Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಟ್ವಿಟರ್ ಮಾಲಿಕರು ಯಾರೇ ಆಗಿರಲಿ,ಅದು ಐಟಿ...

ಟ್ವಿಟರ್ ಮಾಲಿಕರು ಯಾರೇ ಆಗಿರಲಿ,ಅದು ಐಟಿ ನಿಯಮಗಳನ್ನು ಪಾಲಿಸಬೇಕು: ಕೇಂದ್ರ

28 Oct 2022 7:43 PM IST
share
ಟ್ವಿಟರ್ ಮಾಲಿಕರು ಯಾರೇ ಆಗಿರಲಿ,ಅದು ಐಟಿ ನಿಯಮಗಳನ್ನು ಪಾಲಿಸಬೇಕು: ಕೇಂದ್ರ

ಹೊಸದಿಲ್ಲಿ,ಅ.28: ಟ್ವಿಟರ್ (Twitter)ಅನ್ನು ಎಲಾನ್ ಮಸ್ಕ್ ಸ್ವಾಧೀನ ಪಡಿಸಿಕೊಂಡಿರುವುದು ಇಂತಹ ಕಂಪನಿಗಳಿಗಾಗಿರುವ ದೇಶದ ನಿಯಮಗಳನ್ನು ಅದು ಪಾಲಿಸುತ್ತದೆ ಎಂಬ ಭಾರತದ ನಿರೀಕ್ಷೆಯನ್ನು ಬದಲಿಸುವುದಿಲ್ಲ ಎಂದು ಶುಕ್ರವಾರ ಇಲ್ಲಿ ಹೇಳಿದ ಸಹಾಯಕ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ರಾಜೀವ್ ಚಂದ್ರಶೇಖರ್ (Rajeev Chandrasekhar)ಅವರು,ಭಾರತದ ಹೊಸ ಮಾಹಿತಿ ತಂತ್ರಜ್ಞಾನ (ಐಟಿ) ನಿಯಮಗಳು ಶೀಘ್ರವೇ ಪ್ರಕಟಗೊಳ್ಳಲಿವೆ ಎಂದು ತಿಳಿಸಿದರು.

ತನ್ನ ಪ್ಲಾಟ್ ಫಾರ್ಮ್ ನಿಂದ ಕೆಲವು ವಿಷಯಗಳನ್ನು ತೆಗೆಯುವಂತೆ ಸರಕಾರದ ಕೆಲವು ಆದೇಶಗಳನ್ನು ರದ್ದುಗೊಳಿಸುವಂತೆ ಟ್ವಿಟರ್ ಜುಲೈನಲ್ಲಿ ಕರ್ನಾಟಕ ಉಚ್ಚ ನ್ಯಾಯಾಲಯವನ್ನು ಕೇಳಿಕೊಂಡಿತ್ತು.

ಕಳೆದ ಎರಡು ವರ್ಷಗಳಲ್ಲಿ ಭಾರತೀಯ ಅಧಿಕಾರಿಗಳು ಕೆಲವು ಕಂಟೆಂಟ್ಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಟ್ವಿಟರ್ ಗೆ ಸೂಚಿಸಿದ್ದಾರೆ. ಸ್ವತಂತ್ರ ಸಿಖ್ ದೇಶವನ್ನು ಬೆಂಬಲಿಸುವ ಖಾತೆಗಳು,ರೈತರ ಪ್ರತಿಭಟನೆಗಳ ಕುರಿತು ಸುಳ್ಳು ಮಾಹಿತಿಗಳನ್ನು ಹರಡಿವೆ ಎನ್ನಲಾದ ಪೋಸ್ಟ್ ಗಳು ಮತ್ತು ಸರಕಾರದಿಂದ ಕೋವಿಡ್ ಸಾಂಕ್ರಾಮಿಕದ ನಿರ್ವಹಣೆಯನ್ನು ಟೀಕಿಸಿರುವ ಪೋಸ್ಟ್ ಗಳು ಇವುಗಳಲ್ಲಿ ಸೇರಿವೆ.

‘ಮಾಲಿಕರು ಯಾರೇ ಆಗಿದ್ದರೂ ಸಾಮಾಜಿಕ ಮಾಧ್ಯಮಗಳಿಗೆ ನಮ್ಮ ನಿಯಮಗಳು ಮತ್ತು ಕಾನೂನುಗಳು ಒಂದೇ ಆಗಿವೆ. ಹೀಗಾಗಿ ಭಾರತೀಯ ಕಾನೂನುಗಳು ಮತ್ತು ನಿಯಮಗಳ ಅನುಸರಣೆ ನಮ್ಮ ನಿರೀಕ್ಷೆಯಾಗಿದೆ ’ಎಂದು ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ಚಂದ್ರಶೇಖರ ಹೇಳಿದರು.

ಬಾಲಿವುಡ್ ನಟಿ ಕಂಗನಾ ರಣಾವತ್ ಅವರಂತಹ ವ್ಯಕ್ತಿಗಳಿಗೆ ಟ್ವಿಟರ್ ನಿಷೇಧದ ಕುರಿತು ಸರಕಾರದ ಯೋಚನೆಯೇನು ಎಂಬ ಪ್ರಶ್ನೆಗೆ ಚಂದ್ರಶೇಖರ್ ನೇರವಾಗಿ ಉತ್ತರಿಸಲಿಲ್ಲ. ಆದರೆ,ಹಲವಾರು ತಿಂಗಳುಗಳ ಸಮಾಲೋಚನೆಗಳ ಬಳಿಕ ಭಾರತದ ನೂತನ, ತಿದ್ದುಪಡಿಗೊಳಿಸಲಾದ ಐಟಿ ನಿಯಮಗಳು ಒಂದೆರಡು ದಿನಗಳಲ್ಲಿ ಪ್ರಕಟಗೊಳ್ಳಲಿವೆ ಎಂದು ತಿಳಿಸಿದರು.

ದ್ವೇಷಪೂರಿತ ಮತ್ತು ನಿಂದನೀಯ ನಡವಳಿಕೆ ಕುರಿತು ಟ್ವಿಟರ್ ನಿಯಮಗಳ ಉಲ್ಲಂಘನೆಗಾಗಿ ಕಳೆದ ವರ್ಷ ಪ್ಲಾಟ್ ಫಾರ್ಮ್ ನಿಂದ ನಿಷೇಧಿಸಲ್ಪಟ್ಟಿರುವ ರಣಾವತ್ ಶುಕ್ರವಾರ ಇನ್ಸ್ಟಾಗ್ರಾಮ್ನಲ್ಲಿ ಮಸ್ಕ್ ಟ್ವಿಟರ್ ನ್ನು ಸ್ವಾಧೀನ ಪಡಿಸಿಕೊಂಡಿದ್ದನ್ನು ಪ್ರಶಂಸಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರ ಕಟ್ಟಾ ಬೆಂಬಲಿಗರಾಗಿರುವ ರಣಾವತ್ ತನ್ನ ಟ್ವಿಟರ್ ಖಾತೆಯನ್ನು ಮರುಸ್ಥಾಪಿಸುವಂತೆ ಮಸ್ಕ್ ಅವರನ್ನು ಕೋರಿಕೊಂಡಿರುವ ಬಳಕೆದಾರರ ಪೋಸ್ಟ್ ಗಳನ್ನೂ ಶೇರ್ ಮಾಡಿಕೊಂಡಿದ್ದಾರೆ.

share
Next Story
X