Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ʼಅಖಂಡ ಭಾರತ ದೊಂದಿ ಮೆರವಣಿಗೆʼ...

ʼಅಖಂಡ ಭಾರತ ದೊಂದಿ ಮೆರವಣಿಗೆʼ ಪಾಕಿಸ್ತಾನಕ್ಕೂ ಸಾಗಲಿ : ರಮಾನಾಥ ರೈ ಸವಾಲು

29 Oct 2022 3:41 PM IST
share
ʼಅಖಂಡ ಭಾರತ ದೊಂದಿ ಮೆರವಣಿಗೆʼ ಪಾಕಿಸ್ತಾನಕ್ಕೂ ಸಾಗಲಿ : ರಮಾನಾಥ ರೈ ಸವಾಲು

ಮಂಗಳೂರು, ಅ.29: ಭಾರತ್ ಜೋಡೋ ಯಾತ್ರೆಯನ್ನು ಟೀಕೆ ಮಾಡಿ, ಯಾತ್ರೆ ಪಾಕಿಸ್ತಾನಕ್ಕೆ ಹೋಗಿ ಮಾಡಲಿ ಎನ್ನುವ ಬಿಜೆಪಿಯವರು ತಮ್ಮ  ಅಖಂಡ ಭಾರತ ದೊಂದಿ ಮೆರವಣಿಗೆಯನ್ನು ಪಾಕಿಸ್ತಾನದ ಸಹಿತ ಅಖಂಡವಾಗಿದ್ದ ಇತರ ದೇಶಗಳಲ್ಲೂ ನಡೆಸಲಿ ಎಂದು ಮಾಜಿ ಸಚಿವ ರಮಾನಾಥ ರೈ ಸವಾಲು ಹಾಕಿದ್ದಾರೆ.

ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಅಖಂಡವಾಗಿದ್ದ ಭಾರತದಿಂದ ಅನೇಕ ದೇಶಗಳು ಪ್ರತ್ಯೇಕವಾಗಿವೆ. ಹಾಗಾಗಿ ಭಾರತ್ ಜೋಡೋ ಯಾತ್ರೆ ಬಗ್ಗೆ ಅಪವಾದ ಮಾಡುವವರು ತಮ್ಮ ಮೆರವಣಿಗೆಯನ್ನು  ಬರ್ಮಾ, ಬಾಂಗ್ಲಾದೇಶ ಸೇರಿದಂತೆ ಅಖಂಡವಾಗಿದ್ದ ಇತರ ದೇಶಗಳಲ್ಲಿ ಹೋಗಿ ನಡೆಸಲಿ. ಯಾರೂ ತಡೆಯಲಾರರು. ಬಿಜೆಪಿಯವರ ಟೀಕೆಗೆ ಅವರದ್ದೇ ಧ್ವನಿಯಲ್ಲಿ ಉತ್ತರ ನೀಡಬೇಕಾದ ಅನಿವಾರ್ಯತೆ ಎದುರಾಗಿದೆ ಎಂದರು.

ಧರ್ಮದ ಆಧಾರದಲ್ಲಿ ದೇಶವನ್ನು ಒಡೆಯುವ ಶಕ್ತಿಗಳ ವಿರುದ್ಧ ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆಯನ್ನು ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಹಮ್ಮಿಕೊಂಡಿದ್ದಾರೆ. ಯಾತ್ರೆ ಇದೀಗ ತೆಲಂಗಾಣ ಪ್ರವೇಶಿಸಿದ್ದು, ಪಾದಯಾತ್ರೆಯುದ್ದಕ್ಕೂ ಎಲ್ಲಾ ವರ್ಗದ ಜನ ಅವರನ್ನು ಸ್ವಾಗತಿಸುವ ಮೂಲಕ ಯಶಸ್ವಿಯಾಗಿ ಸಾಗುತ್ತಿದೆ. ರಾಹುಲ್‌ರವರು ತಮ್ಮ ಯಾತ್ರೆಯುದ್ದಕ್ಕೂ ಪ್ರೀತಿ ತೋರಿಸುತ್ತಿದ್ದಾರೆ. ಆದರೆ ಬಿಜೆಪಿಯವರು ರಥಯಾತ್ರೆ ಮಾಡಿ ರಕ್ತದೋಕುಳಿ ಹರಿಸಿದ್ದರು ಎಂದು ಆರೋಪಿಸಿದರು.

ಉತ್ತರ ಪ್ರದೇಶ, ದೆಹಲಿ ಸೇರಿದಂತೆ ಕೆಲವೊಂದು ರಾಜ್ಯಗಳನ್ನು ಸೀಮಿತವಾಗಿ ಸುಪ್ರೀಂ ಕೋರ್ಟ್ ದ್ವೇಷ ಭಾಷಣದ ವಿರುದ್ಧ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಬೇಕು ಎಂದು ಹೇಳಿದೆ. ಈ ಆದೇಶ ದ.ಕ. ಜಿಲ್ಲೆಗೆ  ಅನ್ವಯ ಆಗಬೇಕಾಗಿದೆ. ಯಾವುದೇ ಧರ್ಮದ ವಿರುದ್ಧ ದ್ವೇಷ ಭಾಷಣ ಮಾಡುವವರಿಗೆ ಈ ಆದೇಶ ಅನ್ವಯವಾದರೆ ಸಾಮರಸ್ಯ ನೆಲೆಯಾಗಲಿದೆ ಎಂದು ರಮಾನಾಥ ರೈ ಹೇಳಿದರು.

ಜಿಲ್ಲೆಯಲ್ಲಿ ಚುನಾವಣೆ ಹತ್ತಿರ ಬರುವಾಗ  ಕಾನೂನು ಕೈಗತ್ತಿಕೊಳ್ಳುವ ಪ್ರಸಂಗಗಳು ನಡೆಯುತ್ತವೆ. ಕಾಣಿಯೂರು ಪ್ರಕರಣಕ್ಕೆ ಸಂಬಂಧಿಸಿ ಸಿಒಡಿ ತನಿಖೆಯಾಗಬೇಕು ಎಂದು  ರಮಾನಾಥ ರೈ ಆಗ್ರಹಿಸಿದರು.

ಹಿರಿಯ ಕಾಂಗ್ರೆಸ್ ನಾಯಕ, ರಾಜ್ಯ ಸಭೆಯ ವಿಪಕ್ಷ ನಾಯಕನಾಗಿ ಕಾರ್ಯ ನಿರ್ವಹಿಸಿರುವ ಮಲ್ಲಿಕಾರ್ಜುನ ಖರ್ಗೆಯವರು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿರುವ ಬಗ್ಗೆ ಸಿಟಿ ರವಿ ಕೇವಲವಾಗಿ ಮಾತನಾಡಿದ್ದಾರೆ. ಖರ್ಗೆಯವರು ಲೈಫ್ ಜಾಕೆಟ್ ಹಾಕಿಕೊಂಡು ಕೆಲಸ ಮಾಡಬೇಕೆಂದು ಹೇಳಿಕೆ ನೀಡಿದ್ದಾರೆ. ರಾಜಕೀಯಲ್ಲಿ ಮೊನ್ನೆಯಷ್ಟೇ ಕಣ್ಣು ಬಿಟ್ಟಿರುವ ಸಿಡಿ ರವಿಗೆ ಖರ್ಗೆ ಬಗ್ಗೆ ಮಾತನಾಡುವ ಯಾವುದೇ ಯೋಗ್ಯತೆ ಇಲ್ಲ ಎಂದು ರಮಾನಾಥ ರೈ ಹೇಳಿದರು.

ಸಿಟಿ ರವಿಯ ವಯಸ್ಸಿಗಿಂದ ಖರ್ಗೆಯವರಿಗೆ ರಾಜಕೀಯ ಅನುಭವ ಇದೆ. ಸಿಟಿ ರವಿ ಹೇಗಿದ್ದವರು ಯಾವ ರೀತಿಯಾಗಿ ಆರ್ಥಿಕವಾಗಿ ಬಲಿಷ್ಟರಾಗಿದ್ದಾರೆಂಬುದು ಚಿಕ್ಕಮಂಗಳೂರಿನ ಜನತೆಗೆ ತಿಳಿದಿದೆ ಎಂದು ರೈ ಹೇಳಿದರು.

ಗೋಷ್ಠಿಯಲ್ಲಿ ಮುಖಂಡರಾದ ಹರಿನಾಥ್, ಶಶಿಧರ ಹೆಗ್ಡೆ, ಟಿ.ಕೆ. ಸುಧೀರ್, ಅಪ್ಪಿ, ನೀರಜ್ ಪಾಲ್, ಪ್ರಕಾಶ್ ಸಾಲಿಯಾನ್, ರಮಾನಂದ, ಸುಹಾನ್, ಸದಾಶಿವ ಉಳ್ಳಾಲ್, ಮುಹಮ್ಮದ್ ಮೋನು, ಭಾಸ್ಕರ್, ನವೀನ್ ಡಿಸೋಜಾ, ಅಬ್ದುಲ್ ರವೂಫ್, ಶಬ್ಬೀರ್, ಸಿಎಂ. ಮುಸ್ತಫಾ  ಮೊದಲಾದವರು ಉಪಸ್ಥಿತರಿದ್ದರು.

share
Next Story
X