ವಿನಾಯಕ ಬಾಳಿಗಾ ಕೊಲೆ ಪ್ರಕರಣ: ವಿಶೇಷ ಅಭಿಯೋಜಕರಾಗಿ ವಕೀಲ ಬಾಲಕೃಷ್ಣನ್ ನೇಮಕ

ಮಂಗಳೂರು, ನ.2: ಆರ್.ಟಿ.ಐ. ಕಾರ್ಯಕರ್ತ ವಿನಾಯಕ ಬಾಳಿಗಾ ಕೊಲೆ ಪ್ರಕರಣದಲ್ಲಿ ರಾಜ್ಯ ಸರಕಾರವನ್ನು ಪ್ರತಿನಿಧಿಸಲು ಬೆಂಗಳೂರಿನ ವಕೀಲ ಎಸ್.ಬಾಲಕೃಷ್ಣನ್ ಅವರನ್ನು ವಿಶೇಷ ಸರಕಾರಿ ಅಭಿಯೋಜಕರನ್ನಾಗಿ ನೇಮಿಸಿ ಸರಕಾರ ಆದೇಶಿಸಿದೆ.
ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ಅರ್ಜಿ ಪ್ರಕರಣದ ವಿಚಾರಣೆ ನಡೆಯುತ್ತಿದೆ. ವಿನಾಯಕ ಬಾಳಿಗಾ ಅವರ ಸಹೋದರಿ ಅನುರಾಧಾ ಅವರ ಕೋರಿಕೆಯಂತೆ ಬಾಲಕೃಷ್ಣನ್ ಅವರನ್ನು ನೇಮಕ ಮಾಡಲಾಗಿದೆ.
2016ರ ಮಾರ್ಚ್ 21ರಂದು ಮಂಗಳೂರಿನ ವೆಂಕಟರಮಣ ದೇವಸ್ಥಾನದ ಸಮೀಪ ವಿನಾಯಕ ಬಾಳಿಗಾ ಅವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು. ಈ ಕುರಿತು ಅನುರಾಧ ಬಾಳಿಗಾ ನೀಡಿದ ದೂರಿನ ಅನ್ವಯ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
Next Story