ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪ: BBMP ಮೌಲ್ಯಮಾಪಕನಿಗೆ 40 ಲಕ್ಷ ದಂಡ, ನಾಲ್ಕು ವರ್ಷ ಜೈಲು ಶಿಕ್ಷೆ

ಬೆಂಗಳೂರು, ಅ. 29: ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪ ಎದುರಿಸುತ್ತಿದ್ದ ಬಿಬಿಎಂಪಿ ಕಂದಾಯ ಅಧಿಕಾರಿಗಳ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮೌಲ್ಯಮಾಪಕ ಆರ್. ಪ್ರಸನ್ನಕುಮಾರ್ ಗೆ 4 ವರ್ಷ ಜೈಲು ಹಾಗೂ 40 ಲಕ್ಷ ರೂ.ದಂಡವನ್ನು ವಿಧಿಸಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾದೀಶರು ಆದೇಶ ಹೊರಡಿಸಿದ್ದಾರೆ.
ಆರ್.ಪ್ರಸನ್ನಕುಮಾರ್ ಅಕ್ರಮ ಆಸ್ತಿ ಗಳಿಸಿದ್ದಾರೆ ಎಂದು ಲೋಕಾಯುಕ್ತದಲ್ಲಿ ದೂರು ದಾಖಲಾಗಿತ್ತು. ಶೇ.31ರಷ್ಟು ಅಕ್ರಮ ಆಸ್ತಿಯನ್ನು ಹೊಂದಿರುವುದು ಧೃಢಪಟ್ಟ ಹಿನ್ನಲೆ ಲೋಕಾಯುಕ್ತ ವಿಶೇಷ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಿತ್ತು. ವಿಚಾರಣೆ ನಡೆಸಿದ ವಿಶೇಷ ನ್ಯಾಯಾಧೀಶ ಕೆ.ಲಕ್ಷೀನಾರಾಯಣಭಟ್ ಆರೋಪಿಗೆ ಶಿಕ್ಷೆ ವಿಧಿಸಿದ್ದಾರೆ.
Next Story





