14ನೆ ಹಂತದ ಸ್ವಚ್ಛ ಕಡಲ ತೀರ-ಹಸಿರು ಕೋಡಿ ಅಭಿಯಾನ

ಕುಂದಾಪುರ, ಅ.29: ಕೋಡಿ ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ಹಮ್ಮಿಕೊಳ್ಳಲಾಗಿರುವ 14ನೆ ಹಂತದ ಸ್ವಚ್ಛ ಕಡಲ ತೀರ- ಹಸಿರು ಕೋಡಿ ಅಭಿಯಾನವು ಶನಿವಾರ ಕೋಡಿಯ ಕಡಲ ತೀರದಲ್ಲಿ ಜರಗಿತು.
ವಿದ್ಯಾರ್ಥಿಗಳು, ಶಿಕ್ಷಕರು, ಆಡಳಿತ ಮಂಡಳಿಯ ಸದಸ್ಯರು, ರಕ್ಷಕ-ಶಿಕ್ಷಕ ಸಂಘದ ಸದಸ್ಯರು, ಪೋಷಕರು ಹಳೆ ವಿದ್ಯಾರ್ಥಿಗಳು, ಊರಿನ ಗಣ್ಯರು ಹಾಗೂ ಪರಿಸರ ಪ್ರಿಯರು ಅಭಿಯಾನದಲ್ಲಿ ಪಾಲ್ಗೊಂಡು ಕೋಡಿಯ ಕಡಲ ತೀರ ಹಾಗೂ ರಸ್ತೆಯ ಇಕ್ಕೆಲಗಳನ್ನು ಶುಚಿಗೊಳಿಸಿದರು.
ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಹಾಜಿ ಕೆ.ಎಂ.ಅಬ್ದುಲ್ ರೆಹಮಾನ್ ಈ ಕಾರ್ಯದಲ್ಲಿ ಪಾಲ್ಗೊಂಡ ಎಲ್ಲರಿಗೂ ಅಭಿನಂದನೆ ಸಲ್ಲಿಸಿದರು. ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಸಯ್ಯದ್ ಮೊಹಮ್ಮದ್ ಬ್ಯಾರಿ ಶುಭ ಹಾರೈಸಿದರು.











