ಅ.31ರಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಸರಕಾರಿ ಬಸ್ ಸಂಚಾರ ಆರಂಭ

ಮಂಗಳೂರು, ಅ. 27: ಮಂಗಳೂರು ಮತ್ತು ಮಣಿಪಾಲದಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ನಿಟ್ಟಿನಲ್ಲಿ ಕೆಎಸ್ಸಾರ್ಟಿಸಿ ಬಸ್ ಸಂಚಾರವು ಅ.31ರಂದು ಆರಂಭಗೊಳ್ಳಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಕೆಎಸ್ಸಾರ್ಟಿಸಿ ಮಂಗಳೂರು ವಿಭಾಗವು ನಿರ್ಧರಿಸಿದಂತೆ ಗುರುವಾರ ಬಸ್ ಸಂಚಾರ ಆರಂಭಗೊಳ್ಳಬೇಕಿತ್ತು. ಆದರೆ ಕೆಲವೊಂದು ತಾಂತ್ರಿಕ ಕಾರಣದಿಂದ ಬಸ್ ಸಂಚಾರ ವಿಳಂಬಗೊಂಡಿದ್ದು, ಅ.31ರ ಸೋಮವಾರದಿಂದ ಬಸ್ ಸಂಚಾರಕ್ಕೆ ಅನುಮತಿ ದೊರಕುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Next Story