Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 1.54 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ:...

1.54 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ: ಆ್ಯಮ್ನೆಸ್ಟಿ ಇಂಡಿಯಾದ ಮನವಿಯನ್ನು ಪರಿಗಣಿಸಲು ನಿರಾಕರಿಸಿದ ಸುಪ್ರೀಂ

27 Oct 2022 10:44 PM IST
share
1.54 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ: ಆ್ಯಮ್ನೆಸ್ಟಿ ಇಂಡಿಯಾದ ಮನವಿಯನ್ನು ಪರಿಗಣಿಸಲು ನಿರಾಕರಿಸಿದ ಸುಪ್ರೀಂ

ಹೊಸದಿಲ್ಲಿ: 1.54 ಕೋಟಿ ಮೌಲ್ಯದ ಚಾರಿಟಬಲ್ ಟ್ರಸ್ಟ್‌ನ ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ ಜಪ್ತಿ ಮಾಡಿರುವುದನ್ನು ಪ್ರಶ್ನಿಸಿ ಆ್ಯಮ್ನೆಸ್ಟಿ ಇಂಟರ್‌ನ್ಯಾಶನಲ್ ಇಂಡಿಯಾದ ಮನವಿಯನ್ನು ಪರಿಗಣಿಸಲು ಸುಪ್ರೀಂ ಕೋರ್ಟ್ ಕಳೆದ ವಾರ ನಿರಾಕರಿಸಿದೆ.   ಲಾಂಡರಿಂಗ್ ಕಾಯ್ದೆ ಪ್ರಕರಣಗಳಲ್ಲಿ ತೀರ್ಪು ನೀಡುವ ಪ್ರಾಧಿಕಾರವು ಈಗಾಗಲೇ ತಾತ್ಕಾಲಿಕ ಆದೇಶವನ್ನು ಜಾರಿಗೊಳಿಸಿದೆ ಎಂದು ಲೈವ್ ಲಾ ಗುರುವಾರ ವರದಿ ಮಾಡಿದೆ. 

ಆಮ್ನೆಸ್ಟಿ ಇಂಟರ್‌ನ್ಯಾಷನಲ್‌ನ ಭಾರತೀಯ ಅಂಗವು 2010 ರ ವಿದೇಶಿ ದೇಣಿಗೆ ನಿಯಂತ್ರಣ ಕಾಯ್ದೆಯನ್ನು ಉಲ್ಲಂಘಿಸಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಅಕ್ಟೋಬರ್ 7 ರಂದು ಆದೇಶ ಹೊರಡಿಸಿತ್ತು. 
 
ಆ್ಯಮ್ನೆಸ್ಟಿ ತನ್ನ ವಿರುದ್ಧದ ಆರೋಪಗಳನ್ನು ನಿರಾಕರಿಸಿದೆ.

ಕಳೆದ ವಾರ ಆ್ಯಮ್ನೆಸ್ಟಿ ಇಂಟರ್‌ನ್ಯಾಶನಲ್ ಇಂಡಿಯಾದ ಪ್ರಕರಣದ ವಿಚಾರಣೆ ನಡೆಸುತ್ತಿದ್ದ ಭಾರತದ ಮುಖ್ಯ ನ್ಯಾಯಮೂರ್ತಿ ಯುಯು ಲಲಿತ್, ಅರ್ಜಿಯನ್ನು ವಜಾಗೊಳಿಸಿರುವುದು ಅದರ ಅರ್ಹತೆ ಮತ್ತು ದೋಷಗಳ ಪ್ರತಿಬಿಂಬವಲ್ಲ ಎಂದು ಹೇಳಿರುವುದಾಗಿ ಲೈವ್ ಲಾ ವರದಿ ಮಾಡಿದೆ.

ಜಾರಿ ನಿರ್ದೇಶನಾಲಯದ ಪ್ರಕರಣವು ಅಕ್ರಮವಾಗಿ ವಿದೇಶಿ ಕೊಡುಗೆಗಳನ್ನು ಸ್ವೀಕರಿಸಿದ ಆರೋಪದ ಮೇಲೆ ಆರೋಪಿ ಘಟಕಗಳ ವಿರುದ್ಧ ಕೇಂದ್ರೀಯ ತನಿಖಾ ದಳ ದಾಖಲಿಸಿದ ಎಫ್‌ಐಆರ್‌ ಅನ್ನು ಆಧರಿಸಿದೆ.

ಸೆಪ್ಟೆಂಬರ್ 2020 ರಲ್ಲಿ, ಆ್ಯಮ್ನೆಸ್ಟಿ ಇಂಡಿಯಾ ಭಾರತ ಸರ್ಕಾರವು ತನ್ನ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿದ್ದರಿಂದ ತನ್ನ ಕಾರ್ಯಾಚರಣೆಯನ್ನು ನಿಲ್ಲಿಸಬೇಕಾಯಿತು ಎಂದು ಹೇಳಿತ್ತು.  ಸರ್ಕಾರದ ಗಂಭೀರ ನಿಷ್ಕ್ರಿಯತೆ ಮತ್ತೆಗೆ ಸವಾಲುಗಳನ್ನು ಹಾಕಿದ್ದರಿಂದ ಅದರ ಕಾನೂನುಬದ್ಧ ನಿಧಿಸಂಗ್ರಹಣೆ ಮಾದರಿಯನ್ನು ಮನಿ ಲಾಂಡರಿಂಗ್ ಎಂದು ಬಿಂಬಿಸಲಾಗುತ್ತಿದೆ ಎಂದು ಆ್ಯಮ್ನೆಸ್ಟಿ ಆರೋಪಿಸಿತ್ತು. 

ಆರೋಪಗಳು ದುರದೃಷ್ಟಕರ, ಉತ್ಪ್ರೇಕ್ಷಿತ ಮತ್ತು "ಸತ್ಯಕ್ಕೆ ದೂರ" ಎಂದು ಕೇಂದ್ರವು ಹೇಳಿತ್ತು. ಮಾನವೀಯ ಕಾರ್ಯಗಳ ಬಗ್ಗೆ ಆ್ಯಮ್ನೆಸ್ಟಿಯ "ಗಮನವನ್ನು ಬೇರೆಡೆಗೆ ತಿರುಗಿಸುವ ತಂತ್ರ" ಹೊರತು ಬೇರೇನೂ ಅಲ್ಲ, ಅದು ಭಾರತೀಯ ಕಾನೂನುಗಳ "ಸ್ಪಷ್ಟವಾದ ಉಲ್ಲಂಘನೆಯಾಗಿದೆ" ಎಂದು ಸರ್ಕಾರ ಹೇಳಿದೆ.

share
Next Story
X