ಗುಜರಾತ್ ಚುನಾವಣೆ: 'ನಿಮ್ಮ ಮುಖ್ಯಮಂತ್ರಿಯನ್ನು ಆಯ್ಕೆ ಮಾಡಿ' ಅಭಿಯಾನ ಆರಂಭಿಸಿದ ಆಪ್
ಅಹಮದಾಬಾದ್: ಪ್ರಧಾನಿ ನರೇಂದ್ರ ಮೋದಿ ಅವರ ತವರು ರಾಜ್ಯದಲ್ಲಿ ಬಿಜೆಪಿಯನ್ನು ಸೋಲಿಸುವ ಪ್ರಯತ್ನದ ಭಾಗವಾಗಿ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ Aam Aadmi Party boss Arvind Kejriwal ಅವರು ಗುಜರಾತ್ಗೆ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಆಯ್ಕೆ ಮಾಡಲು ಕ್ರೌಡ್ ಸೋರ್ಸಿಂಗ್ ಅಭಿಯಾನವನ್ನು ಶನಿವಾರ ಆರಂಭಿಸಿದ್ದಾರೆ.
ರಾಜ್ಯದಲ್ಲಿ ಆಕ್ರಮಣಕಾರಿಯಾಗಿ ಪ್ರಚಾರ ಮಾಡುತ್ತಾ, ರ್ಯಾಲಿಗಳು ಮತ್ತು ಟೌನ್ಹಾಲ್ಗಳನ್ನು ನಡೆಸುತ್ತಿರುವ , ಉಚಿತ ವಿದ್ಯುತ್, ಉತ್ತಮ ಶಿಕ್ಷಣ ಹಾಗೂ ಆರೋಗ್ಯ ಸೌಲಭ್ಯಗಳಂತಹ ಚುನಾವಣಾ ಪೂರ್ವ ಭರವಸೆಗಳನ್ನು ನೀಡುತ್ತಿರುವ ದಿಲ್ಲಿ ಮುಖ್ಯಮಂತ್ರಿ ಕೇಜ್ರಿವಾಲ್ ಇದೀಗ "ನಿಮ್ಮ ಮುಖ್ಯಮಂತ್ರಿಯನ್ನು ಆರಿಸಿ" ಅಭಿಯಾನವನ್ನು ಆರಂಭಿಸಿದ್ದಾರೆ.
182 ಸದಸ್ಯ ಬಲದ ಗುಜರಾತ್ ವಿಧಾನಸಭೆಗೆ ಈ ವರ್ಷಾಂತ್ಯಕ್ಕೆ ಚುನಾವಣೆ ನಡೆಯಲಿದೆ. ಆದರೆ, ಮತದಾನದ ದಿನಾಂಕ ಇನ್ನಷ್ಟೇ ಘೋಷಣೆಯಾಗಬೇಕಿದೆ.
Next Story