ಕಲುಷಿತ ನೀರು ಸೇವನೆಯಿಂದ ಮೃತಟ್ಟ ಪ್ರಕರಣ: ಅಧಿಕಾರಿಗಳ ವಿರುದ್ಧ ಲೋಕಾಯುಕ್ತಕ್ಕೆ ದೂರು
‘ವಾರ್ತಾ ಭಾರತಿ' ವರದಿ ಆಧರಿಸಿ ದೂರು ಕೊಟ್ಟ 'ನೈಜ ಹೋರಾಟಗಾರರ ವೇದಿಕೆ'
‘ವಾರ್ತಾ ಭಾರತಿ' ವರದಿ ಆಧರಿಸಿ ದೂರು ಕೊಟ್ಟ 'ನೈಜ ಹೋರಾಟಗಾರರ ವೇದಿಕೆ'
ಬೆಂಗಳೂರು, ಅ. 27: ಬೆಳಗಾವಿ ಜಿಲ್ಲೆಯ ರಾಮದುರ್ಗಾ ತಾಲೂಕಿನ ಮದೇನೂರು ಗ್ರಾಮದಲ್ಲಿ ಕಲುಷಿತ ನೀರು ಕುಡಿದು ಇಬ್ಬರು ಮೃತಪಟ್ಟ ಪ್ರರಕಣಕ್ಕೆ ಸಂಬಂಧಿಸಿದಂತೆ ‘ವಾರ್ತಾಭಾರತಿ’ ವೆಬ್ ಸೈಟ್ ನಲ್ಲಿ ಪ್ರಕಟವಾದ ವರದಿ ಆಧರಿಸಿ ‘ನೈಜ ಹೋರಾಟಗಾರರ ವೇದಿಕೆ' ಗುರುವಾರ ಲೋಕಾಯುಕ್ತಕ್ಕೆ ದೂರು ಸಲ್ಲಿಸಿದೆ.
ಬೆಳಗಾವಿ, ರಾಯಚೂರು, ಕಲಬುರಗಿ ಜಿಲ್ಲಾಧಿಕಾರಿಗಳು ತಮ್ಮ ಜವಾಬ್ದಾರಿಯನ್ನು ಮರೆತು ಕಾರ್ಯನಿರ್ವಹಿಸುತ್ತಿದ್ದಾರೆ. ಇದರಿಂದ ಘಟನೆಯನ್ನು ತಡೆಯಲು ವಿಫಲಾಗಿದ್ದಾರೆ. ಹಾಗಾಗಿ ಘಟನೆಗೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ನೈಜ ಹೋರಾಟಗಾರರ ವೇದಿಕೆಯ ಮುಖಂಡ ಎಚ್.ಎಂ.ವೆಂಕಟೇಶ್ ಆಗ್ರಹಿಸಿದ್ದಾರೆ.
ಗ್ರಾಮದಲ್ಲಿ ಕಲುಷಿತ ನೀರು ಕುಡಿದು ಇಬ್ಬರು ಮೃತಪಟ್ಟಿದ್ದಾರೆ. ಹಲವರು ಅಸ್ವಸ್ಥಗೊಂಡಿದ್ದಾರೆ. ಸರಕಾರ ಇದನ್ನು ಗಂಭೀರವಾಗಿ ಪರಿಗಣಿಸಿ, ಮೃತರಿಗೆ ಪರಿಹಾರ ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಇದನ್ನೂ ಓದಿ: ಬೆಳಗಾವಿ | ಕಲುಷಿತ ನೀರು ಸೇವನೆಯಿಂದ ಅಸ್ವಸ್ಥಗೊಂಡಿದ್ದ ಓರ್ವ ಮೃತ್ಯು
Next Story