ಮಧ್ಯಪ್ರದೇಶ: ಮಹಾತ್ಮಾ ಗಾಂಧಿ ಪ್ರತಿಮೆಗೆ ಹಾನಿ

ಖಾಂಡ್ವಾ, ಅ. 30: ಮಧ್ಯಪ್ರದೇಶದ ಖಾಂಡ್ವಾ ಜಿಲ್ಲೆಯಲ್ಲಿ ಪ್ರತಿಷ್ಠಾಪಿಸಲಾಗಿರುವ ಮಹಾತ್ಮಾ ಗಾಂಧಿ ಪ್ರತಿಮೆಗೆ ಅಪರಿಚಿತ ದುಷ್ಕರ್ಮಿಗಳು ಹಾನಿ ಎಸಗಿದ್ದಾರೆ ಎಂದು ಪೊಲೀಸರು ರವಿವಾರ ತಿಳಿಸಿದ್ದಾರೆ.
ರಂಗಾಂವ್ ಗ್ರಾಮದಲ್ಲಿ ಶುಕ್ರವಾರ ಹಾಗೂ ಶನಿವಾರದ ನಡುವಿನ ರಾತ್ರಿ ಈ ಘಟನೆ ನಡೆದಿದೆ. ಈ ಹಿನ್ನೆಲೆಯಲ್ಲಿ ಅಪರಿಚಿತ ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ ವಿವಿ‘ ಸೆಕ್ಷನ್‌ಗಳ ಅಡಿಯಲ್ಲಿ ಎಫ್ ಐಆರ್ ದಾಖಲಿಸಲಾಗಿದೆ ಎಂದು ಜವಾರ್ ಪೊಲೀಸ್ ಠಾಣೆಯ ಉಸ್ತುವಾರಿ ಶಿವರಾಮ್ ಜಾಟ್ ಅವರು ತಿಳಿಸಿದ್ದಾರೆ.
ಜವಾರ್ ಗ್ರಾಮ ಪಂಚಾಯತ್ ಕಾರ್ಯದರ್ಶಿ ದೇವರಾಜ್ ಸಿಂಗ್ ಅವರು ಸಲ್ಲಿಸಿದ ದೂರಿನ ಹಿನ್ನೆಲೆಯಲ್ಲಿ ಎ್‌ಐಆರ್ ದಾಖಲಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ಈ ಘಟನೆ ಗ್ರಾಮ ನಿವಾಸಿಗಳನ್ನು ಆಕ್ರೋಶಿತರನ್ನಾಗಿ ಮಾಡಿದೆ. ಘಟನೆಯಲ್ಲಿ ಪಾಲ್ಗೊಂಡವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಅವರು ಆಗ್ರಹಿಸಿದ್ದಾರೆ ಎಂದು ಕಾಂಗ್ರೆಸ್‌ನ ಸ್ಥಳೀಯ ಪದಾಧಿಕಾರಿ ಕುಂದನ್ ಮಾಲ್ವಿಯಾ ಅವರು ತಿಳಿಸಿದ್ದಾರೆ.
Video: Mahatma Gandhi statue vandalised in Madhya Pradesh's Khandwa by some anti-social elements
— The New Indian (@TheNewIndian_in) October 30, 2022
Authorities registered a case against the unknown accused. pic.twitter.com/asb5b6dPxH







