ಮಹಿಳಾ ರಕ್ಷಣಾ ಕಾನೂನು ಪರಿಷ್ಕರಣೆಗೆ ಚೀನಾ ನಿರ್ಧಾರ

ಬೀಜಿಂಗ್, ಅ.27: ಕೆಲಸದಲ್ಲಿ ಲಿಂಗ ತಾರತಮ್ಯ ಮತ್ತು ಲೈಂಗಿಕ ಕಿರುಕುಳದ ವಿರುದ್ಧ ಮಹಿಳೆಯರಿಗೆ ಹೆಚ್ಚಿನ ರಕ್ಷಣೆಯನ್ನು ನೀಡುವ ಉದ್ದೇಶದಿಂದ ದಶಕಗಳಲ್ಲೇ ಮೊದಲ ಬಾರಿಗೆ ಮಹಿಳಾ ರಕ್ಷಣಾ ಕಾನೂನನ್ನು ಪರಿಷ್ಕರಿಸಲು ನಿರ್ಧರಿಸಲಾಗಿದೆ ಎಂದು ಚೀನಾದ ಅಧಿಕಾರಿಗಳು ಹೇಳಿದ್ದಾರೆ.
ಚೀನಾದಲ್ಲಿ ಮಹಿಳೆಯರ ರಕ್ಷಣೆಯ ಬಗ್ಗೆ ಹೆಚ್ಚಿನ ಕ್ರಮದ ಅಗತ್ಯವಿದೆ ಎಂದು ಹಲವರು ಅಭಿಪ್ರಾಯ ವ್ಯಕ್ತಪಡಿಸಿದ್ದರು. ಇದೀಗ ಕಾನೂನನ್ನು ಪರಿಷ್ಕರಿಸಿ ಈ ನ್ಯೂನತೆಯನ್ನು ಸರಿಪಡಿಸುವ ಉದ್ದೇಶವಿದೆ. ಸುಮಾರು 30 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಮಹಿಳಾ ಸುರಕ್ಷತೆ ಕಾಯ್ದೆಯನ್ನು ಪರಿಷ್ಕರಿಸಲಾಗುತ್ತಿದೆ ಎಂದು ಅಧಿಕಾರಿಗಳನ್ನು ಉಲ್ಲೇಖಿಸಿ ಸರಕಾರಿ ಸ್ವಾಮ್ಯದ ಕ್ಸಿನ್‍ಹುವಾ ಸುದ್ಧಿಸಂಸ್ಥೆ ವರದಿ ಮಾಡಿದೆ.
Next Story