40 ಇಂದಿರಾ ಕ್ಯಾಂಟೀನ್‌ಗಳಿಗೆ ಬೀಗ: ರಾಜ್ಯ ಸರಕಾರದ ವಿರುದ್ಧ ಡಿ.ಕೆ. ಶಿವಕುಮಾರ್ ಆಕ್ರೋಶ

ಬೆಂಗಳೂರು: 'ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಪ್ರಾರಂಭವಾದ ಇಂದಿರಾ ಕ್ಯಾಂಟೀನ್ ಗಳನ್ನು ರಾಜ್ಯ ಸರ್ಕಾರ ಮುಚ್ಚುತ್ತಿದೆ' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಆರೋಪಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು, ''ದೇಶದ ಬಡ ವರ್ಗದವರ ಪರ ಅಪಾರ ಕಾಳಜಿ ಹೊಂದಿದ್ದ ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರು ಅವರು, ಬಡ ವರ್ಗದವರ ಶ್ರೇಯೋಭಿವೃದ್ಧಿಗಾಗಿ ಹಲವು ಯೋಜನೆಗಳನ್ನು ಜಾರಿಗೆ ತಂದರು. ಕಾಂಗ್ರೆಸ್ ಪಕ್ಷ ಇದಕ್ಕಾಗಿ ಇಂದಿರಾ ಕ್ಯಾಂಟೀನ್ ಅನ್ನು ಆರಂಭಿಸಿತು. ದುರಾದೃಷ್ಟವಶಾತ್ ಬಿಜೆಪಿ ಸರ್ಕಾರ 40 ಇಂದಿರಾ ಕ್ಯಾಂಟೀನ್‌ಗಳಿಗೆ ಬೀಗ ಹಾಕಿದೆ'' ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
''ಹಲವು ಕ್ಯಾಂಟೀನ್‌ಗಳಿಗೆ ನಿಗದಿತ ಅವಧಿಗೆ ಅನುದಾನ ತಲುಪುತ್ತಿಲ್ಲ. ಪ್ರತೀ ಜಿಲ್ಲೆಯಲ್ಲಿ ಇಂದಿರಾ ಕ್ಯಾಂಟೀನ್ ಸ್ಥಿತಿಗತಿಗಳ ಕುರಿತು ವರದಿ ಪಡೆದಿದ್ದೇನೆ. ಜಿಲ್ಲಾ ಕಾಂಗ್ರೆಸ್ ವತಿಯಿಂದ ಇಂದಿರಾ ಕ್ಯಾಂಟೀನ್ ಮುಂದೆ ಧರಣಿ ನಡೆಸಬೇಕು'' ಎಂದು ಕರೆ ನೀಡಿದರು.
ದೇಶದ ಬಡ ವರ್ಗದವರ ಪರ ಅಪಾರ ಕಾಳಜಿ ಹೊಂದಿದ್ದ ಅವರು ಅವರ ಶ್ರೇಯೋಭಿವೃದ್ಧಿಗಾಗಿ ಹಲವು ಯೋಜನೆಗಳನ್ನು ಜಾರಿಗೆ ತಂದರು. ಕಾಂಗ್ರೆಸ್ ಪಕ್ಷ ಇದಕ್ಕಾಗಿ ಇಂದಿರಾ ಕ್ಯಾಂಟೀನ್ ಅನ್ನು ಆರಂಭಿಸಿತು. ದುರಾದೃಷ್ಟವಶಾತ್ ಬಿಜೆಪಿ ಸರ್ಕಾರ 40 ಇಂದಿರಾ ಕ್ಯಾಂಟೀನ್‌ಗಳಿಗೆ ಬೀಗ ಹಾಕಿದೆ.
— DK Shivakumar (@DKShivakumar) October 31, 2022
2/3







