ಪತ್ರಕರ್ತರಿಗೆ ಉಡುಗೊರೆ ರೂಪದಲ್ಲಿ ಲಂಚದ ಬಗ್ಗೆ ನ್ಯಾಯಾಂಗ ತನಿಖೆಯಾಗಲಿ: ಸಿದ್ದರಾಮಯ್ಯ
ಮೈಸೂರು,ಅ.31: ಪತ್ರಕರ್ತರಿಗೆ ಉಡುಗೊರೆ ರೂಪದಲ್ಲಿ ಹಣ ನೀಡಲಾಗಿದೆ ಎನ್ನುವ ಪ್ರಕರಣವನ್ನು ರಾಜ್ಯ ಸರ್ಕಾರ ಕೂಡಲೇ ನ್ಯಾಯಾಂಗ ತನಿಖೆಗೆ ಒಳಪಡಿಸಬೇಕೆಂದು ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಮುನ್ನ ಸೋಮವಾರ ಮಂಡಿಕಳ್ಳಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಮಾಡುತ್ತಿರುವ ಭ್ರಷ್ಟಾಚಾರವನ್ನು ಮುಚ್ಚಿಹಾಕಲು ಪತ್ರಕರ್ತರಿಗೆ ಈ ರೀತಿಯ ಉಡುಗೊರೆಯ ರೀತಿಯಲ್ಲಿ ಲಂಚ ನೀಡುತ್ತಿದ್ದಾರೆ. ಮುಖ್ಯಮಂತ್ರಿ ಅವರು ಕೂಡಲೇ ಈ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಳಪಡಿಸಿ ಸತ್ಯಾಸತ್ಯತೆಯನ್ನು ರಾಜ್ಯದ ಜನತೆಗೆ ತಿಳಿಸುವ ಕಾರ್ಯ ಮಾಡಬೇಕಿದೆ ಎಂದು ಹೇಳಿದರು.
ಈಗಾಗಲೇ ಹಲವಾರು ಪತ್ರಕರ್ತರು ಉಡುಗೆರೆಯನ್ನು ಹಿಂತಿರುಗಿಸಿದ್ದಾರೆ ಈ ಹಿನ್ನೆಲೆಯಲ್ಲಿ ಪತ್ರಕರ್ತರನ್ನು ಭ್ರಷ್ಟಾಚಾರದ ಸುಳ್ಳು ಹೇಳಿ ಸಿಲುಕಿಸುವ ಕಾರ್ಯ ಮಾಡುತ್ತಿದ್ದಾರೆ. ಮೀಸಲಾತಿ ಹೆಚ್ಚಳ ಪ್ರಕರಣ ಸೇರಿದಂತೆ ವಿವಿಧ ಪ್ರಕರಣಗಳಲ್ಲಿ ಬಿಜೆಪಿಯ ನಾಯಕರು ಹಾಗೂ ಮುಖ್ಯಮಂತ್ರಿಗಳು ಪ್ರತಿದಿನ ಸುಳ್ಳು ಆಶ್ವಾಸನೆ ನೀಡುತ್ತಿದ್ದಾರೆ ರಾಜ್ಯದಲ್ಲಿ ಕಾರ್ಯ ನಿರ್ವಹಿಸಿರುವ ಗುತ್ತಿಗೆದಾರರಿಗೆ ಬಿಲ್ ಪಾವತಿಗೆ ಶೇಖಡ 40ರಷ್ಟು ಲಂಚ ಕೇಳುತ್ತಿದ್ದಾರೆ ಲಂಚ ನೀಡಲಾಗದ ಗುತ್ತಿಗೆದಾರರು ದಯಾ ಮರಣಕ್ಕೆ ರಾಷ್ಟ್ರಪತಿ ಹಾಗೂ ರಾಜ್ಯಪಾಲರಿಗೆ ಮನವಿ ಮಾಡಿಕೊಂಡಿದ್ದಾರೆ ರಾಜ್ಯದಲ್ಲಿ ಲಂಚ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಮುಖ್ಯಮಂತ್ರಿ ನೈತಿಕತೆ ಹೊತ್ತು ಕೂಡಲೇ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದರು.
ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೀಸಲಾತಿ ಹೆಚ್ಚಳ ಕಾಂಗ್ರೆಸ್ ಮತ್ತು ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಸಮಾಜ ಕಲ್ಯಾಣ ಇಲಾಖೆ ಸಚಿವರಾಗಿದ್ದ ಪ್ರಿಯಾಂಕ ಖರ್ಗೆ ರವರು ನಾಗಮೋಹನ್ ದಾಸ್ ನೇತೃತ್ವದ ಆಯೋಗ ರಚನೆ ಮಾಡಿದ ಹಿನ್ನೆಲೆಯಲ್ಲಿ ಇಂದು ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಮೀಸಲಾತಿ ಹೆಚ್ಚಾಗಿದೆ.ಶಡ್ಯುಲ್ 9. ನ ಸಂವಿಧಾನದ ಮುಖಾಂತರ ಮೀಸಲಾತಿಯನ್ನು ಜಾರಿ ಮಾಡಿದರೆ ಮಾತ್ರ ಆ ವರ್ಗದ ಜನರಿಗೆ ನ್ಯಾಯ ಸಿಗಲಿದೆ ಎಂದು ಹೇಳಿದರು.