Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೋಟಿ ಕಂಠ ಗಾಯನ ಎನ್ನುತ್ತಲೇ ಕನ್ನಡದ...

ಕೋಟಿ ಕಂಠ ಗಾಯನ ಎನ್ನುತ್ತಲೇ ಕನ್ನಡದ ಕತ್ತು ಸೀಳುವುದಾ?: ಕುಮಾರಸ್ವಾಮಿ ಕಿಡಿ

ಎಸ್‌ಎಸ್‌ಸಿ ಪರೀಕ್ಷೆಯಲ್ಲಿ ಕನ್ನಡ ಕಡೆಗಣನೆಗೆ ಎಚ್ ಡಿಕೆ ಆಕ್ಷೇಪ

29 Oct 2022 12:05 PM IST
share
ಕೋಟಿ ಕಂಠ ಗಾಯನ ಎನ್ನುತ್ತಲೇ ಕನ್ನಡದ ಕತ್ತು ಸೀಳುವುದಾ?: ಕುಮಾರಸ್ವಾಮಿ ಕಿಡಿ
ಎಸ್‌ಎಸ್‌ಸಿ ಪರೀಕ್ಷೆಯಲ್ಲಿ ಕನ್ನಡ ಕಡೆಗಣನೆಗೆ ಎಚ್ ಡಿಕೆ ಆಕ್ಷೇಪ

ಬೆಂಗಳೂರು:  'ಪೇದೆ ಆಯ್ಕೆಗೆ ಅರ್ಜಿ ಕರೆದಿರುವ ಕೇಂದ್ರ ಸಿಬ್ಬಂದಿ ಆಯ್ಕೆ ಆಯೋಗ (ಎಸ್ ಎಸ್ ಸಿ) ಹಿಂದಿ, ಇಂಗ್ಲೀಷ್ ನಲ್ಲಿ ಮಾತ್ರ ಪರೀಕ್ಷೆ ಬರೆಯುವ ಅವಕಾಶ ನೀಡಿದೆ. ಹಾಗಾದರೆ, ಕನ್ನಡವೂ ಸೇರಿ ಇತರೆ ಪ್ರಾದೇಶಿಕ ಭಾಷೆಗಳನ್ನು ಮಾತನಾಡುವ ಅಭ್ಯರ್ಥಿಗಳು ಏನು ಮಾಡಬೇಕು? ಹಿಂದಿಗೆ ಬೆಣ್ಣೆ, ಕನ್ನಡಕ್ಕೆ ಸುಣ್ಣ. ಇದೆಂಥಾ ನ್ಯಾಯ?' ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಕೇಂದ್ರ ಮತ್ತು ರಾಜ್ಯ ಸರಕಾರಗಳ ವಿರುದ್ಧ ಕಿಡಿಕಾರಿದ್ದಾರೆ. 

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ' ಕನ್ನಡದ ಕತ್ತು ಹಿಚುಕುವುದನ್ನೇ ನಿತ್ಯ ಕಾಯಕ ಮಾಡಿಕೊಂಡಿರುವ ಬಿಜೆಪಿ  ಆಡಳಿತಕ್ಕೆ ದೇಶದ ಎಲ್ಲಾ ಪ್ರಾದೇಶಿಕ ಭಾಷೆಗಳನ್ನು ಮುಗಿಸಲೇಬೇಕು ಎನ್ನುವ ಹಪಾಹಪಿ, ತವಕ, ಹಠ ಉತ್ಕಟವಾಗಿದೆ ಎನ್ನುವುದಕ್ಕೆ ಇಲ್ಲಿದೆ ಹೊಸ ಸಾಕ್ಷಿ' ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

''ಗಡಿ ಭದ್ರತಾ ಪಡೆ, ಕೇಂದ್ರೀಯ ಕೈಗಾರಿಕಾ ಪಡೆ, ಕೇಂದ್ರ ಪೊಲೀಸ್ ಮೀಸಲು ಪಡೆ, ಇಂಡೋ ಟಿಬೆಟಿಯನ್ ಗಡಿ ಪೊಲೀಸ್, ಸಶಸ್ತ್ರ ಸೀಮಾಬಲ, ಸಚಿವಾಲಯ ಭದ್ರತಾ ಪಡೆ, ಅಸ್ಸಾಂ ರೈಫಲ್ಸ್, ಮಾದಕ ವಸ್ತು ನಿಯಂತ್ರಣಾ ಇಲಾಖೆ ಸೇರಿ ಹಲವು ವಿಭಾಗಗಳಿಗೆ ಪೇದೆಗಳ ಆಯ್ಕೆಗೆ ಜನವರಿಯಲ್ಲಿ ಪರೀಕ್ಷೆ ನಡೆಯಲಿದೆ.  ಈ ಪರೀಕ್ಷೆ ಕೇವಲ ಹಿಂದಿ, ಇಂಗ್ಲೀಷ್ ನಲ್ಲಿ ಮಾತ್ರ ಇರುತ್ತದೆ. ಅಲ್ಲಿಗೆ ಹಿಂದಿ ಭಾಷಿಕರು ಬಿಟ್ಟರೆ ಬೇರೆ ಯಾರೂ ಆಯ್ಕೆ ಆಗಲೇಬಾರದು ಎನ್ನುವ ಹುನ್ನಾರ ಇದರಲ್ಲಿ ಅಡಗಿದೆ. ನನ್ನ ಅಭಿಪ್ರಾಯದಲ್ಲಿ, ಇದು ಕನ್ನಡ ವಿರೋಧಿ ಅಷ್ಟೇ ಅಲ್ಲ; ಭಾರತವನ್ನು ಉತ್ತರ, ದಕ್ಷಿಣ ಎಂದು ವಿಭಜಿಸಲು ಕೇಂದ್ರ ಬಿಜೆಪಿ ಸರಕಾರವೇ ಕೊಡುತ್ತಿರುವ ಕುಮ್ಮಕ್ಕು' ಎಂದು ಆರೋಪಿಸಿದ್ದಾರೆ. 

'ಕೇಂದ್ರ ಬಿಜೆಪಿ ಸರಕಾರ ಈ ಅಪಾಯದ ಅರಿವು ಮಾಡಿಕೊಂಡು, ಕೂಡಲೇ ಈ ಕನ್ನಡ ವಿರೋಧಿ ಆದೇಶ ಹಿಂಪಡೆದು, ಹೊಸ ಆದೇಶ ಹೊರಡಿಸಿ ಕನ್ನಡವೂ ಸೇರಿ ಎಲ್ಲಾ ಪ್ರಾದೇಶಿಕ ಭಾಷೆಗಳಲ್ಲಿ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಬೇಕು. ಇಲ್ಲವಾದರೆ, ಬೀದಿಗಿಳಿದು ಕನ್ನಡಿಗರ ಶಕ್ತಿ ಏನೆಂದು ತೋರಿಸಬೇಕಾಗುತ್ತದೆ' ಎಂದು ಎಚ್ಚರಿಕೆ ನೀಡಿದ್ದಾರೆ. 

'ಕೋಟಿ ಕಂಠ ಗಾಯನ ಎಂದರೆ ಕೋಟಿಗೂ ಹೆಚ್ಚು ಕನ್ನಡ ಕಂಠಗಳಿಗೆ ಜೀವ ತುಂಬುವುದು, ಅನ್ನದ ದಾರಿ ತೋರಿಸುವುದು, ಬದುಕಿನ ಖಾತರಿ ಕೊಡುವುದು. ಕೇವಲ ನಾಲಿಗೆ ಮೇಲೆ ಕನ್ನಡ ಎಂದು ಹೇಳಿ, ಮನದಾಳದಲ್ಲಿ ಅದೇ ಕನ್ನಡದ ಮೇಲೆ ವಿಷ ಕಕ್ಕುವುದಲ್ಲ. ಅದನ್ನು ಕನ್ನಡಿಗರು ಎಂದಿಗೂ ಸಹಿಸುವುದೂ ಇಲ್ಲ' ಎಂದು ಹೇಳಿದ್ದಾರೆ. 

''ಕನ್ನಡಿಗರಿಗೆ ಬೇಕಿದೆ ಉತ್ತರ'' : ''ನಿನ್ನೆಯಷ್ಟೇ ಕೋಟಿ ಕಂಠ ಗಾಯನ ಕಾರ್ಯಕ್ರಮ ಮಾಡಿದ ರಾಜ್ಯ ಬಿಜೆಪಿ ಸರಕಾರ ಕನ್ನಡಿಗರಿಗೆ ಆಗುತ್ತಿರುವ ಅನ್ಯಾಯದ ಬಗ್ಗೆ ಏನು ಹೇಳುತ್ತದೆ? ಕೋಟಿ ಕಂಠ ಗಾಯನ ಎನ್ನುತ್ತಲೇ ಕನ್ನಡದ ಕತ್ತು ಸೀಳುವುದಾ? ಕನ್ನಡಿಗರ ಅನ್ನ ಕಸಿದುಕೊಳ್ಳುವುದಾ? ಕನ್ನಡಿಗರ ಹಕ್ಕುಗಳಿಗೆ ಮರಣಶಾಸನ ಬರೆಯುವುದಾ? ಕನ್ನಡಿಗರಿಗೆ ಬೇಕಿದೆ ಉತ್ತರ'' ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ. 

ನಿನ್ನೆಯಷ್ಟೇ ಕೋಟಿ ಕಂಠ ಗಾಯನ ಕಾರ್ಯಕ್ರಮ ಮಾಡಿದ ರಾಜ್ಯ ಬಿಜೆಪಿ ಸರಕಾರ ಕನ್ನಡಿಗರಿಗೆ ಆಗುತ್ತಿರುವ ಅನ್ಯಾಯದ ಬಗ್ಗೆ ಏನು ಹೇಳುತ್ತದೆ?
ಕೋಟಿ ಕಂಠ ಗಾಯನ ಎನ್ನುತ್ತಲೇ ಕನ್ನಡದ ಕತ್ತು ಸೀಳುವುದಾ? ಕನ್ನಡಿಗರ ಅನ್ನ ಕಸಿದುಕೊಳ್ಳುವುದಾ? ಕನ್ನಡಿಗರ ಹಕ್ಕುಗಳಿಗೆ ಮರಣಶಾಸನ ಬರೆಯುವುದಾ? ಕನ್ನಡಿಗರಿಗೆ ಬೇಕಿದೆ ಉತ್ತರ. 7/7

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) October 29, 2022
share
Next Story
X