ಬಜೆ ಡ್ಯಾಮ್ ನೀರಿನ ಮಟ್ಟ ಪರಿಶೀಲನೆ

ಉಡುಪಿ : ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಹಾಗೂ ಅದಕ್ಕೆ ಹೊಂದಿ ಕೊಂಡಿರುವ ಗ್ರಾಮ ಪಂಚಾಯತ್‌ಗಳಿಗೆ ಕುಡಿಯುವ ನೀರು ಪೂರೈಸುತ್ತಿರುವ ಬಜೆ ಡ್ಯಾಮ್‌ಗೆ ಉಡುಪಿ ಶಾಸಕ ಕೆ. ರಘುಪತಿ ಭಟ್ ನಗರಸಭೆಯ ಅಧಿಕಾರಿಗಳೊಂದಿಗೆ ಇಂದು ಭೇಟಿ ನೀಡಿ ನೀರಿನ ಮಟ್ಟವನ್ನು ಪರಿಶೀಲಿಸಿದರು.
ಮುಂದಿನ ದಿನಗಳಲ್ಲಿ ನೀರಿನ ಮಟ್ಟ ಇಳಿಮುಖವಾಗಲಿರುವುದರಿಂದ ನೀರಿನ ಪಂಪಿಂಗ್ ಹಾಗೂ ನೀರಿನ ಪೂರೈಕೆಗೆ ಬೇಕಾಗುವ ಪೂರ್ವ ತಯಾರಿ ಕೈಗೊಳ್ಳುವ ಬಗ್ಗೆ ಶಾಸಕರು ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ದಿನದ ೨೪ಗಂಟೆಗಳ ಕಾಲ ನೀರನ್ನು ಪೂರೈಸುವ ಸಲುವಾಗಿ ಬಜೆ ಡ್ಯಾಮ್‌ನಲ್ಲಿ ಹೆಚ್ಚುವರಿ ಸಾಮರ್ಥ್ಯದ ೨೮ ಎಂ.ಎಲ್.ಡಿ ಮೋಟಾರ್‌ನ್ನು ಅಳವಡಿಸಲಾಯಿತು.
ನಗರ ಸಭೆಯ ಅಧ್ಯಕ್ಷೆ ಸುಮಿತ್ರಾ ಆರ್.ನಾಯಕ್, ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ ಕೊಳ, ಸ್ಥಾಯಿ ಸಮಿತಿ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ, ಪೌರಾಯುಕ್ತ ಉದಯ್ ಶೆಟ್ಟಿ, ಸಹಾಯಕ ಕಾರ್ಯಪಾಲಕ ಅಭಿಯಂತರ ಯಶ್ವಂತ್ ಪ್ರಭು, ನಗರಸಭಾ ಸದಸ್ಯರಾದ ಗಿರೀಶ್ ಅಂಚನ್, ರಜನಿ ಹೆಬ್ಬಾರ್, ಭಾರತಿ ಪ್ರಶಾಂತ್ ಮೊದಲಾದವರು ಉಪಸ್ಥಿತರಿದ್ದರು.





