ಪುತ್ತೂರು: ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಆರೋಪಿ ಸೆರೆ
ಪುತ್ತೂರು: ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೆ ವಿದೇಶದಲ್ಲಿ ತಲೆ ಮರೆಸಿ ಕೊಂಡಿದ್ದ ಆರೋಪಿಯನ್ನು ಪುತ್ತೂರು ಗ್ರಾಮಾಂತರ ಪೊಲೀಸರು ಶನಿವಾರ ಬಂಧಿಸಿದ್ದಾರೆ.
ಪುತ್ತೂರು ತಾಲೂಕಿನ ನೆಟ್ಟಣಿಗೆ ಮುಡ್ನೂರು ಗ್ರಾಮದ ಬಸಿರಡ್ಕ ನಿವಾಸಿ ಸಂದೇಶ್ ಕೆ.ಎಸ್. (32) ಬಂಧಿತ ಆರೋಪಿ.
ಈತ ನ್ಯಾಯಾಲಯಕ್ಕೆ ಹಾಜರಾಗದೆ ವಿದೇಶಕ್ಕೆ ತೆರಳಿ ತಲೆ ಮರೆಸಿಕೊಂಡಿದ್ದ ಎನ್ನಲಾಗಿದ್ದು, ಸಂದೇಶ್ ವಿದೇಶದಿಂದ ಊರಿಗೆ ಮರಳುತ್ತಿರುವ ಬಗ್ಗೆ ಮಾಹಿತಿ ಅರಿತ ಪೊಲೀಸರು ಮುಂಬೈ ವಿಮಾನ ನಿಲ್ದಾಣಕ್ಕೆ ತೆರಳಿ ಅಲ್ಲಿಂದೇ ವಶಕ್ಕೆ ಪಡೆದುಕೊಂಡು ಪುತ್ತೂರಿಗೆ ಕರೆತಂದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.
Next Story