Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ...

ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮಂಗಳೂರು-ಬೆಂಗಳೂರು ಪಾದಯಾತ್ರೆ: ಪ್ರಣವಾನಂದ ಸ್ವಾಮೀಜಿ

ಆದೇಶ ಪ್ರತಿ ಹರಿದು ಹಾಕಿದ ಸ್ವಾಮೀಜಿ

30 Oct 2022 5:28 PM IST
share
ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮಂಗಳೂರು-ಬೆಂಗಳೂರು ಪಾದಯಾತ್ರೆ: ಪ್ರಣವಾನಂದ ಸ್ವಾಮೀಜಿ
ಆದೇಶ ಪ್ರತಿ ಹರಿದು ಹಾಕಿದ ಸ್ವಾಮೀಜಿ

ಮಂಗಳೂರು, ಅ.30: ರಾಜ್ಯದ ಬಿಲ್ಲವ, ಈಡಿಗ ಸಹಿತ 26 ಪಂಡಗಳ ಅಭಿವೃದ್ಧಿಯನ್ನು ದೃಷ್ಟಿಯನ್ನಿಟ್ಟುಕೊಂಡು ರಾಜ್ಯ ಸರಕಾರ ನಿಗಮ ಮಂಡಳಿಯನ್ನು ರಚಿಸಬೇಕು, ಮತ್ತಿತರ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಮಂಗಳೂರಿನಿಂದ ಬೆಂಗಳೂರಿಗೆ ಪಾದಯಾತ್ರೆ ಮಾಡಲಿದ್ದೇನೆ ಎಂದು ಕಲಬುರಗಿ ಬ್ರಹ್ಮಶ್ರೀ ನಾರಾಯಣಗುರು ಶಕ್ತಿ ಪೀಠದ ಪೀಠಾಧಿಪತಿ ಪ್ರಣವಾನಂದ ಸ್ವಾಮೀಜಿ ಹೇಳಿದರು.

ನಗರದ ಕುದ್ರೋಳಿ ದೇವಸ್ಥಾನದ ಗಾಜಿನ ಮಂಟಪದಲ್ಲಿ ರವಿವಾರ ಸುದ್ದಿಗೋಷ್ಠಿ ನಡೆಸಿದ ಅವರು 2023ರ ಜ.6ರಂದು ಕುದ್ರೋಳಿ ದೇವಸ್ಥಾನದಿಂದ ಪಾದಯಾತ್ರೆ ಆರಂಭವಾಗಲಿದ್ದು, ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ಪಾದಯಾತ್ರೆಗೆ ಚಾಲನೆ ನೀಡಲಿದ್ದಾರೆ.

ತೆಲಂಗಾಣ, ಕೇರಳ, ಆಂಧ್ರಪ್ರದೇಶದ ಮುಖ್ಯಮಂತ್ರಿ, ಬಿಲ್ಲವ ಸಮುದಾಯದ ಸಚಿವರು, ಶಾಸಕರನ್ನು ಪಾದಯಾತ್ರೆ ಉದ್ಘಾಟನಾ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗುವುದು. ಮಂಗಳೂರಿನಿಂದ ಹೊರಟ ಪಾದಯಾತ್ರೆ ಉಡುಪಿ, ಹೊಸನಗರ, ತೀರ್ಥಹಳ್ಳಿ, ಸಾಗರ, ಶಿವಮೊಗ್ಗ, ಶಿಕಾರಿಪುರ, ಚನ್ನಗಿರಿ, ದಾವಣಗೆರೆ, ಚಿತ್ರದುರ್ಗ, ತುಮಕೂರು ಮೂಲಕ ಬೆಂಗಳೂರಿಗೆ ಸುಮಾರು 658 ಕಿ.ಮೀ. ದೂರ 35 ದಿನಗಳವರೆಗೆ ಪಾದಯಾತ್ರೆ ನಡೆಯಲಿದೆ. ಬಳಿಕ ಬೇಡಿಕೆ ಈಡೇರುವತನಕ ಬೆಂಗಳೂರಿನ ಫ್ರೀಡಂಪಾರ್ಕ್‌ನಲ್ಲಿ  ಅಮರಣಾಂತ ಉಪವಾಸ ಕೈಗೊಳ್ಳಲಾಗುವುದು ಎಂದರು.

ಪಾದಯಾತ್ರೆಯ ಯಶಸ್ಸಿಗೆ ಸಮಿತಿಯನ್ನು ರಚಿಸಲಾಗಿದೆ. ಮುಂದಿನ ದಿನಗಳಲ್ಲಿ ತಾಲೂಕು ಮಟ್ಟದಲ್ಲಿ ಸಭೆ ನಡೆಸಿ ಸಮುದಾಯ ಸಂಘಟನೆ ಬಲಪಡಿಸಲಾಗುವುದು. ಬಿಲ್ಲವ, ಈಡಿಗ ಸಮುದಾಯದಲ್ಲಿ ನಾನಾ ಸಂಘಟನೆಗಳಿದ್ದು ಅವರನ್ನೆಲ್ಲ ಒಗ್ಗೂಡಿಸಿ ಪಾದಯಾತ್ರೆ ನಡೆಸಲಾಗುವುದು ಎಂದು ಪ್ರಣವಾನಂದ ಸ್ವಾಮೀಜಿ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಂಗಳೂರು ತಾಲೂಕು ಬಿಲ್ಲವ ಸಂಘದ ಅಧ್ಯಕ್ಷ ಜಿತೇಂದ್ರ ಸುವರ್ಣ, ಗೌರವಾಧ್ಯಕ್ಷ ರಂಜನ್ ಮಿಜಾರು, ಪಾರ್ವತಿ ಅಮೀನ್, ಲೋಕನಾಥ್ ಪೂಜಾರಿ, ಗಣೇಶ್ ಪೂಜಾರಿ, ಸುರೇಶ್ ಚಂದರ್ ಕೋಟ್ಯಾನ್, ಸುರೇಶ್ ಪೂಜಾರಿ ಉಪಸ್ಥಿತರಿದ್ದರು.

ಆದೇಶ ಪ್ರತಿ ಹರಿದು ಹಾಕಿದ ಸ್ವಾಮೀಜಿ

ಬಿಲ್ಲವ, ಈಡಿಗ ಸಹಿತ 26 ಪಂಗಡಗಳ ಅಭಿವೃದ್ಧಿ ದೃಷ್ಟಿಯಿಂದ ಶ್ರೀ ನಾರಾಯಣಗುರು ಕೋಶವನ್ನು ರಾಜ್ಯ ಸರಕಾರ ಸ್ಥಾಪನೆ ಮಾಡುವ ಬಗ್ಗೆ ಶನಿವಾರ ಆದೇಶಿಸಿದೆ. ಇದರ ಝೆರಾಕ್ಸ್ ಪ್ರತಿಯನ್ನು ಸ್ವಾಮೀಜಿ ಸುದ್ದಿಗೊಷ್ಠಿಯಲ್ಲೇ ಹರಿದು ಹಾಕಿ ಅಸಮಾಧಾನ ವ್ಯಕ್ತಪಡಿಸಿದ್ದರು.

ನಾವು ಸರಕಾರದ ಬಳಿ ನಿಗಮ, ಮಂಡಳಿ ಬೇಡಿಕೆಯಿರಿಸಿದ್ದು, ನಮಗೆ ಕೋಶ ಘೋಷಣೆ ಮಾಡುವ ಮೂಲಕ ಸಮುದಾಯವನ್ನು ಅವಮಾನಿಸಲಾಗಿದೆ. ಯಾವ ಕಾರಣಕ್ಕೂ ನಮಗೆ ಕೋಶ ಬೇಡ, ನಿಗಮವೇ ಬೇಕು. ರಾಜ್ಯ ಸರಕಾರ ಈ ರೀತಿಯ ನಾಟಕ ಮಾಡುವುದು ಬೇಡ. ನಾವು ಭಿಕ್ಷೆ ಬೇಡುತ್ತಿಲ್ಲ, ಸಾಂವಿಧಾನಿಕವಾಗಿ ನಮ್ಮ ಹಕ್ಕು ಕೇಳುತ್ತೇವೆ ಎಂದರು.

ಪ್ರಮುಖ ಬೇಡಿಕೆಗಳು

* ಬ್ರಹ್ಮಶ್ರೀ ನಾರಾಯಣಗುರು ನಿಗಮ ಮಂಡಳಿ ಸ್ಥಾಪನೆ ಮಾಡಿ 500 ಕೋ.ರೂ. ಬಿಡುಗಡೆ ಮಾಡಬೇಕು.

* ರಾಜ್ಯವ್ಯಾಪಿ ಕುಲ ಕಸುಬು ಶೇಂದಿಗೆ ಅವಕಾಶ ನೀಡಬೇಕು.

* 2ಎ ಮೀಸಲಾತಿಗೆ ಬೇರೆ ಸಮುದಾಯ ಸೇರ್ಪಡೆ ಮಾಡುವಾಗ ಬಿಲ್ಲವ ಸಮುದಾಯಕ್ಕೆ ಅನ್ಯಾಯವಾಗದಂತೆ ಕ್ರಮಕೈಗೊಳ್ಳಬೇಕು.

*ಸಿಗಂದೂರು ಚೌಡೇಶ್ವರಿ ದೇವಸ್ಥಾನ ಈಡಿಗ ಸಮುದಾಯ ನಡೆಸುತ್ತಿದ್ದು, ಆ ದೇವಸ್ಥಾನದ ಆಡಳಿತ ಮಂಡಳಿಗೆ ನೀಡುವ ಕಿರುಕುಳವನ್ನು ನಿಲ್ಲಿಸಬೇಕು.

*ರಾಜಕೀಯ ಪ್ರಾತಿನಿಧ್ಯ ದೃಷ್ಟಿಯಿಂದ ಇತರ ಜಿಲ್ಲೆಗಳಲ್ಲಿ ಜನಸಂಖ್ಯೆ ಆಧಾರದಲ್ಲಿ ಸೀಟು ಹಂಚಿದಂತೆ ದ.ಕ. ಜಿಲ್ಲೆಯಲ್ಲೂ ಎರಡೂ ಪಕ್ಷಗಳು ಬಿಲ್ಲವ ಸಮುದಾಯಕ್ಕೆ ತಲಾ 3 ಸೀಟುಗಳನ್ನು ನೀಡಬೇಕು.

share
Next Story
X