Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ನರಿಂಗಾನ: ಬೋಳ ಮೋರ್ಲದಲ್ಲಿ ಸರಕಾರಿ ಕಂಬಳ...

ನರಿಂಗಾನ: ಬೋಳ ಮೋರ್ಲದಲ್ಲಿ ಸರಕಾರಿ ಕಂಬಳ ಗದ್ದೆ ಕರೆ ನಿರ್ಮಾಣಕ್ಕೆ ಶಿಲಾನ್ಯಾಸ

29 Oct 2022 9:19 PM IST
share
ನರಿಂಗಾನ: ಬೋಳ ಮೋರ್ಲದಲ್ಲಿ ಸರಕಾರಿ ಕಂಬಳ ಗದ್ದೆ ಕರೆ ನಿರ್ಮಾಣಕ್ಕೆ ಶಿಲಾನ್ಯಾಸ

ಕೊಣಾಜೆ: ಕಂಬಳ‌ ಮತ್ತು ಯಕ್ಷಗಾನ‌ ನಮ್ಮ ಜಿಲ್ಲೆಯ ಸಾಂಸ್ಕೃತಿಕ ರಂಗದ ಎರಡು ಕಣ್ಣುಗಳಾಗಿದ್ದು ಅದನ್ನು ಜೀವಂತವಾಗಿರಿಸುವ ನಿಟ್ಟಿನಲ್ಲಿ ವಿಧಾನ ಸಭೆಯಲ್ಲೂ ಧ್ವನಿ ಎತ್ತಿ ಯಶಸ್ಸು ಕಂಡಿದ್ದೇವೆ. ಆ ನಿಟ್ಟಿನಲ್ಲಿ ನರಿಂಗಾನ‌ ಗ್ರಾಮದ ಕಂಬಳ ಪ್ರೇಮಿಗಳ ಮನವಿಯಂತೆ ಗ್ರಾಮದ ಬೋಳದಪದವಿನಲ್ಲಿ ನೂತನ ಕಂಬಳಗದ್ದೆ ನಿರ್ಮಾಣವಾಗಲಿದ್ದು ಅದಕ್ಕೆ ಶಿಲಾನ್ಯಾಸಗೈದಿರುವುದು ಮನಸ್ಸಿಗೆ ತುಂಬ ಸಂತಸ ಕೊಟ್ಟಿದೆ ಎಂದು ವಿಧಾನಸಭೆಯ ಪ್ರತಿಪಕ್ಷ ಉಪ ನಾಯಕ, ಶಾಸಕ ಯು‌.ಟಿ. ಖಾದರ್ ಹೇಳಿದರು.

ಅವರು ಉಳ್ಳಾಲ ತಾಲೂಕಿನ ನರಿಂಗಾನ ಗ್ರಾಮದ ಬೋಳ ಮೋರ್ಲ ರಸ್ತೆಯ ಸಂತ ಲಾರೆನ್ಸ್ ಚರ್ಚ್ ಮುಂಭಾಗದ ಸರಕಾರಿ ಸ್ಥಳದಲ್ಲಿ ನಿರ್ಮಾಣವಾಗಲಿರುವ ಸರಕಾರಿ ಕಂಬಳಗದ್ದೆ, ಕಲ್ಲರಕೋಡಿ ಬಳಿ ಜೆಜೆಎಂ ಅಡಿಯಲ್ಲಿ ಬೃಹತ್ ನೀರಿನ‌ ಟಾಂಕಿ ನಿರ್ಮಾಣ ಕಾಮಗಾರಿ ಹಾಗೂ ಕೋಡಿ ಮಸೀದಿ ಬಳಿಯಲ್ಲಿ ತಡೆಗೋಡೆ ನಿರ್ಮಾಣ ಕಾಮಗಾರಿಗೆ ಶಿಲಾನ್ಯಾಸಗೈದು ಅವರು ಮಾತನಾಡಿದರು. 

ಬೋಳದ ಐದು ಎಕರೆ ಪ್ರದೇಶದಲ್ಲಿ ತುಳು ಗ್ರಾಮ ನಿರ್ಮಾಣವಾಗಲಿದ್ದು ಆ ನಿಟ್ಟಿನಲ್ಲಿ ಬೋಳ ಮೋರ್ಲದ ಸರಕಾರಿ ಸ್ಥಳದ ಪ್ರತಿ ಯೋಜನೆಯನ್ನು‌ ಒಟ್ಟು ಸೇರಿಸಿ ಎಕ್ಸಿಬಿಷನ್ ಸೆಂಟರ್ ಆಗಿ ಮಾಡಿ ತೋರಿಸಲಿದ್ದೇವೆ. ತುಳು ಗ್ರಾಮದ ಮೂಲಕ ಜಿಲ್ಲೆಯ ಎಲ್ಲ ಸಮಾಜದ ಸಂಸ್ಕೃತಿ, ಸಂಪ್ರದಾಯ, ಪರಂಪರೆಯನ್ನು ಮುಂದಿನ ಜನಾಂಗವೂ ತಿಳಿಯಲು ಪರಿಚಯ ಮಾಡಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ನೆತ್ತಿಲಪದವು ಬೋಳದಪದವು ಅದು ಕೇವಲ ಪದವಾಗಿ ಉಳಿಯದೇ ಮುಂದಿನ ದಿನಗಳಲ್ಲಿ ಇದು ಜನಾಕರ್ಷಣೆಯ ಕೇಂದ್ರವಾಗಲಿದೆ. ಭವಿಷ್ಯದಲ್ಲಿ ಕ್ರೀಡಾಂಗಣ ಕೂಡಾ ಸಕಲ ಸೌಲಭ್ಯಗಳೊಂದಿಗೆ ನಿರ್ಮಾಣವಾಗಲಿದೆ. ಈಗಾಗಲೇ ಸುಮಾರು ಮೂರು‌ ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿರುವ ಸ್ವಿಮ್ಮಿಂಗ್ ಫೂಲ್ ಮತ್ತು ಕಮ್ಯುನಿಟಿ ಸೆಂಟರ್ ಗೆ ಸ್ಥಳ ಗುರುತಿಸಿದ್ದೇವೆ. ಎಲ್ಲವೂ ದೇವರ ಇಚ್ಛೆಯಂತೆ ಬಹಳ ಸುಲಭದಲ್ಲಿ ಆಗಿದೆ. ಜನರ ಪ್ರಾರ್ಥನೆಯ ಫಲ, ದೇವರು ಕೊಟ್ಟ ವರ ಎಂದ. ಅವರು ಪ್ರಾಥಮಿಕ ಕಾಮಗಾರಿ ಕಂಬಳದ ಕರೆ ನಿರ್ಮಾಣಕ್ಕೆ ಐದು ಲಕ್ಷ ರೂ. ಮಂಜೂರು ಮಾಡಿ ಕಂಬಳದ ಕರೆ ನಿರ್ಮಾಣದ ಉಸ್ತುವಾರಿ ವಹಿಸಿಕೊಂಡಿರುವ ಜಾನ್ಸನ್ ಅವರನ್ನು ಅಭಿನಂದಿಸಿದರು. ಇದೇ ಸಂದರ್ಭ ಕಲ್ಲರಕೋಡಿಯ ಆರ್ಟ್ಸ್ &ಸ್ಪೋರ್ಟ್ಸ್ ಕ್ಲಬ್ ಆಶ್ರಯದಲ್ಲಿ ಶಾಸಕ ಖಾದರ್ ಅವರನ್ನು‌ ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ನರಿಂಗ‌ಅನ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶೈಲಜಾ ಜೆ. ಶೆಟ್ಟಿ ಮೋರ್ಲ, ಮುಡಿಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ  ಪ್ರಶಾಂತ್ ಕಾಜವ ಕುರ್ನಾಡು, ರಾಜ್ಯ ಅಲೆಮಾರಿ ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ನಿಕಟಪೂರ್ವ ಅಧ್ಯಕ್ಷ ಕೆ. ರವೀಂದ್ರ ಶೆಟ್ಟಿ ಉಳಿದೊಟ್ಟು, ಬೋಳ ಸಂತ ಲಾರೆನ್ಸ್ ಚರ್ಚ್ ಧರ್ಮಗುರು ಫಾ. ಫೆಡ್ರಿಕ್ ಕೊರೆಯಾ, ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷ ರೋಹಿತ್ ಹೆಗ್ಡೆ ಎರ್ಮಾಳು, ಕಂಬಳ ಒಕ್ಕೂಟದ ಗುಣಪಾಲ ಕಡಂಬ, ಟೈಮ್ಸ್ ಆಫ್ ಇಂಡಿಯಾ ಪತ್ರಿಕೆಯ ಮಂಗಳೂರು ವಿಭಾಗ ನಿವೃತ್ತ ಪ್ರಬಂಧಕ ನವನೀತ ಶೆಟ್ಟಿ ಕದ್ರಿ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಮಮತಾ ಡಿ.ಎಸ್. ಗಟ್ಟಿ, ಉಳ್ಳಾಲ ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಚಂದ್ರಹಾಸ್ ಕರ್ಕೇರ, ತಲಪಾಡಿ ಕಂಬಳ ಸಮಿತಿ ಕಾರ್ಯಾಧ್ಯಕ್ಷ ರವೀಂದ್ರನಾಥ ಶೆಟ್ಟಿ ದೊಡ್ಡಮನೆ, ಜಿಲ್ಲಾ ಅಹಿಂದ ಒಕ್ಕೂಟ ಅಧ್ಯಕ್ಷ ಪದ್ಮನಾಭ ನರಿಂಗಾನ, ಉದ್ಯಮಿಗಳಾದ ಕರುಣಾಕರ ಶೆಟ್ಟಿ ಮೋರ್ಲ, ಕುರ್ನಾಡು ಗ್ರಾಮ ಪಂಚಾಯಿತಿ ಅಧ್ಯಕ್ಷ ಗಣೇಶ್ ನಾಯ್ಕ್, ಉದ್ಯಮಿ ಗಿರೀಶ್ ಆಳ್ವ ಮೋರ್ಲ, ಮೋಹನ್ ದಾಸ್ ಶೆಟ್ಟಿ ಕಿನ್ಯ, ಅಬ್ದುಲ್ ಜಲೀಲ್ ಮೋಂಟುಗೋಳಿ, ಚಂದ್ರಹಾಸ್ ಶೆಟ್ಟಿ ಮೋರ್ಲ, ರವೀಂದ್ರನಾಥ ಪೂಂಜ, ವಿವೇಕಾನಂದ ರೈ ನೆತ್ತಿಲಪದವು, ಹನೀಫ್ ಚಂದಹಿತ್ಲು, ಮ್ಯಾಕ್ಸಿಮ್ ಡಿಸೋಜ ಹಾಗೂ ಆಶಿಲಾನ್ಯಾಸು ರಾಮಣ್ಣ ಶೆಟ್ಟಿ ಉಪಸ್ಥಿತರಿದ್ದರು.

ನರಿಂಗಾನ‌ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ನವಾಝ್ ನರಿಂಗಾನ ಸ್ವಾಗತಿಸಿದರು. ವಿದ್ಯಾಧರ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

share
Next Story
X