Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಚಿಕ್ಕಮಗಳೂರು; ದಲಿತ ಕೂಲಿ ಕಾರ್ಮಿಕರ...

ಚಿಕ್ಕಮಗಳೂರು; ದಲಿತ ಕೂಲಿ ಕಾರ್ಮಿಕರ ಮೇಲೆ ದೌರ್ಜನ್ಯ ಪ್ರಕರಣ: ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಅಹೋರಾತ್ರಿ ಧರಣಿ ಆರಂಭ

27 Oct 2022 10:45 PM IST
share
ಚಿಕ್ಕಮಗಳೂರು; ದಲಿತ ಕೂಲಿ ಕಾರ್ಮಿಕರ ಮೇಲೆ ದೌರ್ಜನ್ಯ ಪ್ರಕರಣ: ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಅಹೋರಾತ್ರಿ ಧರಣಿ ಆರಂಭ

ಚಿಕ್ಕಮಗಳೂರು, ಅ.27: 'ಹುಣಸೇಹಳ್ಳಿಪುರ ಗ್ರಾಮದಲ್ಲಿ ದಲಿತ ಸಮುದಾಯದ ಕೂಲಿಕಾರ್ಮಿಕರ ಮೇಲಿನ ಹಲ್ಲೆ ಹಾಗೂ ಗರ್ಭಿಣಿಯ ಗರ್ಭಪಾತಕ್ಕೆ ಕಾರಣರಾದ ಕಾಫಿ ಎಸ್ಟೇಟ್ ಮಾಲಕ ಜಗದೀಶಗೌಡ ಮತ್ತು ಆತನ ಪುತ್ರ ತಿಲಕ್‍ಗೌಡ ಅವರನ್ನು ಕೂಡಲೇ ಬಂಧಿಸಬೇಕು' ಎಂದು ಒತ್ತಾಯಿಸಿ ದಲಿತ ಸಂಘಟನೆಗಳ ಒಕ್ಕೂಟದಿಂದ ಅನಿರ್ದಿಷ್ಟಾವಧಿ ಧರಣಿ ಗುರುವಾರ ನಗರದಲ್ಲಿ ಆರಂಭಗೊಂಡಿತು.

ನಗರದ ಹನುಮಂತಪ್ಪ ವೃತ್ತದಲ್ಲಿ ಸಮಾವೇಶಗೊಂಡ ದಲಿತ, ಪ್ರಗತಿಪರಸಂಘಟನೆಗಳ ಮುಖಂಡರು, ಕಾರ್ಯಕರ್ತರು ದಲಿತ ಕಾರ್ಮಿಕರ ಮೇಲೆ ಹಲ್ಲೆ ಮಾಡಿದ ಆರೋಪಿಗಳನ್ನು ಕೂಡಲೇ ಬಂಧಿಸಬೇಕು ಹಾಗೂ ಇತ್ತೀಚೆಗೆ ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ ಮಾಡಿರುವ ಕಿಡಿಗೇಡಿಗಳನ್ನು ಪತ್ತೆಹಚ್ಚಿ ಶಿಕ್ಷೆಗೆ ಗುರಿಪಡಿಸಬೇಕು. ಮಹಿಷಾಸುರ ಜಯಂತಿ ಮೆರವಣಿಗೆಗೆ ಅಡಚಣೆ ಮಾಡಿದವರ ವಿರುದ್ಧವೂ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿ, ರಾಜ್ಯ ಸರಕಾರದ ವಿರುದ್ಧ ಘೋಷಣೆಕೂಗಿದರು.

ಈ ವೇಳೆ ದಲಿತ ಕೂಲಿಕಾರ್ಮಿಕರ ಮೇಲೆ ಹಾಕಿರುವ ಸುಳ್ಳುಕೇಸನ್ನು ಹಿಂಪಡೆಯಬೇಕು, ತೋಟದ ಮಾಲಕರಿಂದ ಹಲ್ಲೆಗೊಳಗಾಗಿ ಗರ್ಭಪಾತಕ್ಕೆ ಕಾರಣರಾಗಿರುವ ಆರೋಪಿಗಳನ್ನು ಬಂಧಿಸಬೇಕು, ದಲಿತ ಕೂಲಿಕಾರ್ಮಿಕರ ಮೇಲೆ ದೌರ್ಜನ್ಯವೆಸಗಿದವರ ಬಂಧಿಸಲು ವಿಫಲವಾಗಿರುವ ಬಾಳೆಹೊನ್ನೂರು ಠಾಣಾಧಿಕಾರಿಯನ್ನು ಸೇವೆಯಿಂದ ವಜಾಗೊಳಿಸಬೇಕು, ದಲಿತರ ಮೇಲೆ ನಿರಂತರ ದೌರ್ಜನ್ಯ ನಡೆಸುತ್ತಿರುವ ಬಿಜೆಪಿ ಸರಕಾರವನ್ನು ತೊಲಗಿಸಬೇಕು ಎಂಬ ಭಿತ್ತಿ ಪತ್ರಗಳನ್ನು ಪ್ರದರ್ಶಿಸಲಾಯಿತು.

ದಲಿತರ ಮೇಲಿನ ದೌರ್ಜನ್ಯದ ವಿರುದ್ಧವಾಗಿ ನಕಲಿ ದಾಖಲೆ ಸೃಷ್ಟಿಸುವವರ ಮೇಲೆ ದಲಿತ ದೌರ್ಜನ್ಯ ಕಾಯ್ದೆಯಡಿ ಪ್ರಕರಣ ದಾಖಲಿಸಬೇಕು. ದಲಿತ ಕಾರ್ಮಿಕರ ಮೇಲೆ ಹಲ್ಲೆ ನಡೆಸಿದವರನ್ನು ಎರಡು ದಿನದೊಳಗೆ ಬಂಧಿಸುವುದಾಗಿ ಪೊಲೀಸರು ಭರವಸೆ ನೀಡಿದ್ದರು. ಆದರೆ 15 ದಿನ ಕಳೆದರೂ ಇದುವರೆಗೂ ಆರೋಪಿಗಳನ್ನು ಬಂಧಿಸಲು ಸಾಧ್ಯವಾಗಿಲ್ಲ, ಈ ಘಟನೆ ಕುರಿತು ಜಿಲ್ಲೆಯ ಜನಪ್ರತಿನಿಧಿಗಳು ಬಾಯಿ ಬಿಡದೇ ಬೇಜವಾಬ್ದಾರಿತನ ಪ್ರದರ್ಶಿಸುತ್ತಿದ್ದಾರೆ ಎಂದು ಆರೋಪಿಸಿದರು.

ಹಲ್ಲೆ ಪ್ರಕರಣವನ್ನು ಸುಳ್ಳು ಘಟನೆ ಎಂದು ಪ್ರಕರಣ ಮುಚ್ಚಿಹಾಕುವ ಸಂಚು ರೂಪಿಸಲಾಗುತ್ತಿದ್ದು, ಇದನ್ನು ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಅಧಿಕಾರಿಗಳು ಗಮನದಲ್ಲಿಟ್ಟುಕೊಂಡು ಕೂಡಲೇ ಆರೋಪಿಗಳನ್ನು ಬಂಧಿಸಬೇಕೆಂದು ಆಗ್ರಹಿಸಿದ ಮುಖಂಡರು, ಈ ಘಟನೆ ಸಂಬಂಧ ಜಿಲ್ಲಾಡಳಿತ, ಪೊಲೀಸ್ ಇಲಾಖೆ ದಿವ್ಯ ನಿರ್ಲಕ್ಷ್ಯವಹಿಸಿದ್ದು, ಪ್ರಭಾವಿಗಳ ಒತ್ತಡಕ್ಕೆ ಮಣಿದಿರುವ ಶಂಕೆ ಇದೆ. ಕೂಡಲೇ ಆರೋಪಿಗಳನ್ನು ಬಂಧಿಸದಿದ್ದಲ್ಲಿ ಹೋರಾಟವನ್ನು ತೀವ್ರಗೊಳಿಸಲಾಗುವುದು ಎಂದರು.

ದಲಿತ ಸಂಘರ್ಷ ಸಮಿತಿ ರಾಜ್ಯ ಸಂಘಟನಾ ಸಂಚಾಲಕ ದಂಟರಮಕ್ಕಿ ಶ್ರೀನಿವಾಸ ಮಾತನಾಡಿ, ಈ ಹೋರಾಟದಲ್ಲಿ ಜಯಗಳಿಸುವ ವಿಶ್ವಾಸವಿದೆ. ನ್ಯಾಯಸಿಗುವ ತನಕ ಅಹೋರಾತ್ರಿ ಧರಣಿ ನಡೆಸುತ್ತೇವೆ. ಅನಿರ್ದಿಷ್ಟಾವಧಿ ಧರಣಿಯಿಂದ ಹಿಂದೆ ಸರಿಯುವುದಿಲ್ಲವೆಂದು ಸ್ಪಷ್ಟಪಡಿಸಿದರು.

ಭೀಮ್‍ಆರ್ಮಿ ಜಿಲ್ಲಾಧ್ಯಕ್ಷ ಗಿರೀಶ್, ಗೌರವಾಧ್ಯಕ್ಷ ಹೊನ್ನೇಶ್, ತಾಲೂಕು ಅಧ್ಯಕ್ಷ ರಮೇಶ್, ದಲಿತ ಸಂಘರ್ಷ ಸಮಿತಿ ಜಿಲ್ಲಾ ಪ್ರಧಾನ ಸಂಚಾಲಕ ಮರ್ಲೆ ಅಣ್ಣಯ್ಯ, ಬಹುಜನ ಸಮಾಜ ಪಕ್ಷದ ರಾಜ್ಯಕಾರ್ಯದರ್ಶಿ ಪರಮೇಶ್, ವಿವಿಧ ಸಂಘಟನೆ ಮುಖಂಡರಾದ ಅಂಗಡಿಚಂದ್ರು, ಮಂಜುನಾಥ, ಜಯ, ಹುಣಸೇಮಕ್ಕಿ ಲಕ್ಷ್ಮಣ್, ಕೂದುವಳ್ಳಿ ಸತೀಶ್, ಗೌಸ್‍ಮುನೀರ್, ಅಜ್ಮತ್ ಮತ್ತಿತರರು ಧರಣಿಯಲ್ಲಿ ಭಾಗವಹಿಸಿದ್ದರು.

ಜಿಲ್ಲಾ ಉಸ್ತುವಾರಿ ಸಚಿವರೇ ಸ್ಥಳಕ್ಕೆ ಬಂದು ಮನವಿ ಮಾಡಿದರೂ ಹೋರಾಟ ಕೈಬಿಡುವುದಿಲ್ಲ, ನ್ಯಾಯಸಿಗುವ ತನಕ ಪ್ರತಿಭಟನೆ ಮುಂದುವರೆಯಲಿದೆ. ಧರಣಿಯಿಂದ ಯಾವುದೇ ಕಾರಣಕ್ಕೂ ಹಿಂದೆ ಸರಿಯುವುದಿಲ್ಲ.

- ದಂಟರಮಕ್ಕಿ ಶ್ರೀನಿವಾಸ, ದಲಿತ ಸಂಘರ್ಷ ಸಮಿತಿ ರಾಜ್ಯ ಸಂಘಟನಾ ಸಂಚಾಲಕ.

share
Next Story
X