ಉತ್ತರಪ್ರದೇಶ: ನಡುರಸ್ತೆಯಲ್ಲೇ ಪೊಲೀಸ್ ಸಿಬ್ಬಂದಿಗೆ ಥಳಿಸಿದ ದುಷ್ಕರ್ಮಿಗಳು; ವಿಡಿಯೋ ವೈರಲ್
ಲಕ್ನೋ: ಉತ್ತರ ಪ್ರದೇಶದ (Uttar Pradesh) ರಾಜಧಾನಿ ಲಕ್ನೋದಲ್ಲಿ (Lucknow) ನಾಲ್ವರು ದುಷ್ಕರ್ಮಿಗಳು ಪೊಲೀಸ್ (policeman) ಸಿಬ್ಬಂದಿಗೆ ಥಳಿಸುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ನಗರದ ಪ್ಯಾರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ ಎನ್ನಲಾಗಿದೆ. ನಾಲ್ವರು ಆರೋಪಿಗಳ ಪೈಕಿ ಓರ್ವನನ್ನು ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದು, ಉಳಿದ ಮೂವರು ತಲೆಮರೆಸಿಕೊಂಡಿದ್ದಾರೆ ಎನ್ನಲಾಗಿದೆ.
ಸಂತ್ರಸ್ತ ಪೊಲೀಸ್ ಪೇದೆಯನ್ನು ದಿವಾನ್ ಶ್ರೀಕಾಂತ್ ಎಂದು ಗುರುತಿಸಲಾಗಿದೆ. ನಾಲ್ವರು ತಮ್ಮ ಬೈಕ್‌ಗಳಲ್ಲಿ ಜೋರಾಗಿ ಶಬ್ಧ ಮಾಡಿ ಗಲಾಟೆ ಮಾಡುತ್ತಿದ್ದು, ಇದನ್ನು ತಡೆಯಲು ಬಂದ ಶ್ರೀಕಾಂತ್ ರನ್ನು ಥಳಿಸಿದ್ದಾರೆ ಎಂದು ವರದಿಯಾಗಿದೆ.
ಪೊಲೀಸ್ ಸಿಬ್ಬಂದಿಯನ್ನು ನಡುರಸ್ತೆಯಲ್ಲೇ ಥಳಿಸಿದ್ದು, ಘಟನೆಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಇದನ್ನೂ ಓದಿ: ಆದಿತ್ಯನಾಥ್ ವಿರುದ್ಧ ದ್ವೇಷಭಾಷಣ: ಆಝಂ ಖಾನ್ ಗೆ 3 ವರ್ಷ ಜೈಲು ಶಿಕ್ಷೆ ವಿಧಿಸಿದ ನ್ಯಾಯಾಲಯ
यही देख लो pic.twitter.com/SGgkw9JDEP
— (@TejYadava55) October 26, 2022