Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೋಟಾ ಶ್ರೀನಿವಾಸ ಪೂಜಾರಿ ಬಿಟ್ಟರೆ ಬೇರೆ...

ಕೋಟಾ ಶ್ರೀನಿವಾಸ ಪೂಜಾರಿ ಬಿಟ್ಟರೆ ಬೇರೆ ಯಾವ ಸಚಿವರೂ ಸರಿ ಇಲ್ಲ: ಎಚ್.ಡಿ. ಕುಮಾರಸ್ವಾಮಿ

'ನ.1ಕ್ಕೆ ಮೊದಲ ಪಟ್ಟಿ ಪ್ರಕಟ'

30 Oct 2022 11:57 PM IST
share
ಕೋಟಾ ಶ್ರೀನಿವಾಸ ಪೂಜಾರಿ ಬಿಟ್ಟರೆ ಬೇರೆ ಯಾವ ಸಚಿವರೂ ಸರಿ ಇಲ್ಲ: ಎಚ್.ಡಿ. ಕುಮಾರಸ್ವಾಮಿ
'ನ.1ಕ್ಕೆ ಮೊದಲ ಪಟ್ಟಿ ಪ್ರಕಟ'

ಬೆಂಗಳೂರು, ಅ. 30: ‘ಬಿಜೆಪಿ ಸರಕಾರದಲ್ಲಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಒಬ್ಬರನ್ನು ಬಿಟ್ಟರೆ ಬೇರೆ ಯಾವ ಸಚಿವರೂ ಸರಿ ಇಲ್ಲ. ಎಲ್ಲರೂ ದುಡ್ಡಿನ ದಂಧೆ ಮಾಡಲು ಬಾಗಿಲು ತೆಗೆದುಕೊಂಡು ಕೂತಿದ್ದಾರೆ’ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.

ರವಿವಾರ ಇಲ್ಲಿನ ಜೆಡಿಎಸ್ ಕಚೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಪೊಲೀಸ್ ಇಲಾಖೆಯಲ್ಲಿ ದೊಡ್ಡ ದಂಧೆಯೇ ನಡೆಯುತ್ತಿದೆ. ಸಚಿವ ಎಂಟಿಬಿ ನಾಗರಾಜ್ ಯಾಕೆ ಹಾಗೆ ಹೇಳಿದರು? ಅದರ ಹಿಂದೆ ಏನೆಲ್ಲಾ ನಡೆದಿದೆ ಎನ್ನುವುದು ನನಗೆ ಎಲ್ಲವೂ ಗೊತ್ತಿದೆ. ನಂದೀಶ್ 80ಲಕ್ಷ ರೂ.ಕೊಟ್ಟು ಮೂರು ತಿಂಗಳು ಆಗಿರಲಿಲ್ಲ. ಅಷ್ಟರಲ್ಲಿ ಅವರನ್ನು ಅಮಾನತು ಮಾಡಿದರು. ಅದರ ನೋವಿನಲ್ಲಿ ನಂದೀಶ್‍ಗೆ ಹೃದಯಾಘಾತ ಆಗಿರಬಹುದು. ಅಲ್ಲಿನ ಶಾಸಕರಿಗೆ ಎಷ್ಟು ಹೋಗಿದೆ, ಯಾರ್ಯಾರಿಗೆ ಎಷ್ಟು ಹೋಗಿದೆ. ಎಲ್ಲವೂ ತನಿಖೆ ಮಾಡಿದ್ರೆ ಹೊರಬರಲಿದೆ ಎಂದು ಒತ್ತಾಯಿಸಿದರು.

ಕೋಲಾರದಿಂದ ನಾನು ಸ್ಪರ್ಧೆ ಮಾಡುವುದಿಲ್ಲ. ಚನ್ನಪಟ್ಟಣದಲ್ಲಿಯೇ ಸ್ಪರ್ಧೆ ಮಾಡುತ್ತೇನೆ ಎಂದು ಈಗಾಗಲೇ ಹೇಳಿದ್ದೇನೆ. ಕಾರ್ಯಕರ್ತರು ನನ್ನ ಮೇಲಿನ ಅಭಿಮಾನದಿಂದ ಕೋಲಾರದಿಂದ ಸ್ಪರ್ಧೆ ಮಾಡಿ ಎಂದು ಹೇಳಿದ್ದಾರೆ. ಅಲ್ಲಿನ ಜನರ ಸಮಸ್ಯೆ ಏನಿದೆ ಅಂತ ನನಗೆ ಗೊತ್ತಿದೆ. ಕೋಲಾರದಲ್ಲಿ ನಮ್ಮ ಪಕ್ಷಕ್ಕೆ ಸಮರ್ಥ ಅಭ್ಯರ್ಥಿಗಳು ಇದ್ದಾರೆ. ಕೆಜಿಎಫ್ ಬಿಟ್ಟು  ಉಳಿದ ಕಡೆ ನಮ್ಮ ಶಾಸಕರು ಇದ್ದಾರೆ. ನಾನೇ ಹೋಗಿ ಸ್ಪರ್ಧೆ ಮಾಡಬೇಕು ಎಂದು ಇಲ್ಲ. ಎಲ್ಲ ಮುಖಂಡರ ಜತೆ ಚರ್ಚೆ ಮಾಡಿ ಸಮಸ್ಯೆ ಪರಿಹಾರ ಮಾಡುತ್ತೇನೆ ಎಂದು ಹೇಳಿದರು.

ಸಚಿವ ಎಂಟಿಬಿ ನಾಗರಾಜ್ ವಿಡಿಯೋ ಜಗಜ್ಜಾಹೀರು ಆಗಿದೆ. ಸರಕಾರಕ್ಕೆ ಮರ್ಯಾದೆ ಇದ್ದಾರೆ ತನಿಖೆ ಮಾಡಿಸಲಿ. ಈಗಾಗಲೇ ಸಿಎಂ ತನಿಖೆ ಮಾಡಿಸುವುದಾಗಿ ಹೇಳಿದ್ದಾರೆ. ಆದರೆ, ಏನು, ಯಾವ ರೀತಿ ತನಿಖೆ ಮಾಡುತ್ತಿದ್ದಾರೆ ಎಂಬುದು ಗೊತ್ತಿಲ್ಲ ಎಂದು ಕಿಡಿಕಾರಿದರು.

ಕೆಲ ಸಚಿವರು ಎಷ್ಟೇ ಶ್ರೀಮಂತರಿದ್ದರೂ ಅವರಿಗೆ ಹಣದ ದಾಹ ಕಡಿಮೆಯಾಗಿಲ್ಲ. ಎಷ್ಟು ಸಾಧ್ಯವೋ ಅಷ್ಟನ್ನೂ ಗೋರುತ್ತಿದ್ದಾರೆ. ಈ ಸರಕಾರದಲ್ಲಿ ಕೈನಲ್ಲಿ ಹಣ ಬಾಚುತ್ತಿಲ್ಲ, ಜೆಸಿಬಿಯಲ್ಲಿ, ಹಿಟಾಚಿಯಲ್ಲಿ ಬಾಚುತ್ತಿದ್ದಾರೆ. ಆದೇನು ತನಿಖೆ ಮಾಡುತ್ತಾರೋ ನೋಡೋಣ. ಈ ಸರಕಾರಕ್ಕೆ ನಾಚಿಕೆ ಆಗಬೇಕು ಎಂದು ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.

‘ಜೆಡಿಎಸ್ ಎಲ್ಲರಿಗಿಂತ ಮೊದಲೇ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುತ್ತಿದ್ದು, ಬೇರೆ ಪಕ್ಷಗಳಲ್ಲಿ ಅನೇಕ ಪಟ್ಟಿಗಳಿವೆ. ಅವುಗಳ ಪಾಲಿಗೆ ಪಟ್ಟಿಗಳೆ ಫಜೀತಿ ಆಗಲಿವೆ. ಈಗಾಗಲೇ 123 ಕ್ಷೇತ್ರದಲ್ಲಿ ಅಭ್ಯರ್ಥಿಗಳನ್ನ ಫೈನಲ್ ಮಾಡಿದ್ದು, ಅವರಿಗೆಲ್ಲ ಕೆಲಸ ಪ್ರಾರಂಭ ಮಾಡಲು ಹೇಳಿದ್ದೇನೆ. ನಾವು ಯಾವುದೇ ಪ್ರಚಾರ ಮಾಡದೇ ಕೆಲಸ ಪ್ರಾರಂಭ ಮಾಡಿದ್ದೇವೆ’ ಎಂದು ಕುಮಾರಸ್ವಾಮಿ ತಿಳಿಸಿದರು. 

share
Next Story
X