ಗ್ರಾಪಂ ಉಪಚುನಾವಣೆ: ಮದ್ಯ ಮಾರಾಟ ನಿಷೇಧ

ಉಡುಪಿ, ಅ.27: ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಉಪ್ಪೂರು, ಯಡ್ತಾಡಿ, ಕಾಪು ತಾಲೂಕಿನ ಪಿಲಾರು ಹಾಗೂ ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಪಂಗಳಲ್ಲಿ ಖಾಲಿ ಇರುವ ಸ್ಥಾನಗಳಿಗೆ ಅ.28ರಂದು ಉಪ-ಚುನಾವಣೆ ನಡೆಯಲಿದ್ದು, ಅಕ್ಟೋಬರ್ 28ರಂದು ಸಂಜೆ 5 ಗಂಟೆಯವರೆಗೆ ಕಾಲ್ತೋಡು, ಯಡ್ತಾಡಿ, ಉಪ್ಪೂರು ಹಾಗೂ ಮುದರಂಗಡಿ ಗ್ರಾಪಂಗಳ ವ್ಯಾಪ್ತಿಯಲ್ಲಿ ಒಣದಿನ ಎಂದು ಘೋಷಿಸಿ ಎಲ್ಲಾ ರೀತಿಯ ಮದ್ಯದಂಗಡಿ, ಮದ್ಯ ಮಾರಾಟ ಡಿಪೋಗಳು, ಮದ್ಯ ಮಾರಾಟ ಡಿಸ್ಟಲರಿಗಳು, ಸ್ಟಾರ್ ಹೋಟೆಲ್‌ಗಳು ಹಾಗೂ ಶೇಂದಿ ಅಂಗಡಿಗಳನ್ನು ಮುಚ್ಚುವಂತೆ ಜಿಲ್ಲಾಧಿಕಾರಿ ಕೂರ್ಮರಾವ್ ಎಂ ಆದೇಶಿಸಿದ್ದಾರೆ.
Next Story





