ಬಿಜೆಪಿಯಿಂದ ದೇಶದಲ್ಲಿ ಬದಲಾವಣೆ ಪರ್ವ ಆರಂಭ: ನಳಿನ್ ಕುಮಾರ್ ಕಟೀಲ್

ಹನೂರು: 'ಹನೂರು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಮುಕ್ತ ಮಾಡಿದರೆ, ರಾಜ್ಯದಲ್ಲೇ ಹನೂರನ್ನು ಮಾದರಿ ಕ್ಷೇತ್ರವನ್ನಾಗಿ ಮಾಡಲಾಗುವುದು ಎಂದು ಬಿಜೆಪಿ ರಾಜ್ಯದ್ಯಕ್ಷ ನಳೀನ್ ಕುಮಾರ್ ಕಟೀಲ್ ತಿಳಿಸಿದರು.
ಹನೂರು ಪಟ್ಟಣದ ಗೌರಿ ಶಂಕರ ಕಲ್ಯಾಣ ಮಂಟಪ ಸಮೀಪ ಬಿಜೆಪಿ ಕಾರ್ಯಕರ್ತರ ಜನ ಸಂಕಲ್ಪ ಯಾತ್ರೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ‘ಬಿಜೆಪಿಯಿಂದ ದೇಶದಲ್ಲಿ ಬದಲಾವಣೆ ಪರ್ವ ಆರಂಭವಾಗಿದೆ. ರಾಜ್ಯದಲ್ಲಿ ಬಿ.ಎಸ್.ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಉತ್ತಮ ಆಡಳಿತ ನೀಡಿದ್ದಾರೆ. ಬೂತ್ ಮಟ್ಟದ ನಾಯಕರ ಜತೆ ಸಂವಾದ ಮಾಡಿ ಸಲಹೆ ಸೂಚನೆಗಳನ್ನು ನೀಡಿದ್ದೇನೆ' ಎಂದು ತಿಳಿಸಿದರು.
ಇದನ್ನೂ ಓದಿ: ಭಾಷಣದ ಮಧ್ಯೆ ಮೈಕ್ ಬಂದ್ ಆಗಿದ್ದಕ್ಕೆ ಸಿದ್ದರಾಮಯ್ಯ, ಡಿಕೆಶಿ ಮೇಲೆ ಸಂಶಯ ವ್ಯಕ್ತಪಡಿಸಿದ ನಳಿನ್ ಕುಮಾರ್ ಕಟೀಲ್ !
''ಗರೀಬ್ ಹಠಾವೊ ಹೆಸರಿನಲ್ಲಿ ಗಾಂಧಿ, ಖರ್ಗೆ, ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ತಮ್ಮ ಬಡತನವನ್ನು ದೂರ ಮಾಡಿಕೊಂಡಿದ್ದಾರೆ. ಸಿದ್ದರಾಮಯ್ಯ ಅವರಿಗೆ ಚುನಾವಣೆಗೆ ನಿಲ್ಲಲು ಕ್ಷೆತ್ರವೇ ಇಲ್ಲ. ಭಾರತ್ ಜೋಡೋ ಮೂಲಕ ಕ್ಷೇತ್ರ ಹುಡುಕುವ ಕೆಲಸ ಮಾಡುತ್ತಿದ್ದಾರೆ' ಎಂದು ವ್ಯಂಗ್ಯವಾಡಿದರು.