ಮಂಗಳೂರು: ಚಿನ್ನ ಅಕ್ರಮ ಸಾಗಾಟ ಜಾಲ ಪತ್ತೆ
ಮಂಗಳೂರು, ನ.1: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅ.22ರಿಂದ 31ರ ತನಕ 1,46,87,410 ರೂ. ಮೌಲ್ಯದ ಚಿನ್ನ ಅಕ್ರಮ ಸಾಗಾಟ ಜಾಲವನ್ನು ಪತ್ತೆ ಮಾಡಲಾಗಿದೆ ಎಂದು ಕಸ್ಟಮ್ಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಆರು ಮಂದಿ ಪುರುಷ ಪ್ರಯಾಣಿಕರಿಂದ 2870 ಗ್ರಾಂ. 24 ಕ್ಯಾರೆಟ್ ಪರಿಶುದ್ಧ ಚಿನ್ನವನ್ನು ವಶಕ್ಕೆ ಪಡೆಯಲಾಗಿದೆ. ಚಿನ್ನವನ್ನು ಪೌಡರ್ ಮಾಡಿ ಗಮ್ ಅಳವಡಿಸಿ ಪೇಸ್ಟ್ ರೂಪದಲ್ಲಿ ದೇಹದ ವಿವಿಧ ಭಾಗಗಳಲ್ಲಿ ಅಡಗಿಸಿಟ್ಟು ಸಾಗಾಟ ಮಾಡಿದ್ದರು. ಜೀನ್ಸ್ ಪ್ಯಾಂಟ್, ಶೂ, ಗುದದ್ವಾರ ಮೊದಲಾದ ಕಡೆಗಳಲ್ಲಿ ಅಡಗಿಸಿಟ್ಟು ಸಾಗಾಟ ಮಾಡಿರುವುದನ್ನು ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ವೇಳೆ ಪತ್ತೆ ಹಚ್ಚಿದ್ದಾರೆ.
ಚಿನ್ನ ಹಾಗೂ ಸಾಗಾಟ ಮಾಡಿದ ಐವರನ್ನು ವಶಕ್ಕೆ ಪಡೆದು ಕಾನೂನು ಕ್ರಮ ಜರುಗಿಸಲಾಗಿದೆ ಎಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.
Next Story