Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಿಬಿಐಗೆ ನೀಡಿದ್ದ ಸಾಮಾನ್ಯ ಸಮ್ಮತಿ...

ಸಿಬಿಐಗೆ ನೀಡಿದ್ದ ಸಾಮಾನ್ಯ ಸಮ್ಮತಿ ಹಿಂಪಡೆಯಲಾಗಿದೆ: ಹೈಕೋರ್ಟ್ ಗೆ ತಿಳಿಸಿದ ತೆಲಂಗಾಣ ಸರಕಾರ

30 Oct 2022 1:36 PM IST
share
ಸಿಬಿಐಗೆ ನೀಡಿದ್ದ ಸಾಮಾನ್ಯ ಸಮ್ಮತಿ ಹಿಂಪಡೆಯಲಾಗಿದೆ: ಹೈಕೋರ್ಟ್ ಗೆ ತಿಳಿಸಿದ ತೆಲಂಗಾಣ ಸರಕಾರ

ಹೈದರಾಬಾದ್,ಅ.30: ಸಿಬಿಐಗೆ ತಾನು ನೀಡಿದ್ದ 'ಮುಕ್ತ ಸಮ್ಮತಿ'ಯನ್ನು ಹಿಂದೆಗೆದುಕೊಂಡಿರುವುದಾಗಿ ತೆಲಂಗಾಣ ಸರಕಾರವು ಉಚ್ಚ ನ್ಯಾಯಾಲಯಕ್ಕೆ ತಿಳಿಸಿದೆ.

ಮುಕ್ತ ಅಥವಾ ಸಾರ್ವತ್ರಿಕ ಒಪ್ಪಿಗೆಯ ಅನುಪಸ್ಥಿತಿಯಲ್ಲಿ ಸಿಬಿಐ ಪ್ರತಿಯೊಂದು ಪ್ರಕರಣದ ತನಿಖೆಗೂ ರಾಜ್ಯ ಸರಕಾರದಿಂದ ಪ್ರತ್ಯೇಕ ಅನುಮತಿಯನ್ನು ಪಡೆದುಕೊಳ್ಳಬೇಕಾಗುತ್ತದೆ.

ತೆಲಂಗಾಣ ಸರಕಾರವು ಮುಕ್ತ ಸಮ್ಮತಿಯನ್ನು ಹಿಂದೆಗೆದುಕೊಂಡ ಆದೇಶವನ್ನು ಆ.30ರಂದೇ ಹೊರಡಿಸಿತ್ತಾದರೂ ಅದನ್ನು ಬಹಿರಂಗಗೊಳಿಸಿರಲಿಲ್ಲ. ಶನಿವಾರ ವಿಚಾರಣೆ ಸಂದರ್ಭದಲ್ಲಿ ರಾಜ್ಯದ ಹೆಚ್ಚುವರಿ ಅಡ್ವೊಕೇಟ್ ಜನರಲ್ ತೆಲಂಗಾಣ ಉಚ್ಚ ನ್ಯಾಯಾಲಯಕ್ಕೆ ಸರಕಾರದ ನಿರ್ಧಾರವನ್ನು ತಿಳಿಸಿದರು.

ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಗುಜ್ಜುಲ ಪ್ರೇಮೇಂದರ್ ರೆಡ್ಡಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಉಚ್ಚ ನ್ಯಾಯಾಲಯವು ಕೈಗೆತ್ತಿಕೊಂಡಿತ್ತು. ತನ್ನ ಪಕ್ಷದವರೆನ್ನಲಾದ ಕೆಲವರು ಆಡಳಿತ ಟಿಆರ್‌ಎಸ್ ಶಾಸಕರ ಖರೀದಿಗೆ ಪ್ರಯತ್ನಿಸಿದ್ದರು ಎಂಬ ಆರೋಪಗಳ ಕುರಿತು ಸಿಬಿಐ ತನಿಖೆ ನಡೆಸುವಂತೆ ರೆಡ್ಡಿ ತನ್ನ ಅರ್ಜಿಯಲ್ಲಿ ಕೋರಿದ್ದಾರೆ.

ಶಾಸಕರ ಖರೀದಿ ಆರೋಪ ಬಿಜೆಪಿಯ ಹೆಸರು ಕೆಡಿಸಲು ಟಿಆರ್‌ಎಸ್‌ನ ಸಂಚಾಗಿದೆ,ಇದು ಟಿಆರ್‌ಎಸ್ ಆಡುತ್ತಿರುವ, ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ ಅವರು ಬರೆದು ನಿರ್ದೇಶಿಸಿರುವ ನಾಟಕವಾಗಿದೆ ಎಂದು ರೆಡ್ಡಿ ಆರೋಪಿಸಿದರು.

ತೆಲಂಗಾಣ ಸಿಬಿಐಗೆ ನೀಡಿದ್ದ ಮುಕ್ತ ಸಮ್ಮತಿಯನ್ನು ಹಿಂದೆಗೆದುಕೊಂಡಿರುವ ಒಂಭತ್ತನೇ ರಾಜ್ಯವಾಗಿದೆ. ಮೇಘಾಲಯ,ಪ.ಬಂಗಾಳ,ಕೇರಳ,ಪಂಜಾಬ,ರಾಜಸ್ಥಾನ,ಜಾರ್ಖಂಡ್,ಛತ್ತೀಸ್‌ಗಡ ಮತ್ತು ಮಿರೆರಾಮ್ ಇತರ ಎಂಟು ರಾಜ್ಯಗಳಾಗಿವೆ.

ಕೇಂದ್ರದ ಬಿಜೆಪಿ ನೇತೃತ್ವದ ಸರಕಾರವು ತನ್ನ ರಾಜಕೀಯ ವಿರೋಧಿಗಳ ವಿರುದ್ಧ ಸೇಡು ತೀರಿಸಿಕೊಳ್ಳಲು ಸಿಬಿಐ ಅನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಈ ಪೈಕಿ ಹೆಚ್ಚಿನ ರಾಜ್ಯಗಳು ಆರೋಪಿಸಿವೆ. ಸಿಬಿಐಗೆ ನೀಡಿರುವ ಮುಕ್ತ ಸಮ್ಮತಿಯನ್ನು ಎಲ್ಲ ರಾಜ್ಯಗಳು ಹಿಂದೆಗೆದುಕೊಳ್ಳಬೇಕು ಎಂದು ರಾವ್ ಕಳೆದ ಆಗಸ್ಟ್‌ನಲ್ಲಿ ಕರೆ ನೀಡಿದ್ದರು.

share
Next Story
X