ನ.6ರಂದು ಬೆಂಗಳೂರಿಗೆ ಖರ್ಗೆ, ಅದ್ದೂರಿ ಸ್ವಾಗತಕ್ಕೆ ನಿರ್ಧಾರ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್
ಶಿವಮೊಗ್ಗ: 'ಎಐಸಿಸಿ ನೂತನ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ನವೆಂಬರ್ 6 ರಂದು ಬೆಂಗಳೂರಿಗೆ ಆಗಮಿಸಲಿದ್ದಾರೆ' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಮಲ್ಲಿಕಾರ್ಜುನ ಖರ್ಗೆ ಅವರನ್ನು ಅದ್ದೂರಿಯಾಗಿ ಸ್ವಾಗತಿಸಲು ಬೆಂಗಳೂರಿನಲ್ಲಿ ಎಲ್ಲಾ ತಯಾರಿ ನಡೆಸುತ್ತಿದ್ದೇನೆ. ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಖರ್ಗೆ ಸ್ವಾಗತಕ್ಕೆ ಬೆಂಗಳೂರಿಗೆ ಬರಬೇಕು' ಎಂದು ತಿಳಿಸಿದರು.
'ದೇಶದಲ್ಲಿ ಎಲ್ಲಾ ಕಡೆ ಆಪರೇಷನ್ ಕಮಲ ನಡೆಯುತ್ತಿದೆ. ತೆಲಂಗಾಣದಲ್ಲಿ ಆಪರೇಷನ್ ಕಮಲ ಬಹಿರಂಗವಾಗಿದೆ ಎಂದ ಅವರು, ರಾಜ್ಯದಲ್ಲಿ ಆಪರೇಷನ್ ಕಮಲ ಮೂಲಕ ಸರಕಾರ ಅಧಿಕಾರಕ್ಕೆ ಬಂದಿದೆ, ಸುಪ್ರೀಂ ಕೋರ್ಟ್ ಮಧ್ಯ ಪ್ರವೇಶಿಸಿ ಈ ಬಗ್ಗೆ ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿಕೊಳ್ಳಬೇಕು' ಎಂದು ಒತ್ತಾಯಿಸಿದರು.
Next Story