‘ಟಿಪ್ಪು’ ವಿರುದ್ಧ ಅವಾಚ್ಯ ಪದಬಳಕೆ: ಕಾರ್ಪೊರೇಟರ್ ಶ್ವೇತಾ ಕ್ಷಮೆಯಾಚನೆಗೆ ಮುಸ್ಲಿಂ ಒಕ್ಕೂಟ ಆಗ್ರಹ

ಮಂಗಳೂರು : ಮಹಾನಗರ ಪಾಲಿಕೆಯ ಪರಿಷತ್ ಸಭೆಯಲ್ಲಿ ಕಾರ್ಪೊರೇಟರ್ ಶ್ವೇತಾ ಪೂಜಾರಿ ಟಿಪ್ಪು ವಿರುದ್ಧ ಅವಾಚ್ಯ ಪದ ಬಳಕೆ ಮಾಡಿರುವುದನ್ನು ದ.ಕ.ಜಿಲ್ಲಾ ಮುಸ್ಲಿಂ ಸಂಘಟನೆಗಳ ಒಕ್ಕೂಟ ಖಂಡಿಸಿದೆ. ಅಲ್ಲದೆ ಶ್ವೇತಾ ಪೂಜಾರಿ ಸಾರ್ವಜನಿಕವಾಗಿ ಕ್ಷಮೆ ಯಾಚಿಸಬೇಕು ಎಂದು ಒಕ್ಕೂಟದ ಅಧ್ಯಕ್ಷ, ಮಾಜಿ ಮೇಯರ್ ಕೆ. ಅಶ್ರಫ್ ಆಗ್ರಹಿಸಿದ್ದಾರೆ.
ಸುರತ್ಕಲ್ ವೃತ್ತಕ್ಕೆ ನಾಮಕರಣಕ್ಕೆ ಸಂಬಂಧಿಸಿ ಶುಕ್ರವಾರ ನಡೆದ ಪರಿಷತ್ ಸಭೆಯ ಚರ್ಚೆಯಲ್ಲಿ ಕಾರ್ಪೊರೇಟರ್ ಶ್ವೇತಾ ಪೂಜಾರಿ ವಿನಾ ಕಾರಣ ಟಿಪ್ಪುಸುಲ್ತಾನ್ ಅವರ ಹೆಸರನ್ನು ಉಲ್ಲೇಖಿಸಿ ಅವ್ಯಾಚ್ಯ ಶಬ್ದ ಬಳಕೆ ಮಾಡಿದ್ದಾರೆ. ಇದು ಸಂವಿಧಾನ ವಿರೋಧಿ ನಡೆಯಾಗಿದ್ದು, ತಕ್ಷಣ ಶ್ವೇತಾ ಪೂಜಾರಿ ಸಾರ್ವಜನಿಕ ಕ್ಷಮೆ ಯಾಚಿಸಬೇಕು. ಇಲ್ಲದಿದ್ದರೆ ಶ್ವೇತಾ ಪೂಜಾರಿಯ ವಿರುದ್ಧ ಕಾನೂನು ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದ್ದಾರೆ.
Next Story





