Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೆಂಪೇಗೌಡ ಪ್ರತಿಮೆ: ಮುಡುಕುತೊರೆಯಲ್ಲಿ...

ಕೆಂಪೇಗೌಡ ಪ್ರತಿಮೆ: ಮುಡುಕುತೊರೆಯಲ್ಲಿ ಶ್ರೀಪುರುಷನ ಸಮಾಧಿಯಿಂದ ಮೃತ್ತಿಕೆ ಸಂಗ್ರಹ

1 Nov 2022 8:55 PM IST
share
ಕೆಂಪೇಗೌಡ ಪ್ರತಿಮೆ: ಮುಡುಕುತೊರೆಯಲ್ಲಿ ಶ್ರೀಪುರುಷನ ಸಮಾಧಿಯಿಂದ ಮೃತ್ತಿಕೆ ಸಂಗ್ರಹ

ತಲಕಾಡು: ನಾಡಪ್ರಭು ಕೆಂಪೇಗೌಡ  (Kempe Gowda) ಪ್ರತಿಮೆ ಅನಾವರಣದ ಹಿನ್ನೆಲೆಯಲ್ಲಿ  ತಲಕಾಡು ಗಂಗ ವಂಶದ ಖ್ಯಾತ ಅರಸ ಶ್ರೀಪುರುಷನ ಸಮಾಧಿ ಸ್ಥಳವಿರುವ ತಾಲೂಕಿನ ಮುಡುಕುತೊರೆಯಲ್ಲಿ ಮಂಗಳವಾರ ಪವಿತ್ರ ಮೃತ್ತಿಕೆ ಸಂಗ್ರಹವು ಸಾವಿರಾರು ಜನರ ಸಮ್ಮುಖದಲ್ಲಿ ನೆರವೇರಿತು.

ಈ ಸಂದರ್ಭದಲ್ಲಿ ನಾಡಪ್ರಭು ಕೆಂಪೇಗೌಡ ಪಾರಂಪರಿಕ ತಾಣಗಳ ಅಭಿವೃದ್ಧಿ ಪ್ರಾಧಿಕಾರದ ಉಪಾಧ್ಯಕ್ಷರೂ ಆಗಿರುವ ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ ಮಾತನಾಡಿದರು.

'ಕೆಂಪೇಗೌಡರು ಕಟ್ಟಿದ ಬೆಂಗಳೂರು ಇಂದು ಜಗತ್ತಿನಲ್ಲಿ ಅಗ್ರಸ್ಥಾನದಲ್ಲಿದೆ. ಕೆಂಪೇಗೌಡರ ನಿಮಿತ್ತವಾಗಿ ಇಡೀ ಕರ್ನಾಟಕವನ್ನು ಬೆಸೆಯುವ ಅರ್ಥಪೂರ್ಣ ಅಭಿಯಾನ ನಡೆಸಲಾಗುತ್ತಿದೆ. ಪ್ರಪಂಚದ ಯಾವ ನಗರದಲ್ಲೂ ಅದರ ಸ್ಥಾಪಕನ 108 ಅಡಿ ಎತ್ತರದ ಪ್ರತಿಮೆಯನ್ನು ಸ್ಥಾಪಿಸಿಲ್ಲ. ನ.11ರಂದು ಪ್ರಧಾನಿ ನರೇಂದ್ರ ಮೋದಿ ಅವರಿಂದ ಅನಾವರಣ ಗೊಳ್ಳಲಿರುವ ಕಂಚಿನ ಪ್ರತಿಮೆಯು ರಾಜ್ಯದ ಮಕುಟಮಣಿ ಆಗಲಿದೆ' ಎಂದು ಸಚಿವ ಅಶ್ವತ್ಥನಾರಾಯಣ ನುಡಿದರು.

'ಗಂಗರ ಅರಸ ಶ್ರೀಪುರುಷನ ಸಮಾಧಿಯನ್ನು ಕೂಡ ಸರಕಾರದ ವತಿಯಿಂದ ಸಮಗ್ರವಾಗಿ ಅಭಿವೃದ್ಧಿ ಪಡಿಸಲಾಗುವುದು ಎಂದು ಅವರು ಇದೇ ಸಂದರ್ಭದಲ್ಲಿ ಭರವಸೆ ನೀಡಿದರು. ಜತೆಗೆ ನ.11ರ ಕಾರ್ಯಕ್ರಮಕ್ಕೆ ಈ ಭಾಗದಿಂದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕೆಂದು' ಅವರು ಆಮಂತ್ರಿಸಿದರು.

ಸಂಸದ ಪ್ರತಾಪ್ ಸಿಂಹ ಮಾತನಾಡಿ,  'ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸಮುಚ್ಚಯದಲ್ಲಿ ಕೆಂಪೇಗೌಡರ 108 ಅಡಿ ಪ್ರತಿಮೆ ಸ್ಥಾಪಿಸುವ ಮೂಲಕ ಅವರ ಹೆಸರನ್ನು ಚಿರಸ್ಥಾಯಿಗೊಳಿಸಲಾಗುತ್ತಿದೆ. ಇದಕ್ಕಾಗಿ ಅಶ್ವತ್ಥನಾರಾಯಣ ಅವರು ಪಟ್ಟಿರುವ ಶ್ರಮ ಅಪಾರವಾಗಿದೆ. ಜತೆಗೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರು ಈ ಯೋಜನೆಯ ಕಲ್ಪನೆಗೆ ಉದಾರವಾಗಿ ಸ್ಪಂದಿಸಿದ್ದಾರೆ' ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

'ಇನ್ನು ಮುಂದೆ ಬೆಂಗಳೂರಿಗೆ ಬಂದಿಳಿಯುವವರಿಗೆ ತಕ್ಷಣವೇ ಕೆಂಪೇಗೌಡರ ಮಹೋನ್ನತ ವ್ಯಕ್ತಿತ್ವವು ಗೊತ್ತಾಗುತ್ತದೆ 'ಎಂದು ಅವರು ಅಭಿಪ್ರಾಯ ಪಟ್ಟರು.

ಕಾರ್ಯಕ್ರಮದಲ್ಲಿ ಮೈಸೂರು ಜಿಲ್ಲಾ ಬಿಜೆಪಿ ಅಧ್ಯಕ್ಷೆ ಮಂಗಳಾ, ಮಂಡ್ಯ ಜಿಲ್ಲಾ ಬಿಜೆಪಿ ಅಧ್ಯಕ್ಷ ಸಿ.ಪಿ. ಉಮೇಶ್, ಮದ್ದೂರು ಸ್ವಾಮಿ, ಡಾ.ಭಾರತಿಶಂಕರ್, ಡಾ.ರವೀಂದ್ರ, ಚಂದಗಾಲು ಶಿವಣ್ಣ, ವಸಂತ್, ತಲಕಾಡು ಚಿಕ್ಕರಂಗೇಗೌಡ ಮುಂತಾದವರು ಉಪಸ್ಥಿತರಿದ್ದರು.

share
Next Story
X