Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಐಫೋನ್‍ಗಳ ಕಳವು ಪ್ರಕರಣ: ಫ್ಲಿಪ್ ಕಾರ್ಟ್...

ಐಫೋನ್‍ಗಳ ಕಳವು ಪ್ರಕರಣ: ಫ್ಲಿಪ್ ಕಾರ್ಟ್ ಎಂಡಿಗೆ ಹೈಕೋರ್ಟ್‍ನಿಂದ ನಿರೀಕ್ಷಣಾ ಜಾಮೀನು

30 Oct 2022 6:17 PM IST
share
ಐಫೋನ್‍ಗಳ ಕಳವು ಪ್ರಕರಣ: ಫ್ಲಿಪ್ ಕಾರ್ಟ್ ಎಂಡಿಗೆ ಹೈಕೋರ್ಟ್‍ನಿಂದ ನಿರೀಕ್ಷಣಾ ಜಾಮೀನು

ಬೆಂಗಳೂರು: ಗೋದಾಮಿನಲ್ಲಿ ಸಂಗ್ರಹಿಸಿ ಇಟ್ಟಿದ್ದ 21 ಐಫೋನ್‍ (iPhone) ಕಳ್ಳತನವಾದ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿದ್ದ ಫ್ಲಿಪ್‍ಕಾರ್ಟ್ (Flipkart) ಸಂಸ್ಥೆಯ ವ್ಯವಸ್ಥಾಪಕ ಹಾಗೂ ಸಹಾಯಕ ವ್ಯವಸ್ಥಾಪಕರಿಗೆ ಹೈಕೋರ್ಟ್, ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ಈ ಸಂಬಂಧ ಮಾಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಆರೋಪಿಗಳಾಗಿರುವ ಫ್ಲಿಪ್‍ಕಾರ್ಟ್ ಕಂಪೆನಿಯ ವ್ಯವಸ್ಥಾಪಕ ಸಿ.ವಿ.ರಾಘವೇಂದ್ರ ಹಾಗೂ ಸಹಾಯಕ ವ್ಯವಸ್ಥಾಪಕ ಶ್ರೀರಾಮ ನಂದಿನ ಸಲ್ಲಿಸಿದ್ದ ಅರ್ಜಿ ಮಾನ್ಯ ಮಾಡಿರುವ ಹೈಕೋರ್ಟ್ ನ್ಯಾಯಪೀಠ, ಈ ಆದೇಶ ನೀಡಿದೆ.

ಗೋದಾಮಿನಲ್ಲಿ 2022ರ ಜು.19ರಂದು ಕಳ್ಳತನ ನಡೆದಿದೆ ಎಂದು ಆರೋಪಿಸಲಾಗಿದೆ. ಆ.4ರಂದು ದೂರು ದಾಖಲಿಸಲಾಗಿದೆ. ಸಿಸಿ ಕ್ಯಾಮೆರಾ ದೃಶ್ಯಾವಳಿಗಳನ್ನು ಆಧರಿಸಿ ಅರ್ಜಿದಾರರ ವಿರುದ್ಧ ಸಂದೇಹದ ಮೇಲೆ ದೂರು ದಾಖಲಿಸಲಾಗಿದೆ. 

ಆದರೆ, ಗೋದಾಮಿನ ಭದ್ರತಾ ಅಧಿಕಾರಿಯೇ ದೂರುದಾರರಾಗಿದ್ದಾರೆ. ಗೋದಾಮು ಪ್ರವೇಶಿಸುವಾಗ ಹಾಗೂ ನಿರ್ಗಮಿಸುವಾಗ ತಪಾಸಣೆ ನಡೆಸಲಾಗುತ್ತದೆ. ಹೀಗಿರುವಾಗ, ಐಫೋನ್ ಗಳು ಗೋದಾಮಿನಿಂದ ಹೊರ ಹೋಗಿದ್ದಾದರೂ ಹೇಗೆ ಎಂಬ ಬಗ್ಗೆ ಭದ್ರತೆಯ ಮೇಲ್ವಿಚಾರಣೆ ವಹಿಸಿದ್ದ ದೂರುದಾರರೇ ವಿವರಣೆ ನೀಡಬೇಕಾಗುತ್ತದೆ.

ಆದರೆ, ಭದ್ರತೆ ಒದಗಿಸುವ ತಮ್ಮ ಕರ್ತವ್ಯದಲ್ಲಿ ಆಗಿರುವ ಲೋಪದ ಬಗ್ಗೆ ಯಾವುದೇ ವಿವರಣೆಯನ್ನು ಅವರು ನೀಡಿಲ್ಲ. ಅರ್ಜಿದಾರರು ಗೋದಾಮಿನಲ್ಲಿ ಐಫೋನ್ ಬಾಕ್ಸ್ ಗಳನ್ನು ವಿಂಗಡಿಸುತ್ತಿದ್ದರು ಎಂಬ ಒಂದೇ ಕಾರಣಕ್ಕೆ ಅವರ ವಿರುದ್ಧ ಸಂಶಯದಲ್ಲಿ ದೂರು ದಾಖಲಿಸಲಾಗಿದೆ. 

ಆದರೆ, ಅವರೇ ಐಫೋನ್‍ಗಳನ್ನು ಕದ್ದಿದ್ದಾರೆ ಎನ್ನುವುದನ್ನು ತೋರಿಸುವ ಯಾವುದೇ ದಾಖಲೆಗಳು ಇಲ್ಲವೆಂದು ಹೈಕೋರ್ಟ್ ತನ್ನ ಆದೇಶದಲ್ಲಿ ಅಭಿಪ್ರಾಯಪಟ್ಟಿದೆ. ಅಲ್ಲದೆ, ಅರ್ಜಿದಾರರಿಗೆ ಜಾಮೀನು ಮಂಜೂರು ಮಾಡಿದೆ. ಅರ್ಜಿದಾರರು ಮುಂದಿನ 15 ದಿನದಲ್ಲಿ ತನಿಖಾಧಿಕಾರಿಗಳ ಮುಂದೆ ಹಾಜರಾಗಿ ಶರಣಾಗಬೇಕು. ತನಿಖಾಧಿಕಾರಿ ಆರೋಪಿಗಳನ್ನು ಬಂಧಿಸಿದ ಸಂದರ್ಭದಲ್ಲಿ ಇಬ್ಬರಿಂದಲೂ ತಲಾ 1 ಲಕ್ಷ ರೂ. ವೈಯಕ್ತಿಕ ಬಾಂಡ್ ಹಾಗೂ ಅಷ್ಟೇ ಮೊತ್ತಕ್ಕೆ ಒಬ್ಬರ ಶ್ಯೂರಿಟಿ ಪಡೆದು ಜಾಮೀನಿನ ಮೇಲೆ ಬಿಡುಗಡೆ ಮಾಡಬೇಕು ಎಂದು ಆದೇಶದಲ್ಲಿ ನ್ಯಾಯಪೀಠವು ಉಲ್ಲೇಖಿಸಿದೆ. 

ಪ್ರಕರಣವೇನು: ಕೋಲಾರ ಜಿಲ್ಲೆಯ ಮಾಲೂರಿನಲ್ಲಿರುವ ಗೋದಾಮಿನಿಂದ 21 ಐಫೋನ್-12 ಮೊಬೈಲ್‍ಗಳು ಕಳ್ಳತನವಾಗಿವೆ ಎಂದು ಭದ್ರತಾ ಮೇಲ್ವಿಚಾರಕ ಕೆ.ಕೆ. ಚಂದ್ರಕಾಂತ್ ಮಾಲೂರು ಪೊಲೀಸ್ ಠಾಣೆಗೆ ದೂರು ನೀಡಿದ್ದರು. 

share
Next Story
X