ಬೆಂಗಳೂರು: 'ಕೋಟಿ ಕಂಠ ಗಾಯನ'ಕ್ಕೆ ಸಿಎಂ ಬೊಮ್ಮಾಯಿ ಚಾಲನೆ

ಬೆಂಗಳೂರು, ಅ.28: 67ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಶುಕ್ರವಾರ ಆಯೋಜಿಸಿದ್ದ ಕೋಟಿ ಕಂಠ ಗಾಯನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪಾಲ್ಗೊಂಡು, ಕೋಟಿ ಕಂಠ ಗಾಯನ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಡಿ.ವಿ.ಸದಾನಂದ ಗೌಡ, ಸಚಿವರಾದ ಆರ್.ಅಶೋಕ, ವಿ. ಸುನೀಲ್ ಕುಮಾರ್, ಸಂಸದರಾದ ಪಿ.ಸಿ.ಮೋಹನ್, ತೇಜಸ್ವಿ ಸೂರ್ಯ, ರಾಜ್ಯಸಭಾ ಸದಸ್ಯ ಜಗ್ಗೇಶ್ ಹಾಗೂ ಸಾವಿರಾರು ಮಂದಿ ವಿದ್ಯಾರ್ಥಿಗಳು, ಕಲಾವಿದರು ಪಾಲ್ಗೊಂಡಿದ್ದರು.






.jpeg)
.jpeg)
.jpeg)
.jpeg)
.jpeg)

