Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. 'BJP ಸರಕಾರದಲ್ಲಿ ಕಾಸಿಗಾಗಿ ಪೋಸ್ಟಿಂಗ್...

'BJP ಸರಕಾರದಲ್ಲಿ ಕಾಸಿಗಾಗಿ ಪೋಸ್ಟಿಂಗ್ ದಂಧೆಗೆ MTB ನಾಗರಾಜ್ ಹೇಳಿಕೆಯೇ ಸಾಕ್ಷಿ': ವಿಡಿಯೋ ಹಂಚಿಕೊಂಡ ಕುಮಾರಸ್ವಾಮಿ

ಇನ್ಸ್ ಪೆಕ್ಟರ್ ನಂದೀಶ್ ಸಾವು ಪ್ರಕರಣ; ಉನ್ನತ ಮಟ್ಟದ ತನಿಖೆಗೆ ಎಚ್‌ಡಿಕೆ ಆಗ್ರಹ

28 Oct 2022 7:36 PM IST
share
BJP ಸರಕಾರದಲ್ಲಿ ಕಾಸಿಗಾಗಿ ಪೋಸ್ಟಿಂಗ್ ದಂಧೆಗೆ MTB ನಾಗರಾಜ್ ಹೇಳಿಕೆಯೇ ಸಾಕ್ಷಿ: ವಿಡಿಯೋ ಹಂಚಿಕೊಂಡ ಕುಮಾರಸ್ವಾಮಿ
ಇನ್ಸ್ ಪೆಕ್ಟರ್ ನಂದೀಶ್ ಸಾವು ಪ್ರಕರಣ; ಉನ್ನತ ಮಟ್ಟದ ತನಿಖೆಗೆ ಎಚ್‌ಡಿಕೆ ಆಗ್ರಹ

ಬೆಂಗಳೂರು, ಅ.28: ಬಿಜೆಪಿ ಸರಕಾರದಲ್ಲಿ ಕಾಸಿಗಾಗಿ ಹುದ್ದೆ ಪೋಸ್ಟಿಂಗ್ ದಂಧೆ ತಾಂಡವಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಕೆ.ಆರ್.ಪುರ ಠಾಣೆ ಇನ್ಸ್ ಪೆಕ್ಟರ್ ನಂದೀಶ್ ಸಾವಿನ ಬಗ್ಗೆ ಉನ್ನತ ಮಟ್ಟದ ತನಿಖೆ ಆಗಬೇಕು ಎಂದು ಒತ್ತಾಯ ಮಾಡಿದ್ದಾರೆ.

ಈ ಸಂಬಂಧ ಸರಣಿ ಟ್ವೀಟ್‍ಗಳನ್ನು ಮಾಡಿರುವ ಅವರು, 'ಬಿಜೆಪಿ ಸರಕಾರದಲ್ಲಿ ಕಾಸಿಗಾಗಿ ಪೋಸ್ಟಿಂಗ್ ಕೊಡಲಾಗುತ್ತಿದೆ ಹಾಗೂ ನಂದೀಶ್ ಅವರಿಗೆ ಪೋಸ್ಟಿಂಗ್ ನೀಡಲು ಹಣ ಪಡೆದಿರುವ ಅಂಶವನ್ನು ಸಚಿವ ಎಂ.ಟಿ.ಬಿ.ನಾಗರಾಜ್ ಬಹಿರಂಗಪಡಿಸಿದ್ದಾರೆ' ಎಂದು ಹೇಳಿದ್ದಾರೆ.

''ಅಮಾನತು ಶಿಕ್ಷೆಗೆ ಗುರಿಯಾಗಿ ಧಾರುಣ ಸಾವಿಗೆ ತುತ್ತಾದ ಕೆ.ಆರ್.ಪುರ ಠಾಣೆ ಇನ್ಸ್ಸ್‍ಪೆಕ್ಟರ್ ನಂದೀಶ್ ಹೃದಯಾಘಾತಕ್ಕೆ ಕಾರಣವೇನು? ಇದು ಇಡೀ ರಾಜ್ಯದ ಪ್ರಶ್ನೆ. ಈಗ ಸರಕಾರವೇ ಸತ್ಯ ಹೇಳಿದೆ. ಸದ್ಯ, ಸರಕಾರವು ಸಾವಿನಲ್ಲೂ ಸತ್ಯ ಹೇಳುವ ಧೈರ್ಯ ಮಾಡಿದೆ. ಸಿಎಂ ಬಸವರಾಜ ಬೊಮ್ಮಾಯಿ ಸಂಪುಟ ಸಚಿವರೇ ವಿಷಯ ಬಹಿರಂಗ ಮಾಡಿದ್ದಾರೆ'' ಎಂದು ಕುಮಾರಸ್ವಾಮಿ ಹೇಳಿದ್ದಾರೆ.

'ರಾಜ್ಯದಲ್ಲಿ ಕಾಸಿಗಾಗಿ ಪೋಸ್ಟಿಂಗ್ ನಡೆಯುತ್ತಿದೆ ಎನುವುದನ್ನು ಸ್ವತಃ ಸರಕಾರವೇ ಒಪ್ಪಿಕೊಂಡಂತೆ ಆಗಿದೆ. ಪೋಸ್ಟಿಂಗ್ ಗೆ 70-80 ಲಕ್ಷ ರೂ. ಕೊಟ್ಟು ಬಂದರೆ ಹೃದಯಾಘಾತ ಆಗದೆ ಇನ್ನೇನಾಗುತ್ತದೆ ಎಂದು ಹೇಳಿರುವ ಸಚಿವ ಎಂಟಿಬಿ ನಾಗರಾಜ್ ಹೇಳಿಕೆಯು ಈ ಸರಕಾರದ ಕಾಸಿಗಾಗಿ ಪೋಸ್ಟಿಂಗ್ ದಂಧೆಗೆ ಹಿಡಿದ ಕನ್ನಡಿ'' ಎಂದು ಅವರು ಟೀಕಿಸಿದ್ದಾರೆ.

ಇದನ್ನೂ ಓದಿ: ಒಂದೇ ಕಾರ್ಡಿನಲ್ಲಿ ಎಚ್ ಡಿಕೆ, ಸಿದ್ದರಾಮಯ್ಯ ಭಾವಚಿತ್ರ: KPCC ಶಿಸ್ತು ಪಾಲನಾ ಸಮಿತಿಗೆ ದೂರು

''ಸಚಿವರೇ ಹೇಳಿದಂತೆ 70-80 ಲಕ್ಷ ರೂ.ಗಳನ್ನು ನಂದೀಶ್ ಯಾರಿಗೆ ಕೊಟ್ಟರು? ಇದರಲ್ಲಿ ಅವರ ಮೇಲಿನ ಉನ್ನತ ಅಧಿಕಾರಿಗಳು, ಗೃಹ ಸಚಿವರು ಮತ್ತು ಮುಖ್ಯಮಂತ್ರಿಗಳಿಗೆ ಪರ್ಸಂಟೇಜ್ ಹೋಗಿದೆಯಾ? ಅಥವಾ ಕಾಣದ ರಿಮೋಟ್ ಯಾವುದಾದರೂ ಇದೆಯಾ? ಸಚಿವರಂತೆ ನೀವೂ ಸತ್ಯ ಹೇಳಿ ಸಿಎಂ ಸಾಹೇಬರೇ'' ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

''ಎಂಟಿಬಿ ನಾಗರಾಜ್ ಹೇಳಿದ್ದು ನಿಜ ಎನ್ನುವುದಕ್ಕೆ ನಾನು ಟ್ಯಾಗ್ ಮಾಡಿರುವ ವಿಡಿಯೋ ತುಣುಕೇ ಸಾಕ್ಷಿ. ನನ್ನ ಪ್ರಶ್ನೆ ಇಷ್ಟೇ, ಈ ಬಗ್ಗೆ ಸಿಎಂ ಏನು ಹೇಳುತ್ತಾರೆ? ಸಂಘ ಸಂಸ್ಕಾರದ ಗೃಹ ಸಚಿವರು ಉತ್ತರ ನೀಡಲೇಬೇಕು. ಧಮ್ಮಿದ್ರೆ, ತಾಕತ್ತಿದ್ರೆ ಎನ್ನುವ ಮುಖ್ಯಮಂತ್ರಿಗಳು ಈ ಬಗ್ಗೆ ಮೌನ ಮುರಿಯುವ ತಾಕತ್ತು ತೋರಬೇಕು'' ಎಂದು ಅವರು ವ್ಯಂಗ್ಯವಾಡಿದ್ದಾರೆ.

'ಎಂಟಿಬಿ ನಾಗರಾಜ್ ಹೇಳಿದ್ದು ಸತ್ಯವಾ ಅಥವಾ ಸುಳ್ಳಾ ಎನ್ನುವುದನ್ನು ಮುಖ್ಯಮಂತ್ರಿಗಳೇ ಸ್ಪಷ್ಟಪಡಿಸಬೇಕು. ಸತ್ಯವೇ ಆಗಿದ್ದರೆ, ಇಡೀ ಪ್ರಕರಣವನ್ನು ಉನ್ನತ ತನಿಖೆಗೆ ಒಳಪಡಿಸಲೇ ಬೇಕು. ಸುಳ್ಳು ಎನ್ನುವುದಾದರೆ ಹೇಳಿಕೆ ಕೊಟ್ಟ ಸಚಿವರ ಕಥೆ ಏನು? ದಯವಿಟ್ಟು ಮಾತನಾಡಿ ಮುಖ್ಯಮಂತ್ರಿಗಳೇ' ಎಂದು ಅವರು ಪ್ರಶ್ನಿಸಿದ್ದಾರೆ.

''ಬಿಜೆಪಿ ಸರಕಾರವು ಕರ್ನಾಟಕ ಪೊಲೀಸ್ ವ್ಯವಸ್ಥೆಯ ನೈತಿಕಸ್ಥೈರ್ಯ ಕುಗ್ಗಿಸಿದೆ. ಬಿಜೆಪಿ ಹೈಕಮಾಂಡ್ ಏಜೆಂಟ್ ರಂತೆ ವರ್ತಿಸುತ್ತಿರುವ ಉತ್ತರ ಭಾರತದ ಕೆಲ ಹಿರಿಯ ಹಿಂದಿ ಪೊಲೀಸ್ ಅಧಿಕಾರಿಗಳು, ಕನ್ನಡ ಅಧಿಕಾರಿಗಳನ್ನು ಗುಲಾಮರಂತೆ ನೋಡುತ್ತಿದ್ದಾರೆ. ನಮ್ಮ ಕಿರಿಯ ಮಟ್ಟದ ಅಧಿಕಾರಿಗಳು ಅವರಿಗೆ ಊಳಿಗ ಮಾಡುವಂಥ ಸ್ಥಿತಿ ಇದೆ'' ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

'ಸಾವಿನ ಮನೆಗೆ ಸಾಂತ್ವನ ಹೇಳಲು ಹೋದ ಸಚಿವರೇ ಸತ್ತ ಜೀವದ ಬಗ್ಗೆ ಎಗ್ಗಿಲ್ಲದೇ ನಿರ್ಲಜ್ಜವಾಗಿ ಮಾತನಾಡಿದ್ದು ಸರಿಯೋ ತಪ್ಪೋ , ಆ ತರ್ಕ ಬೇಡ. ಆದರೆ, ರಾಜ್ಯದ ಜನತೆಗೆ ಸತ್ಯ ಗೊತ್ತಾಗಬೇಕಿದೆ. ಸಂಘ ಸಂಸ್ಕಾರದ ಸರಕಾರಕ್ಕೆ ಸತ್ಯ ಹೇಳದೇ ದಾರಿ ಇಲ್ಲ ಎಂದಿದ್ದಾರೆ' ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಅಮಾನತು ಶಿಕ್ಷೆಗೆ ಗುರಿಯಾಗಿ ಧಾರುಣ ಸಾವಿಗೆ ತುತ್ತಾದ ಕೆ.ಆರ್.ಪುರ ಠಾಣೆ ಇನ್ಸಪೆಕ್ಟರ್ ನಂದೀಶ್ ಅವರ ಹೃದಯಾಘಾತಕ್ಕೆ ಕಾರಣವೇನು? ಇದು, ಇಡೀ ರಾಜ್ಯದ ಪ್ರಶ್ನೆ.

ಈಗ ಸರಕಾರವೇ ಸತ್ಯ ಹೇಳಿದೆ! ಸದ್ಯ, ಸರಕಾರವು ಸಾವಿನಲ್ಲೂ ಸತ್ಯ ಹೇಳುವ ಧೈರ್ಯ ಮಾಡಿದೆ!! ಶ್ರೀ @BSBommai ಸಂಪುಟ ಸಚಿವರೇ ವಿಷಯ ಬಹಿರಂಗ ಮಾಡಿದ್ದಾರೆ.1/7#CashForPosting pic.twitter.com/mXqghB6cHz

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) October 28, 2022

ಅಲ್ಲಿಗೆ, ರಾಜ್ಯದಲ್ಲಿ ಕಾಸಿಗಾಗಿ ಪೋಸ್ಟಿಂಗ್ ನಡೆಯುತ್ತಿದೆ ಎನುವುದನ್ನು ಸ್ವತಃ ಸರಕಾರವೇ ಒಪ್ಪಿಕೊಂಡಂತೆ ಆಗಿದೆ. ಪೋಸ್ಟಿಂಗ್ ಗೆ 70-80 ಲಕ್ಷ ರೂ. ಕೊಟ್ಟು ಬಂದರೆ ಹೃದಯಾಘಾತ ಆಗದೆ ಇನ್ನೇನಾಗುತ್ತದೆ ಎಂದು ಹೇಳಿರುವ ಸಚಿವ ಎಂಟಿಬಿ ನಾಗರಾಜ್ ಅವರ ಹೇಳಿಕೆಯು ಈ ಸರಕಾರದ ಕಾಸಿಗಾಗಿ ಪೋಸ್ಟಿಂಗ್ ದಂಧೆಗೆ ಹಿಡಿದ ಕನ್ನಡಿ.2/7#CashForPosting

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) October 28, 2022
share
Next Story
X