JDS ಪಂಚರತ್ನ ರಥಯಾತ್ರೆ ಮುಂದೂಡಿಕೆ
ಮುಳಬಾಗಿಲು, ನ.1 : 'ಸತತ ಮಳೆ ಕಾರಣ ಪಂಚರತ್ನ ರಥಯಾತ್ರೆಯನ್ನು ವಾರದಮಟ್ಟಿಗೆ ಮುಂದೂಡಲಾಗಿದೆ' ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಕಾರ್ಯಕ್ರಮ ಅಸ್ತವ್ಯಸ್ತವಾಗಲಿದೆ ಎಂಬ ಮುಖಂಡರ ಸಲಹೆ ಮೇರೆಗೆ ರಥಯಾತ್ರೆ ಮುಂದೂಡಲಾಗಿದೆ' ಎಂದು ತಿಳಿಸಿದರು.
ಇಂದು ಮುಳಬಾಗಿಲಿನಲ್ಲಿ ರಥಯಾತ್ರೆಗೆ ಮಾಜಿ ಪ್ರಧಾನಮಂತ್ರಿ ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್ಡಿ ದೇವೇಗೌಡ ಅವರು ಚಾಲನೆ ನೀಡಿದ್ದರು. ಅಲ್ಲದೆ, ಮಧ್ಯಾಹ್ನ 2 ಗಂಟೆಗೆ ಮುಳಬಾಗಿಲು ಪಟ್ಟಣದ ತಿರುಪತಿ ಬೈಪಾಸ್ ರಸ್ತೆಯಲ್ಲಿರುವ ಬಾಲಾಜಿ ಭವನದ ಪಕ್ಕದ ಜಾಗದಲ್ಲಿ ಬೃಹತ್ ಸಮಾವೇಶ ಕೂಡ ಏರ್ಪಡಿಸಲಾಗಿತ್ತು.
ಮಳೆ ಕಾರಣ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಕೂಡ ವಾರದಮಟ್ಟಿಗೆ ಮುಂದೂಡಲಾಗಿದೆ ಕುಮಾರಸ್ವಾಮಿ ತಿಳಿಸಿದ್ದಾರೆ.
Next Story