67ನೇ ಕನ್ನಡ ರಾಜ್ಯೋತ್ಸವ ಸಂಭ್ರಮ; ಧ್ವಜಾರೋಹಣ ನೆರವೇರಿಸಿದ ಸಿಎಂ ಬೊಮ್ಮಾಯಿ

ಬೆಂಗಳೂರು: ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಸಮಗ್ರ ಶಿಕ್ಷಣ ಇಲಾಖೆ ಹಮ್ಮಿಕೊಳ್ಳಲಾಗಿದ್ದ ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ 67 ನೇ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ತಾಯಿ ಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿದರು.
ಪ್ರಾಥಮಿಕ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸಂಸದ ಪಿ.ಸಿ.ಮೋಹನ್ , ವಿಧಾನ ಪರಿಷತ್ ಸದಸ್ಯರಾದ ಬಸವರಾಜ ಹೊರಟ್ಟಿ, ಗೋವಿಂದರಾಜು, ಶಾಸಕ ರಿಜ್ವಾನ್ ಅರ್ಷದ್, ಈ ಸಮಾರಂಭದಲ್ಲಿ ಉಪಸ್ಥಿತರಿದ್ದರು.
ಇಂದು ಸಂಜೆ ‘ಕರ್ನಾಟಕ ರತ್ನ ಪ್ರಶಸ್ತಿ’ ಪ್ರದಾನ: ಚಿತ್ರನಟ ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರ ‘ಕರ್ನಾಟಕ ರತ್ನ ಪ್ರಶಸ್ತಿ’ ಪ್ರದಾನ ಸಮಾರಂಭ ಇಂದು ಸಂಜೆ 4ಗಂಟೆಗೆ ವಿಧಾನಸೌಧದ ವೈಭವ ಪೇತ ಮೆಟ್ಟಿಲುಗಳ ಮೇಲೆ ನಡೆಯಲಿದ್ದು, ಅದ್ದೂರಿ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆ ಭರದಿಂದ ಸಾಗಿದೆ.

Next Story







