Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಸ್ಟ್ರೋಕ್ ತಡೆಗಟ್ಟಲು ಸಾಧ್ಯವಿದೆಯೇ?

ಸ್ಟ್ರೋಕ್ ತಡೆಗಟ್ಟಲು ಸಾಧ್ಯವಿದೆಯೇ?

ಇಂದು ವಿಶ್ವ ಸ್ಟ್ರೋಕ್ ದಿನ

ಡಾ. ಮುರಲೀ ಮೋಹನ್, ಚೂಂತಾರುಡಾ. ಮುರಲೀ ಮೋಹನ್, ಚೂಂತಾರು29 Oct 2022 12:03 PM IST
share
ಸ್ಟ್ರೋಕ್ ತಡೆಗಟ್ಟಲು ಸಾಧ್ಯವಿದೆಯೇ?
ಇಂದು ವಿಶ್ವ ಸ್ಟ್ರೋಕ್ ದಿನ

ತಡೆಗಟ್ಟುವುದು ಹೇಗೆ?

ಶೇ. 80ರಷ್ಟು ಮೆದುಳಿನ ಆಘಾತವನ್ನು ಸಾಕಷ್ಟು ಮುಂಜಾಗರೂಕತೆ ವಹಿಸಿ ತಡೆಗಟ್ಟಬಹುದು.

1. ಜೀವನ ಶೈಲಿ ಬದಲಾಯಿಸಿ, ಮದ್ಯಪಾನ ಧೂಮಪಾನ ತ್ಯಜಿಸಬೇಕು. ಮಾದಕ ದ್ರವ್ಯವನ್ನು ಬಿಟ್ಟುಬಿಡಿ.

2. ವ್ಯಾಯಾಮ, ದೈಹಿಕ ಕಸರತ್ತು ಇರುವ ಜೀವನಶೈಲಿ ಅಳವಡಿಸಿ, ಸೋಮಾರಿ ಜೀವನಶೈಲಿ ಬಿಡಿ. ವಿಲಾಸಿ ಜೀವನಕ್ರಮಕ್ಕೆ ತಿಲಾಂಜಲಿ ಇಡಬೇಕು.

3. ಕೊಬ್ಬು ರಹಿತ ಆಹಾರ, ಕರಿದ ಪದಾರ್ಥಗಳನ್ನು ತ್ಯಜಿಸಿ ಕಾಳು ಧಾನ್ಯಗಳಿರುವ ಹಸಿ ತರಕಾರಿ, ಹಣ್ಣು ಹಂಪಲು ಜಾಸ್ತಿ ತಿನ್ನಬೇಕು.

4. ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡಬೇಕು.

5. ಅತಿಯಾದ ಬೊಜ್ಜು, ಸ್ಥೂಲಕಾಯ ಇರಲೇಬಾರದು. ಬಿಎಂಐ ಅಂದರೆ ದೇಹದ ತೂಕದ ಮಾಪನ 25ಕ್ಕಿಂತ ಕಡಿಮೆ ಇರಬೇಕು.

6. ಮಧುಮೇಹ ನಿಯಂತ್ರಣ ಮಾಡಬೇಕು.

7. ದಿನಕ್ಕೆ ಅರ್ಧ ಘಂಟೆ ಬಿರುಸು ನಡಿಗೆ ಮತ್ತು ದೈಹಿಕ ಕಸರತ್ತು ಮಾಡಬೇಕು.

ಪ್ರತೀ ವರ್ಷ ವಿಶ್ವದಾದ್ಯಂತ ಅಕ್ಟೋಬರ್ 29 ರಂದು ವಿಶ್ವ ಸ್ಟ್ರೋಕ್ (ಪಾರ್ಶ್ವವಾಯು) ದಿವಸ ಎಂದು ಆಚರಿಸಿ ಮೆದುಳಿನ ಆಘಾತ ಅಥವಾ ಸ್ಟ್ರೋಕ್ ಬಗ್ಗೆ ಜಾಗೃತಿ ಮೂಡಿಸಿ, ಸ್ಟ್ರೋಕ್ ಉಂಟಾಗುವ ಸಾಧ್ಯತೆಯನ್ನು ಕಡಿಮೆ ಮಾಡುವ ಪ್ರಯತ್ನವನ್ನು ಮಾಡಲಾಗುತ್ತದೆ. ಈ ಸ್ಟ್ರೋಕ್ ಎನ್ನುವುದು ಯಾರಿಗೆ ಬೇಕಾದರೂ, ಯಾವಾಗ ಬೇಕಾದರೂ, ಯಾವುದೇ ಹೊತ್ತಿನಲ್ಲಿ ಸಂಭವಿಸಬಹುದು. ಪ್ರತೀ ನಾಲ್ಕು ವಯಸ್ಕರಲ್ಲಿ ಒಬ್ಬರಿಗೆ ಜೀವನದಲ್ಲಿ ಒಮ್ಮೆಯಾದರೂ ಸ್ಟ್ರೋಕ್ ಆಗುತ್ತದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ವರದಿ ತಿಳಿಸಿದೆ. ಜಾಗತಿಕವಾಗಿ ಸಾವಿಗೆ ಅತೀ ಹೃದಯಾಘಾತದ ನಂತರ ಸಾವಿಗೆ ಕಾರಣವಾಗುವ ರೋಗಗಳಲ್ಲಿ ಸ್ಟ್ರೋಕ್ ಎರಡನೇ ಸ್ಥಾನ ಗಳಿಸಿದೆ. ಆದರೆ ಒಂದು ಸಮಾಧಾನಕರ ಅಂಶ ಎಂದರೆ ಹೆಚ್ಚಿನ ಎಲ್ಲಾ ಸ್ಟ್ರೋಕ್‌ಗಳನ್ನು ತಡೆಗಟ್ಟಬಹುದಾಗಿದೆ. ಈ ಆಚರಣೆ 2006ರಲ್ಲಿ ಆರಂಭವಾಗಿದ್ದು, ವಿಶ್ವ ಸ್ಟ್ರೋಕ್ ಸಂಸ್ಥೆ ಈ ಆಚರಣೆಯನ್ನು ಜಾರಿಗೆ ತಂದಿದೆ. 2010ರಲ್ಲಿ ಸ್ಟ್ರೋಕ್ ರೋಗವನ್ನು ಜಾಗತಿಕ ಆರೋಗ್ಯ ತುರ್ತು ಸಮಸ್ಯೆ ಎಂದು ವಿಶ್ವ ಸ್ಟ್ರೋಕ್ ಸಂಸ್ಥೆ ಘೋಷಿಸಿದೆ. ಅಮೆರಿಕ ದೇಶವೊಂದರಲ್ಲಿಯೇ ವಾರ್ಷಿಕವಾಗಿ 8 ಲಕ್ಷ ಮಂದಿ ಈ ಸ್ಟ್ರೋಕ್ ರೋಗಕ್ಕೆ ತುತ್ತಾಗುತ್ತಾರೆ. ಇದಲ್ಲದೆ ಈ ಸ್ಟ್ರೋಕ್ ಬಂದ ಬಳಿಕ ಸಕಾಲದಲ್ಲಿ ಸೂಕ್ತ ಚಿಕಿತ್ಸೆ ಸಿಗದಿದ್ದಲ್ಲಿ ಆ ವ್ಯಕ್ತಿ ಶಾಶ್ವತವಾಗಿ ಅಂಗವೈಕಲ್ಯ ಹೊಂದುತ್ತಾನೆ. ಈ ಕಾರಣದಿಂದಾಗಿ ಶಾಶ್ವತ ಅಂಗವೈಕಲ್ಯಉಂಟಾಗುವ ಕಾರಣಗಳಲ್ಲಿ ಸ್ಟ್ರೋಕ್‌ಗೆ ಮೊದಲ ಸ್ಥಾನ ಅನಾಯಾಸವಾಗಿ ದೊರೆತಿದೆ. ಜಾಗತಿಕವಾಗಿ ಸುಮಾರು 20 ಲಕ್ಷ ಮಂದಿ ವಾರ್ಷಿಕವಾಗಿ ಈ ರೋಗಕ್ಕೆ ತುತ್ತಾಗುತ್ತಾರೆ ಎನ್ನಲಾಗಿದೆ. ಜಗತ್ತಿನಲ್ಲಿ ಪ್ರತೀ ವರ್ಷ ಸ್ಟ್ರೋಕ್‌ಗೆ ತುತ್ತಾಗುವ ಮೂರನೇ ಒಂದಂಶದಷ್ಟು ಜನ ಸತ್ತರೆ ಇನ್ನುಳಿದ ಮೂರನೇ ಒಂದಂಶದಷ್ಟು ಜನ ಶಾಶ್ವತವಾಗಿ ಅಂಗ ವೈಕಲ್ಯಕ್ಕೆ ತುತ್ತಾಗುತ್ತಾರೆ. ಉಳಿದ ಮೂರನೇ ಒಂದಂಶದಷ್ಟು ಜನರಿಗೆ ಮಾತ್ರ ಸೂಕ್ತ ಚಿಕಿತ್ಸೆ ದೊರಕಿ ಮೊದಲಿನಂತಾಗುವ ಸಾಧ್ಯತೆ ಇರುತ್ತದೆ. ಯಾವುದೇ ವಯಸ್ಸಿನಲ್ಲಿ ಈ ಕಾಯಿಲೆ ಕಾಣಸಿಕೊಳ್ಳಬಹುದಾದರೂ, ಸಾಮಾನ್ಯವಾಗಿ 60 ವರ್ಷದ ನಂತರವೇ ಹೆಚ್ಚಾಗಿ ಕಾಣಸಿಗುತ್ತದೆ. ಮೆದುಳಿಗೆ ಯಾವುದಾದರೊಂದು ಭಾಗಕ್ಕೆ ರಕ್ತಸಂಚಾರ ನಿಂತು ಹೋಗಿ ಆ ಭಾಗದ ಮೆದುಳು ನಿರ್ಜೀವವಾಗುತ್ತದೆ ಮತ್ತು ಆ ಭಾಗದಿಂದ ನಿಯಂತ್ರಿಸಲ್ಪಡುವ ಕೆಲಸಗಳು ನಿಷ್ಕ್ರಿಯವಾಗುತ್ತದೆ. ಇದನ್ನೇ ಮೆದುಳಿನ ಆಘಾತ ಅಥವಾ ಸ್ಟ್ರೋಕ್ ಎನ್ನುತ್ತಾರೆ. ಎರಡು ರೀತಿಯ ಸ್ಟ್ರೋಕ್ ಇದ್ದು ಮೆದುಳಿನ ರಕ್ತನಾಳಗಳು ಒಡೆದುಕೊಂಡು ಮೆದುಳಿನ ಜೀವಕೋಶಗಳು ನಿರ್ಜೀವವಾಗುತ್ತದೆ. ಇದನ್ನು ಹಿಮೋರೇಜಿಕ್ ಸ್ಟ್ರೋಕ್ ಎನ್ನುತ್ತಾರೆ. ಇನ್ನೊಂದನ್ನು ಇಷ್ಕೆಮಿಕ್ ಸ್ಟ್ರೋಕ್ ಎನ್ನುತ್ತಾರೆ. ಇದರಲ್ಲಿ ರಕ್ತನಾಳಗಳ ಒಳಗೆ ರಕ್ತಹೆಪ್ಪುಗಟ್ಟಿಕೊಂಡು ರಕ್ತನಾಳಗಳಲ್ಲಿ ರಕ್ತ ಪರಿಚಲನೆಗೆ ಅಡ್ಡಿಯಾಗಿ, ಆ ಭಾಗದ ಮೆದುಳಿನ ಜೀವಕೋಶಗಳು ಸಾಯುತ್ತವೆ. ಇದು ಅತೀ ಸಾಮಾನ್ಯ ಮತ್ತು ಹೆಚ್ಚಾಗಿ ಕಾಣಸಿಗುವ ರೋಗವಾಗಿರುತ್ತದೆ. ಸ್ಟ್ರೋಕ್ ಯಾರಿಗೆ ಬರಬಹುದು?

* ಆಲ್ಕೋಹಾಲ್, ಸಿಗರೇಟ್ ಸೇವನೆ ಮಾದಕದ್ರವ್ಯ ಸೇವನೆ ಇರುವವರಿಗೆ ಸ್ಟ್ರೋಕ್ ಬರುವ ಸಾಧ್ಯತೆ ಹೆಚ್ಚಾಗಿರುತ್ತದೆ. * ಮಧುಮೇಹ ರೋಗಿಗಳು.

* ರಕ್ತದಲ್ಲಿ ಕೊಬ್ಬಿನ ಅಂಶ ಜಾಸ್ತಿ ಇರುವವರಿಗೆ.

* ಅಧಿಕ ರಕ್ತದೊತ್ತಡ ಇರುವವರಿಗೆ.

* ವಂಶ ಪಾರಂಪರ್ಯವಾಗಿ ವಂಶವಾಹಿನಿಗಳಲ್ಲಿಯೂ ಬರುವ ಸಾಧ್ಯತೆ ಇರುತ್ತದೆ.

* ಹೃದಯ ಸಂಬಂಧಿ ಕಾಯಿಲೆೆಗಳು ಮತ್ತು ಪೆಡಸುಗೊಂಡ ರಕ್ತನಾಳ ಇರುವವರಿಗೆ.

* ಸ್ಥೂಲಕಾಯ, ಬೊಜ್ಜು ಜಾಸ್ತಿ ಇರುವವರಿಗೆ ಮತ್ತು ವಿಲಾಸಿ ಜೀವನಶೈಲಿ ಇರುವವರಿಗೆ.

* ದುಡಿಮೆ ಇಲ್ಲದ, ದೈಹಿಕ ಶ್ರಮವಿಲ್ಲದ ಜೀವನಕ್ರಮ.

* ಅತಿಯಾದ ಮಾನಸಿಕ ಒತ್ತಡ, ಮಾನಸಿಕ ವ್ಯಥೆ ಮತ್ತು ಮಾನಸಿಕ ವ್ಯಾಧಿ.

* ಕುಡುಗೋಲು ಕಣ ಕಾಯಿಲೆೆ ಇರುವವರಿಗೆ.

* ಅತಿಯಾದ ನೋವು ನಿವಾರಕಗಳ ಸೇವನೆ.

* ಸಮತೋಲನ ಇರುವ ಆಹಾರ ಸೇವನೆ ಮಾಡದಿರುವುದು, ಅತಿಯಾದ ಜಂಕ್ ಆಹಾರ ಸೇವನೆ ಮತ್ತು ಕೊಬ್ಬು ಮತ್ತು ಕರಿದ ಪದಾರ್ಥಗಳ ಸೇವನೆ.

ಸ್ಟ್ರೋಕ್‌ನ ಲಕ್ಷಣಗಳು: * ಮುಖದ ಒಂದು ಭಾಗದಲ್ಲಿ ನೋವು, ಕೈ, ಕಾಲು, ಎದೆ ಭಾಗದಲ್ಲಿ ನೋವು ಇರಬಹುದು.

* ಕಣ್ಣು ಮಂಜಾಗುವುದು, ವಸ್ತುಗಳು ಎರಡೆರಡಾಗಿ ಕಾಣುವುದು.

* ಉಸಿರಾಡಲು ಕಷ್ಟವಾಗುವುದು, ನುಂಗಲು ಕಷ್ಟವಾಗುವುದು.

* ವಾಂತಿ, ವಾಕರಿಕೆ ಬಂದಂತಾಗುವುದು, ತಲೆ ತಿರುಗಿದಂತೆ ಭಾಸವಾಗುವುದು.

* ಮೈಯಲ್ಲಿ ನಡುಕ, ದೇಹದ ಸಮತೋಲನ ತಪ್ಪುವುದು, ಕೈಕಾಲುಗಳಲ್ಲಿ ಹೊಂದಾಣಿಕೆ ಇಲ್ಲದಿರುವುದು, ಕಣ್ಣು ಕತ್ತಲು ಬರುವುದು.

* ನಡೆದಾಡಲು ಕಷ್ಟವಾಗುವುದು, ಕೈಕಾಲುಗಳು ಮರಗಟ್ಟಿದಂತೆ ಭಾಸವಾಗಬಹುದು.

* ಮುಖ ಸೊಟ್ಟಗಾಗುವುದು, ಮುಖದಲ್ಲಿನ ಸ್ನಾಯುಗಳ ಮೇಲಿನ ನಿಯಂತ್ರಣ ತಪ್ಪುತ್ತದೆ. ಒಂದು ಭಾಗದ ಮುಖದಲ್ಲಿ ಸ್ನಾಯುಗಳ ನಿಯಂತ್ರಣ ಕಳೆದುಕೊಂಡು ಸೊಟ್ಟಗಾಗುತ್ತದೆ. ಕೈಕಾಲುಗಳ ನಿಯಂತ್ರಣವೂ ತಪ್ಪುತ್ತದೆ. ಎರಡು ಕೈಗಳನ್ನು ತಲೆಯ ಮೇಲೆ ಎತ್ತಲು ಹೇಳಿದಾಗ ಎರಡು ಕೈಗಳನ್ನು ಎತ್ತಲು ಕಷ್ಟವಾಗಬಹುದು. ಅದೇ ರೀತಿ ನಗಲು ಸಾಧ್ಯವಾಗುವುದಿಲ್ಲ.

* ತಲೆನೋವು, ಕೆಲವೊಮ್ಮೆ ಕಾರಣವಿಲ್ಲದೆ ಅತಿಯಾದ ತಲೆನೋವು ಬರಬಹುದು.

* ಏನಾದರೂ ಕೆಲಸದ ಮಧ್ಯದಲ್ಲಿರುವಾಗ ಎಲ್ಲಾ ಆಲೋಚನೆಗಳು ನಿಷ್ಕ್ರಿಯವಾಗಿ ಏನೂ ತೋಚದಂತಾಗುವುದು, ಯೋಚನಾಶಕ್ತಿ ಕಳೆದುಕೊಳ್ಳುವುದು.

* ಮಾತಾನಾಡಲು ಕಷ್ಟವಾಗುವುದು, ತೊದಲುವುದು ಇತ್ಯಾದಿ.

* ಅತಿಯಾದ ಸುಸ್ತು ಆಯಾಸ ಮತ್ತು ಭ್ರಾಂತಿಗಳಾಗುವುದು.

ಗುರುತಿಸುವುದು ಹೇಗೆ?:

FAST ಎಂಬ ಶಬ್ದದ ಮುಖಾಂತರ ಸ್ಟ್ರೋಕ್‌ನ್ನು ಗುರುತಿಸಲಾಗುತ್ತದೆ ಮತ್ತು ತಕ್ಷಣವೇ ಸ್ಪಂದಿಸಲಾಗುತ್ತದೆ.F (FACE)  ಅಂದರೆ ಮುಖದಲ್ಲಿನ ನಗಲು ಸಾಧ್ಯವಾಗದಿರುವುದು. A (ARMS) ಅಂದರೆ ಎರಡೂ ಕೈಗಳನ್ನು ಮೇಲೆತ್ತಲು ಸಾಧ್ಯವಾಗದಿರುವುದು. S (SPEECH) ಅಂದರೆ ಮಾತನಾಡಲು ಕಷ್ಟವಾಗಿ ತೊದಲುವುದು. T (TIME) ಕಾಲಹರಣ ಮಾಡದೆ ಕೂಡಲೇ ಆಸ್ಪತ್ರೆಗೆ ಧಾವಿಸಬೇಕು. ಜಾಸ್ತಿ ಕಾಲಹರಣ ಮಾಡಿದಷ್ಟೂ ಮೆದುಳಿನ ಅಘಾತದ ತೀವ್ರತೆ ಹೆಚ್ಚುತ್ತದೆ.

ಕೊನೆಮಾತು:

ಮೆದುಳಿನ ಆಘಾತ ಬಹಳ ಸುಲಭವಾಗಿ ಗುರುತಿಸಬಹುದಾದ ಕಾಯಿಲೆ. ಯಾವತ್ತೂ ಮುನ್ಸೂಚನೆ ಇಲ್ಲದೆ ಈ ರೋಗ ಬರುವುದೇ ಇಲ್ಲ. ತಕ್ಷಣವೇ ಗುರುತಿಸಿ ಚಿಕಿತ್ಸೆ ನೀಡಿದಲ್ಲಿ ಮೊದಲಿನಂತೆ ಜೀವನ ನಡೆಸಬಹುದು. ಅತಿ ಸುಲಭವಾಗಿ ಗುರುತಿಸಬಹುದಾದ ಮತ್ತು ಚಿಕಿತ್ಸೆಗೆ ಸೂಕ್ತವಾಗಿ ಸ್ಪಂದಿಸುವ ರೋಗ ಇದಾಗಿರುವುದರಿಂದ ತಕ್ಷಣವೇ ಗುರುತಿಸಿ ಚಿಕಿತ್ಸೆ ಪಡೆಯುವುದರಲ್ಲಿಯೇ ಜಾಣತನ ಅಡಗಿದೆ.

share
ಡಾ. ಮುರಲೀ ಮೋಹನ್, ಚೂಂತಾರು
ಡಾ. ಮುರಲೀ ಮೋಹನ್, ಚೂಂತಾರು
Next Story
X