Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪತ್ನಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದರೂ...

ಪತ್ನಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದರೂ ತಡೆಯದೆ ವೀಡಿಯೊ ಚಿತ್ರೀಕರಣ ಮಾಡಿದ ಪತಿ

27 Oct 2022 10:29 PM IST
share
ಪತ್ನಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದರೂ ತಡೆಯದೆ ವೀಡಿಯೊ ಚಿತ್ರೀಕರಣ ಮಾಡಿದ ಪತಿ

ಕಾನ್ಪುರ, ಅ. 27: ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದ ಪತ್ನಿಯನ್ನು ತಡೆಯದ ಪತಿ ಆ ಘಟನೆಯನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿರುವ ಆಘಾತಕಾರಿ ಘಟನೆ ಉತ್ತರಪ್ರದೇಶದ ಕಾನ್ಪುರದಲ್ಲಿ ನಡೆದಿದೆ. ಐದು ವರ್ಷಗಳ ಹಿಂದೆ ವಿವಾಹವಾಗಿದ್ದ ಶೋಬಿತಾ ಗುಪ್ತಾ ಮಂಗಳವಾರ ಪತಿಯೊಂದಿಗೆ ಜಗಳ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಪತಿಯ ವಿಚಾರಣೆ ವೇಳೆ ತಿಳಿದು ಬಂದಿದೆ. 

ಪತಿ ಸಂಜಯ್ ಗುಪ್ತಾ ಚಿತ್ರೀಕರಿಸಿದ ಮೊಬೈಲ್ ವೀಡಿಯೊದಲ್ಲಿ ಶೋಬಿತಾ ಗುಪ್ತಾ ಬೆಡ್ ಮೇಲೆ ನಿಂತು ಸ್ಕಾರ್ಫ್ ಅನ್ನು ತನ್ನ ಕುತ್ತಿಗೆಗೆ ಸುತ್ತಿಕೊಂಡು ಫ್ಯಾನ್‌ಗೆ ನೇಣು ಹಾಕಿಕೊಳ್ಳಲು ಪ್ರಯತ್ನಿಸುತ್ತಿರುವುದು  ಕಂಡು ಬಂದಿದೆ. ಆದರೆ, ಈ ಸಂದರ್ಭ ಆಕೆಯನ್ನು ತಡೆಯಲು ಪತಿ ಸಂಜಯ್ ಯಾವುದೇ ಪ್ರಯತ್ನ ಮಾಡಿಲ್ಲ. ಅದರ ಬದಲು, ‘‘ಗ್ರೇಟ್ ಇದು ನಿನ್ನ ಮನಸ್ಥಿತಿ. ನಿನಗೆ ತುಂಬಾ ಕೆಟ್ಟ ಮನಸ್ಥಿತಿ ಇದೆ’’ ಎಂದು ಹೇಳುತ್ತಿರುವುದು ವೀಡಿಯೊದಲ್ಲಿ ಕೇಳಿ ಬಂದಿದೆ. ಶೋಬಿತಾ ತಾನು ಹಾಕಿಕೊಂಡಿದ್ದ ನೇಣನ್ನು ಬಿಚ್ಚಿ ಹಾಸಿಗೆ ಮೇಲೆ ನಿಂತಿದ್ದಾಳೆ. ರಕ್ಷಣೆಗೆ ಬಾರದ ಗಂಡನತ್ತ ದೃಷ್ಟಿ ಹಾಯಿಸಿದ್ದಾಳೆ. ಅಲ್ಲಿಗೆ ವೀಡಿಯೊ ಕೊನೆಗೊಳ್ಳುತ್ತದೆ. 
ಪುತ್ರಿ ಶೋಬಿತಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಾನು ಅಳಿಯನಿಂದ ಮಂಗಳವಾರ ಅಪರಾಹ್ನ ಕರೆ ಸ್ವೀಕರಿಸಿದೆ. ನಾವು ಮನೆಗೆ ಬಂದಾಗ ಆಕೆಯ ಮೃತದೇಹ ಬೆಡ್ ಮೇಲಿತ್ತು. ಅಳಿಯ ಎದೆ ಒತ್ತುವ ಮೂಲಕ ಶ್ವಾಸಕೋಶ ಕಾರ್ಯ ನಿರ್ವಹಿಸುವಂತೆ ಮಾಡುತ್ತಿದ್ದ ಎಂದು ಶೋಭಿತ್ ಅವರ ತಂದೆ ರಾಜ್ ಕಿಶೋರ್ ಗುಪ್ತಾ ಹೇಳಿದ್ದಾರೆ. 

‘‘ಆಕೆಯನ್ನು ಆಸ್ಪತ್ರೆಗೆ ಕೊಂಡೊಯ್ಯುವ ಬದಲು ಆತ ಆಕೆಯ ಶ್ವಾಸಕೋಶ ಕಾರ್ಯ ನಿರ್ವಹಿಸುವಂತೆ  ಮಾಡುತ್ತಿದ್ದ. ಈ ಹಿಂದೆ ಕೂಡ ಆಕೆ ಆತ್ಮಹತ್ಯೆಗೆ ಪ್ರಯತ್ನಿಸಿದ್ದಳು ಎಂದು ಹೇಳಿ ವೀಡಿಯೊ ತೋರಿಸಿದ. ಆದರೆ, ಆಕೆಯನ್ನು ತಡೆದಿಲ್ಲ, ಬದಲಾಗಿ ವೀಡಿಯೊ ಮಾಡಿದ್ದಾನೆ. ಅಪರಾಹ್ನ 12.30ಕ್ಕೆ ಈ ಘಟನೆ ನಡೆದಿದೆ. ಸ್ಪಲ್ಪ ಸಮಯದ ಬಳಿಕ ಆಕೆ ಮೃತಪಟ್ಟಿರುವುದು ಅನುಮಾನ ಮೂಡಿಸಿದೆ’’ ಎಂದು ಅವರು ಹೇಳಿದ್ದಾರೆ. 
ಶೋಬಿತಾಳನ್ನು ಆಕೆಯ ಕುಟುಂಬ ಆಸ್ಪತ್ರೆಗೆ ಕರೆದೊಯ್ದಿದೆ. ಆದರೆ, ಅಲ್ಲಿ ಆಕೆ ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದ್ದಾರೆ. ‘‘ತನ್ನ ಪುತ್ರಿಯನ್ನು ರಕ್ಷಿಸಬಹುದಿತ್ತು. ಆದರೆ, ನನ್ನ ಅಳಿಯ ಅದನ್ನು ಮಾಡಲಿಲ್ಲ. ನಮಗೆ ನ್ಯಾಯ ಬೇಕು’’ ಎಂದು ಕುಟುಂಬ ಹೇಳಿದೆ. 
ಶೋಭಿತಾರ ಆತ್ಮಹತ್ಯೆಯಲ್ಲಿ ಸಂಜಯ್ ಗುಪ್ತಾ ಅವರ ಪಾತ್ರದ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

WARNING: Disturbing video.#Shobhita of #KidwaiNagar, #Kanpur kept trying to hang herself after failing in the first attempt while her husband #Sanjeev were filming the incident.#UttarPradesh #ViralVideo pic.twitter.com/bCmHIytJaD

— Hate Detector (@HateDetectors) October 27, 2022
share
Next Story
X