಡಿಎಸ್‍ ನ ಮಹತ್ವಾಕಾಂಕ್ಷೆಯ ಪಂಚರತ್ನ ರಥಯಾತ್ರೆಗೆ ಗುರುವಾರ ಬಸವನಗುಡಿಯ ಶ್ರೀ  ಗವಿಗಂಗಾಧರೇಶ್ವರ ದೇವಸ್ಥಾನದಲ್ಲಿ ಅಭಿಷೇಕ, ಪೂಜೆ ಮಾಡಿಸುವ ಮೂಲಕ ಸಾಂಕೇತಿಕವಾಗಿ ಚಾಲನೆ ನೀಡಲಾಯಿತು.

ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಇಂದು ಬೆಳಗ್ಗೆ ಗವಿಗಂಗಾಧರೇಶ್ವರ ದೇವಸ್ಥಾನದಲ್ಲಿ ಪೂಜೆ ನೆರವೇರಿಸಿ ರಥಯಾತ್ರೆಗೆ ಚಾಲನೆ ನೀಡಿದರು.

ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಅವರು,  ಗವಿಗಂಗಾಧರೇಶ್ವರ ದೇವಸ್ಥಾನದಲ್ಲಿ ಪೂಜೆ ಮಾಡಲಾಗಿದೆ. ಗುರುವಾರ ಅತ್ಯಂತ ಒಳ್ಳೆಯ ದಿನವಾಗಿದೆ. 1994ರಲ್ಲಿ ದೇವೇಗೌಡರು ಕೂಡ ಇಲ್ಲಿ ಪೂಜೆ ನಡೆಸಿ ಚುನಾವಣೆಗೆ ಹೋಗಿದ್ದರು ಎಂದರು.

'ನವೆಂಬರ್ 1ರಂದು ಮುಳಬಾಗಿಲಿನ ಕುರುಡುಮಲೆಯಲ್ಲಿ ಪಂಚರತ್ನ ರಥಯಾತ್ರೆ ಪೂರ್ಣ ಪ್ರಮಾಣದಲ್ಲಿ ಶುರುವಾಗಲಿದೆ. ಅಂದು ಅಲ್ಲಿ ದೊಡ್ಡ ಸಮಾವೇಶ ನಡೆಯಲಿದೆ. ಅದಕ್ಕೂ ಮುನ್ನ, ಅಂದರೆ ನಾಳೆ ಅಣ್ಣಮ್ಮ ದೇವಸ್ಥಾನದಲ್ಲಿ ಪೂಜೆ ಮಾಡಲಾಗುತ್ತಿದೆ. ಗಾಂಧಿನಗರದಲ್ಲಿ ಸಾಂಕೇತಿಕವಾಗಿ ರಥಯಾತ್ರೆ ಮಾಡಲಾಗುತ್ತದೆ. ಮೊದಲ ಹಂತದಲ್ಲಿ 35 ದಿ‌ನಗಳ ಕಾಲ ರಥಯಾತ್ರೆ ಮಾಡಲಾಗುತ್ತದೆ' ಎಂದು ಹೇಳಿದರು.

ಇಡೀ ರಾಜ್ಯದ ಅಭಿವೃದ್ಧಿಗೆ ಪೂರಕವಾಗಿ ಕಾರ್ಯಕ್ರಮ ನೀಡಲಾಗುತ್ತಿದೆ. ನೆಮ್ಮದಿಯ ಬದುಕನ್ನು ನೀಡಲು ಬುನಾದಿ ಈ ಕಾರ್ಯಕ್ರಮ. ಈಗಾಗಲೇ ಸಂಭವನೀಯ ಅಭ್ಯರ್ಥಿಗಳು ಮೈಸೂರಿನಲ್ಲಿ ಚಾಮುಂಡೇಶ್ವರಿ ತಾಯಿಯ ದರ್ಶನ ಮಾಡಿದ್ದಾರೆ ಎಂದು ತಿಳಿಸಿದರು.

ನಮ್ಮ ಕುಟುಂಬವನ್ನು ಮತ್ತು ತಂದೆಯವರನ್ನು ಕಾಪಾಡಿದ್ದೆ ಶಿವ. ದೇವೇಗೌಡರಿಗೆ  ರಕ್ಷಣೆ ಕೊಟ್ಟಿದ್ದು, ಅನಾರೋಗ್ಯಕ್ಕೆ ಒಳಗಾದಗಲೂ ಮರು ಜೀವ ಕೊಟ್ಟಿದ್ದು ಶಿವ. ಹಾಗಾಗಿ, ಶಿವನಿಗೆ ಪೂಜೆ ಸಲ್ಲಿಸಿದ್ದೇನೆ ಎಂದರು ಮಾಜಿ ಮುಖ್ಯಮಂತ್ರಿಗಳು.

ರಥಯಾತ್ರೆ, ಗ್ರಾಮ ವಾಸ್ತವ್ಯ ಕೂಡ ಮಾಡಲಾಗುತ್ತದೆ. ಇವತ್ತು ನಮ್ಮ ಪಕ್ಷಕ್ಕೆ ಇದು ಸವಾಲು. ರಾಷ್ಟ್ರೀಯ ಪಕ್ಷಗಳು ಜನರ ಬಗ್ಗೆ ತಲೆ ಕಡೆಸಿಕೊಂಡಿಲ್ಲ. ನಾನು ಹಿಂದೆ ರೈತರ ಸಾಲ ಮನ್ನ ಮಾಡಿದ್ದೆ. ಆಗಲೂ ರಾಷ್ಟ್ರೀಯ ಪಕ್ಷಗಳು ಲಘುವಾಗಿ ಮಾತನಾಡಿದ್ದವು. ಕಾಂಗ್ರೆಸ್ ನಾಯಕರಿಗೆ ಈಗ ಅಪ್ಪರ್ ಭದ್ರ ಬಗ್ಗೆ ಕಾಳಜಿ ಬಂದಿದೆ. ಐದು ವರ್ಷ ಸರ್ಕಾರ ಇದ್ದಾಗ ಏನು ಮಾಡಿದ್ರು. ಈಗ ಜನರಿಗೆ ನೀರು ಕೊಡ್ತಾರಾ ಇವರು ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.

ಬೇರೆ ಪಕ್ಷದ ಪಾದಯಾತ್ರೆ ಬಗ್ಗೆ ಭಯ ಇಲ್ಲ.‌ ಇವರ ಪಾದಯಾತ್ರೆ ನೋಡುತ್ತಿದ್ದೇವೆ. ಕಾಂಗ್ರೆಸ್ ನಾಯಕರ ಈ ರೀತಿ ಕಾರ್ಯಕ್ರಮ ಐದು ವರ್ಷ ಇದ್ದಾಗ ಮಾಡದೇ ಇದ್ದವರು ಈಗ ಮಾಡುವುದರಿಂದ ಏನು ಮಾಡೋದು. ಇದು ಚುನಾವಣೆ ಸ್ಟಂಟ್ ಅಷ್ಟೆ ಎಂದು ಅವರು ತಿಳಿಸಿದರು.

ಇನ್ನು ಎಸ್ ಟಿ ಸಮಾಜಕ್ಕೆ ಮೀಸಲಾತಿ ಕೊಟ್ಟಿದ್ದು ದೇವೇಗೌಡರು. ಗಂಡೆದೆ ಮುಖ್ಯಮಂತ್ರಿ ಅಂತ ಮಾತಿನಲ್ಲಿ ಹೇಳಿದರೆ ಸಾಲಲ್ಲ. ಇಷ್ಟು ದಿನ ಆ ಸಮುದಾಯದ ಸ್ವಾಮೀಜಿಯನ್ನು ಯಾಕೆ ಧರಣಿ ಕೂರಿಸಿದ್ರಿ? ಎಂದು ಪ್ರಶ್ನಿಸಿದರಲ್ಲದೆ, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಟಾಂಗ್ ನೀಡಿದರು.

ವಿಧಾನಪರಿಷತ್ ಸದಸ್ಯ ಟಿ.ಎ.ಶರವಣ, ಪಕ್ಷದ ನಗರ ಘಟಕದ ಅಧ್ಯಕ್ಷ ಆರ್ ಪ್ರಕಾಶ್, ಬಾಗೇಗೌಡ, ಅರಮನೆ ಶಂಕರ್ ಇತರ ಮುಖಂಡರು ಭಾಗವಹಿಸಿದ್ದರು.

share
Next Story
X