ದ್ವಿತೀಯ ದರ್ಜೆ ಸಹಾಯಕ ಹುದ್ದೆಗೆ ಅರ್ಜಿ ಆಹ್ವಾನ

ಉಡುಪಿ, ಅ.28: ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ವತಿಯಿಂದ ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳಿಗೆ ಮಾಜಿ ಸೈನಿಕರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ತೇರ್ಗಡೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿದ ಅಥವಾ ಎಸೆಸೆಲ್ಸಿಯಲ್ಲಿ ಉತ್ತೀರ್ಣರಾಗಿ ಸಶಸ್ತ್ರ ಪಡೆಯಲ್ಲಿ ಕನಿಷ್ಠ 15 ವರ್ಷ ಸೇವೆ ಸಲ್ಲಿಸಿ ಸ್ಪೆಷಲ್ ಸರ್ಟಿಫಿಕೆಟ್ ಹೊಂದಿದ ಅಥವಾ ಸಶಸ್ತ್ರ ಪಡೆಗಳಿಂದ ಪದವಿ ಪ್ರಮಾಣ ಪತ್ರ ಹೊಂದಿದ ಮಾಜಿ ಸೈನಿಕರು ಅರ್ಜಿ ಸಲ್ಲಿಸಬಹುದು.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಂಟಿ ನಿರ್ದೇಶಕರ ಕಾರ್ಯಾಲಯ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಮಂಗಳೂರು ದೂರವಾಣಿ ಸಂಖ್ಯೆ:0824-2450933ಅನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
Next Story





