Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸರ್ಕಾರಿ ವೈದ್ಯರಿಗೆ ಬಯೋಮೆಟ್ರಿಕ್‌...

ಸರ್ಕಾರಿ ವೈದ್ಯರಿಗೆ ಬಯೋಮೆಟ್ರಿಕ್‌ ಹಾಜರಾತಿ ಕಡ್ಡಾಯ: ಸಚಿವ ಸುಧಾಕರ್‌

28 Oct 2022 8:14 PM IST
share
ಸರ್ಕಾರಿ ವೈದ್ಯರಿಗೆ ಬಯೋಮೆಟ್ರಿಕ್‌ ಹಾಜರಾತಿ ಕಡ್ಡಾಯ: ಸಚಿವ ಸುಧಾಕರ್‌

ಮೈಸೂರು,ಅ.28: 'ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ವೈದ್ಯರು ಕೆಲಸದ ಅವಧಿಯಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸಿದರೆ ಅಂತಹವರ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ ಜರುಗಿಸಲಾಗುವುದು' ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಎಚ್ಚರಿಕೆ ನೀಡಿದರು.

ನಗರದ  ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಡಿದ ಅವರು, 'ಸರ್ಕಾರಿ  ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕೆಲವು ವೈದ್ಯರುಗಳು ಕೆಲಸದ ಅವಧಿಯಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಾರೆ ಎಂದು ಆರೋಪಗಳು ಕೇಳಿ ಬಂದಿವೆ.  ಈ ಹಿನ್ನಲೆಯಲ್ಲಿ ಪ್ರತಿ ಆಸ್ಪತ್ರೆಯಲ್ಲೂ ಬಯೋಮೆಟ್ರಿಕ್‌ ಅಳವಡಿಸಿ ದಿನದ ಮೂರು ಸಮಯದಲ್ಲೂ  ಅವರ ಹಾಜರಾತಿ ಕಡ್ಡಾಯ ಮಾಡಲಾಗುವುದು. ಜೊತೆಗೆ ಜಿಯೋಟೆಕ್ ಅಳವಡಿಕೆಗೂ ಚಿಂತಿಸಲಾಗಿದೆ.  ಇದಕ್ಕೂ ಮೀರಿ ಅವರು ಖಾಸಗಿ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸಲು ಹೊರಟರೆ ಅವರ ಮೇಲೆ ಕಠಿಣ ಕ್ರಮ ಜರುಗಿಸಲಾಗುವುದು ' ಎಂದು  ಹೇಳಿದರು.

''ಸರ್ಕಾರಿ ಕೆಲಸದ ಸಮಯದಲ್ಲಿ ಕರ್ತವ್ಯ ನಿರ್ವಹಿಸಿ ನಿಮ್ಮ ಕೆಲಸದ ಅವಧಿ ಮುಗಿದ ಬಳಿಕ ನೀವು ಯಾವುದೇ ಖಾಸಗಿ ಆಸ್ಪತ್ರೆಗೆ ಬೇಕಾದರೂ ಹೋಗಿ ಕೆಲಸ ನಿರ್ವಹಿಸಿ ನಿಮ್ಮನ್ನು ಯಾರೂ ಕೇಳುವುದಿಲ್ಲ. ಆದರೆ ಕೆಲಸದ ಅವಧಿಯನ್ನು ಬಿಟ್ಟು ಖಾಸಗಿ ಆಸ್ಪತ್ರೆಗೆ ಹೋಗಿ ಕೆಲಸ ನಿರ್ವಹಿಸಿದರೆ ಸರ್ಕಾರ ಸುಮ್ಮನೆ ಕೂರುವುದಿಲ್ಲ'' ಎಂದು ಹೇಳಿದರು.

ಈ ಹಿಂದೆ ತಜ್ಞ ವೈದ್ಯರ ಮೇಲೆ ಸರ್ಕಾರ ನಿಯಂತ್ರಿಸಲು ಮುಂದಾದರೆ ಅವರು ಕೆಲಸ ಬಿಟ್ಟು ಹೋಗುತ್ತಾರೆ ಎಂಬ ಭಯವಿತ್ತು. ಆದರೆ, ಈಗ ಆ ಭಯ ಇಲ್ಲ. ಯಾವುದೇ ತಜ್ಞ ವೈದ್ಯರು ಕೆಲಸ ಬಿಟ್ಟು ಹೋದರೆ ಹೊಸದಾಗಿ ಸೇರಿಸಿಕೊಳ್ಳಲು ಸರ್ಕಾರ ನೋಟೀಫೀಕೇಶನ್ ಹೊರಡಿಸಿದ 15 ದಿನದಲ್ಲಿ ತಜ್ಞ ವೈದ್ಯರು ನೇಮಕಾತಿ ಗೆ ಬರುತ್ತಾರೆ ಎಂದರು. ತಜ್ಞ ವೈದ್ಯರು ಖಾಸಗಿಯಾಗಿ ಪ್ರಾಕ್ಟಿಸ್ ಮಾಡಲೇ ಬೇಕೆಂಬುದಾದರೆ ಸರ್ಕಾರಿ ಆಸ್ಪತ್ರೆಗಳಲ್ಲೇ ಅವರಿಗೆ ವ್ಯವಸ್ಥೆ ಮಾಡುವುದಾಗಿಯೂ ಹೇಳಿದರು.

ಯಶಸ್ವಿನಿ ಆರೋಗ್ಯಸೇವೆ ಕುರಿತು ಮಾತನಾಡಿ, ಆಯುಷ್ಮಾನ್ ಭಾರತ್ ಕಾರ್ಡ್ ನ್ನು 4 ಕೋಟಿ 80 ಲಕ್ಷ ಮಂದಿಗೆ ವಿತರಿಸಲು ಸರ್ಕಾರ ಮುಂದಾಗಿದೆ. ಈ ಸಂದರ್ಭದಲ್ಲಿ ಒಬ್ಬ ರೋಗಿ ಎರಡು ಆರೋಗ್ಯ ಸೇವೆ ಲಾಭ ಪಡೆಯಲು ಸಾಧ್ಯವಿಲ್ಲ. ಹೀಗಾಗಿ ಸಹಕಾರ ಇಲಾಖೆಗೆ ಸೂಚನೆ ನೀಡಲಾಗಿದ್ದು,  ಆಯುಷ್ಮಾನ್ ಭಾರತ್ ಸೇವೆ ಪಡೆದವರು ಯಶಸ್ವಿ ನಿ ಸೇವೆ ಪಡೆಯಲು ಅರ್ಹರಾಗುವುದಿಲ್ಲ. ಈ ಬಗ್ಗೆ ಪರಿಶೀಲಿಸಿ ಯಶಸ್ವಿನಿ ಸೇವೆ ಲಭ್ಯ ಆಗುವ ರೀತಿ  ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

438 ನಮ್ಮ ಕ್ಲಿನಿಕ್ ಗಳನ್ನು ಮೊದಲ ಅವಧಿಗೆ ಬಡ, ಮಧ್ಯಮ ಹಾಗೂ ಕೊಳಚೆ ಪೀಡಿತ ಪ್ರದೇಶಗಳಲ್ಲಿ ಪ್ರಾರಂಭಿಸಲು ಸಿದ್ದತೆ ನಡೆದಿದೆ ಎಂದರು.

ಮಕ್ಕಳಲ್ಲಿ ಅನಿಮಿಯ ಖಾಯಿಲೆ ಹೆಚ್ಚಾಗಿ ಕಂಡು ಬರಿತ್ತಿರುವುದರಿಂದ ಅಂಗನವಾಡಿ ಕೇಂದ್ರ, ಆರೋಗ್ಯ ಕೇಂದ್ರದಲ್ಲಿ ಪೌಷ್ಟಿಕ ಆಹಾರ ನೀಡಲು ಸೂಚಿಸಲಾಗಿದೆ. 128 ಮಹಿಳಾ ಸ್ವಾಸ್ಥ ಕೇಂದ್ರ ಪ್ರಾರಂಭಿಸಿ ಮಹಿಳೆಯರ ಚಿಕಿತ್ಸೆ ಗೆ ತಜ್ಞರಿಂದ ಸಲಹೆ ಹಾಗೂ ಸೇವೆ ಒದಗಿಸಲಾಗುವುದು ಎಂದರು.

ತಜ್ಞ ವೈದ್ಯರ ಕೊರತೆ ನೀಗಿಸುವಲ್ಲೂ ಕ್ರಮ ಕೈಗೊಂಡಿದ್ದೇವೆ. ಮೈಸೂರು ಜಿಲ್ಲೆಗೆ ನೂತನ ಕ್ಯಾನ್ಸರ್ ಆಸ್ಪತ್ರೆ ಕೈಗೊಳ್ಳುವ ನಿಟ್ಟಿನಲ್ಲಿ ಕ್ರಮವಹಸಿದ್ದು, 130 ಕೋಟಿ ರೂ. ಗಳಲ್ಲಿ ಪ್ರಾರಂಭ ಆಗಲಿದೆ.ಮುಂದಿನ ಸಂಪುಟ ಸಭೆ ಅನುಮೋದನೆ ಪಡೆದು 50 ಕೋಟಿ ರೂ.ಗಳ ಪ್ರಾರಂಭಿಕ ಅನುದಾನ ಸಹ ನೀಡುವುದಾಗಿ ಹೇಳಿದರು. ಒಟ್ಟಾರೆ ಆರೋಗ್ಯ ಕರ್ನಾಟಕ ನಿರ್ಮಾಣಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಪ್ರಧಾನಮಂತ್ರಿ ಗಳ ಆದೇಶದ ಮೇರೆಗೆ ಕ್ಷಯ ಮುಕ್ತ ಭಾರತ ಅಭಿಯಾನ ಕೈಗೊಳ್ಳಲಾಗಿದೆ. ಭಾರತದಲ್ಲಿ 2030 ರ ವೇಳೆಗೆ ಭಾರತ ಕ್ಷಯ ಮುಕ್ತ ಆಗಬೇಕೆಂಬುದು ಪ್ರಧಾನಿಯವರ ಗುರಿಯಾಗಿದೆ. ಈ ನಿಟ್ಟಿನಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗಿದೆ. 2025 ಕ್ಕೆ ಕ್ಷಯ ಮುಕ್ತ ಕರ್ನಾಟಕ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಆರೋಗ್ಯ ಇಲಾಖೆ ನಿರ್ಧೇಶಕಿ ಡಾ.ಇಂದುಮತಿ, ಮೈಸೂರು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕೆ.ಎಚ್.ಪ್ರಕಾಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

share
Next Story
X