ಫಲಾಹ್ ವಿದ್ಯಾಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವ

ಮಂಗಳೂರು, ನ.1: ತಲಪಾಡಿ ವಿದ್ಯಾನಗರದ ಫಲಾಹ್ ವಿದ್ಯಾಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಫಲಾಹ್ ವಿದ್ಯಾಸಂಸ್ಥೆಯ ಅಧ್ಯಕ್ಷ ಯು.ಬಿ. ಮುಹಮ್ಮದ್ ಹಾಜಿ ಧ್ವಜಾರೋಹಣಗೈದರು.
ಈ ಸಂದರ್ಭ ಕಾರ್ಯದರ್ಶಿ ಎನ್. ಅರಬಿ ಕುಂಞಿ, ಜೊತೆ ಕಾರ್ಯದರ್ಶಿ ಟಿ.ಎಂ. ಬಶೀರ್ ತಲಪಾಡಿ, ಆಡಳಿತ ಮಂಡಳಿ ಹಾಗೂ ಗ್ರಾಪಂ ಸದಸ್ಯರಾದ ಇಸ್ಮಾಯೀಲ್ ಟಿ., ಪ್ರಾಂಶುಪಾಲ ಅಬ್ದುಲ್ ಖಾದರ್ ಹುಸೈನ್, ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಆಯಿಶಾ ಸಬೀನಾ ಕೈಸಿರಾನ್, ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ವಿದ್ಯಾ ಡಿಸೋಜ, ಅನುದಾನಿತ ಕನ್ನಡ ಮಾಧ್ಯಮ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಮುಹಮ್ಮದ್ ರಫೀಕ್, ಶಿಕ್ಷಕಿಯರಾದ ಲತಾ ಶೆಟ್ಟಿ, ಜ್ಯೋತಿ ಜೆ ಸಾಲ್ಯಾನ್, ಸಾಧನಾ ರಾವ್ ಬಿ. ಉಪಸ್ಥಿತರಿದ್ದರು.
ಎಸೆಸೆಲ್ಸಿ ಪರೀಕ್ಷೆಯಲ್ಲಿ ಅಧಿಕ ಅಂಕಗಳಿಸಿದ ವಿದ್ಯಾರ್ಥಿಗಳನ್ನು, ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ಸಮಗ್ರ ಪ್ರಶಸ್ತಿ ಪಡೆದ ವಿದ್ಯಾರ್ಥಿಗಳನ್ನು ಹಾಗೂ ಪ್ರತಿಭಾ ಕಾರಂಜಿಯಲ್ಲಿ ವಿಜೇತರಾದ ವಿದ್ಯಾರ್ಥಿಗಳನ್ನು ಆಡಳಿತ ಮಂಡಳಿಯ ವತಿಯಿಂದ ಸನ್ಮಾನಿಸಲಾಯಿತು.
ಕನ್ನಡ ಮಾಧ್ಯಮ ಪ್ರೌಢಶಾಲಾ ವಿಭಾಗದ ಆಂಗ್ಲ ಭಾಷಾ ಶಿಕ್ಷಕಿ ಚಂದ್ರಕಲಾ ಎಂ ಕಾರ್ಯಕ್ರಮ ನಿರೂಪಿಸಿದರು. ಕನ್ನಡ ಭಾಷಾ ಶಿಕ್ಷಕಿ ವನಿತಾ ಕೆ ವಂದಿಸಿದರು.