Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ದಕ್ಷಿಣ ಕೊರಿಯಾದಲ್ಲಿ ಹ್ಯಾಲೋವೀನ್ ಆಚರಣೆ...

ದಕ್ಷಿಣ ಕೊರಿಯಾದಲ್ಲಿ ಹ್ಯಾಲೋವೀನ್ ಆಚರಣೆ ವೇಳೆ ಕಾಲ್ತುಳಿತ : ಕನಿಷ್ಠ 149 ಮಂದಿ ಮೃತ್ಯು

30 Oct 2022 7:13 AM IST
share
ದಕ್ಷಿಣ ಕೊರಿಯಾದಲ್ಲಿ ಹ್ಯಾಲೋವೀನ್ ಆಚರಣೆ ವೇಳೆ ಕಾಲ್ತುಳಿತ : ಕನಿಷ್ಠ 149 ಮಂದಿ ಮೃತ್ಯು

ಸಿಯೋಲ್ : ಹ್ಯಾಲೋವೀನ್ (Halloween) ಆಚರಣೆ ವೇಳೆ ಇಕ್ಕಟ್ಟಿನ ಓಣಿಯಲ್ಲಿ ದೊಡ್ಡ ಗುಂಪು ಸಿಕ್ಕಿಹಾಕೊಂಡು ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ 149 ಮಂದಿ ಮೃತಪಟ್ಟು, 150ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಇದು ದಕ್ಷಿಣ ಕೊರಿಯಾದಲ್ಲಿ ಇತ್ತೀಚಿನ ವರ್ಷಗಳಲ್ಲಿ ಸಂಭವಿಸಿದ ಅತಿದೊಡ್ಡ ದುರಂತವಾಗಿದೆ.

ದಕ್ಷಿಣ ಕೊರಿಯಾ ರಾಜಧಾನಿಯ ಇಟೇವೋನ್ ಜಿಲ್ಲೆಯಲ್ಲಿ ನಡೆದ ದುರಂತದಲ್ಲಿ ತುರ್ತು ಕಾರ್ಮಿಕರು ಮತ್ತು ಪಾದಚಾರಿಗಳು ಅನಿವಾರ್ಯವಾಗಿ ಬಿದ್ದಿದ್ದ ಜನರ ಮೇಲೆಯೇ ಸಿಪಿಆರ್ ನಡೆಸಬೇಕಾಯಿತು.

ಗಾಯಾಳುಗಳಲ್ಲಿ ಹಲವು ಮಂದಿಯ ಸ್ಥಿತಿ ಗಂಭೀರವಾಗಿದ್ದು ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚುವ ಸಾಧ್ಯತೆ ಇದೆ ಎಂದು ಸಿಯೋಲ್‍ನ ಯಂಗ್ಸನ್ ಅಗ್ನಿಶಾಮಕ ಇಲಾಖೆಯ ಮುಖ್ಯಸ್ಥ ಚೋಯ್ ಸಿಯಾಂಗ್ ಬಿಯೋಮ್ ಹೇಳಿದ್ದಾರೆ.

ಕೋವಿಡ್-19 ಸಾಂಕ್ರಾಮಿಕದ ಬಳಿಕ ಮೊಟ್ಟಮೊದಲ ಬಾರಿಗೆ ನಡೆದ ಹೊರಾಂಗಣ ಹ್ಯಾಲೋವೀನ್ ಆಚರಣೆಗೆ ಕನಿಷ್ಠ ಒಂದು ಲಕ್ಷ ಮಂದಿ ಇಟೇವೋನ್‍ನಲ್ಲಿ ಸೇರಿದ್ದರು. ದಕ್ಷಿಣ ಕೊರಿಯಾ ಸರ್ಕಾರ ಇತ್ತೀಚೆಗಷ್ಟೇ ಕೋವಿಡ್-19 ನಿರ್ಬಂಧಗಳನ್ನು ಸಡಿಲಿಸಿತ್ತು.

ಸಿಯೋಲ್‍ನಲ್ಲಿ ಜನಪ್ರಿಯ ಮೋಜಿನ ಕೂಟ ತಾಣವಾದ ಹ್ಯಾಮಿಲ್ಟನ್ ಹೋಟೆಲ್ ಬಳಿಯ ಬೆಟ್ಟದ ತಪ್ಪಲಿನ ಓಣಿಯಲ್ಲಿ ದೊಡ್ಡ ಸಂಖ್ಯೆಯ ಮಂದಿ ಜಮಾಯಿಸಲು ಕಾರಣ ಏನು ಎನ್ನುವುದು ತಿಳಿದು ಬಂದಿಲ್ಲ. ಇಕ್ಕಟ್ಟಿನ ಓಣಿಯಲ್ಲಿ ಒಬ್ಬರನ್ನೊಬ್ಬರು ತಳ್ಳಿಕೊಂಡು ಹೋಗುವ ಸಂದರ್ಭದಲ್ಲಿ ಕೆಳಕ್ಕೆ ಬಿದ್ದರು ಎಂದು ದುರಂತದಲ್ಲಿ ಬದುಕಿ ಉಳಿದ ವ್ಯಕ್ತಿಯೊಬ್ಬರು ಹೇಳಿದ್ದಾರೆ. ಸುಮಾರು ಒಂದೂವರೆ ಗಂಟೆ ಹಲವು ಮಂದಿ ಸಿಕ್ಕಿಹಾಕಿಕೊಂಡರು ಎನ್ನಲಾಗಿದೆ.

ಹೋಟೆಲ್ ಸಮೀಪ ಶವಗಳು ರಾಶಿ ರಾಶಿಯಾಗಿ ಬಿದ್ದಿರುವ ದೃಶ್ಯವನ್ನು ವೈಟಿಎನ್ ಸುದ್ದಿವಾಹಿನಿ ಪ್ರಸಾರ ಮಾಡಿದೆ.

#SouthKorea | Morning visuals from the spot of the deadly stampede in Seoul that broke out during Halloween festivities yesterday leaving 149 dead and injuring scores of people till now

(Source: Reuters) pic.twitter.com/9REYUhFJKl

— ANI (@ANI) October 30, 2022
share
Next Story
X