ವಿಶ್ವದ ನಂ.1 ಟ್ವೆಂಟಿ-20 ಬ್ಯಾಟರ್ ಆಗಿ ಹೊರಹೊಮ್ಮಿದ ಸೂರ್ಯಕುಮಾರ್

ಹೊಸದಿಲ್ಲಿ: ಮೊನ್ನೆಯಷ್ಟೇ ದಕ್ಷಿಣ ಆಫ್ರಿಕಾ ವಿರುದ್ಧ ಟ್ವೆಂಟಿ-20 ವಿಶ್ವಕಪ್ ನಲ್ಲಿ 68 ರನ್ ಗಳಿಸಿದ್ದ ಸೂರ್ಯಕುಮಾರ್ ಯಾದವ್ ಐಸಿಸಿ ಟ್ವೆಂಟಿ-20 ಶ್ರೇಯಾಂಕದಲ್ಲಿ ನಂಬರ್ 1 ಬ್ಯಾಟರ್ ಆಗಿ ಹೊರಹೊಮ್ಮಿದ್ದಾರೆ. ಪಂದ್ಯಾವಳಿಯಲ್ಲಿ ಅವರು ನೆದರ್ಲೆಂಡ್ಸ್ ವಿರುದ್ಧವೂ ಅರ್ಧಶತಕವನ್ನು ಗಳಿಸಿದ್ದರು.
ಸದ್ಯಕ್ಕೆ ವಿಶ್ವದ ಅತ್ಯುತ್ತಮ ಟಿ20 ಬ್ಯಾಟರ್ ಎಂದು ಹೇಳಬಹುದಾದ ಸೂರ್ಯಕುಮಾರ್ ಯಾದವ್ ಬುಧವಾರ ಬಿಡುಗಡೆಯಾದ ICC ಟಿ-20 ರ್ಯಾಂಕಿಂಗ್‌ನಲ್ಲಿ ನಂ.1 ಸ್ಥಾನವನ್ನು ಪಡೆದುಕೊಂಡಿದ್ದಾರೆ. ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್ 2022 ರಲ್ಲಿ ಸೂರ್ಯ ಉತ್ತಮ ಫಾರ್ಮ್ ನಲ್ಲಿರುವ ಬ್ಯಾಟರ್‌ಗಳಲ್ಲಿ ಒಬ್ಬರಾಗಿದ್ದಾರೆ.
ಪಂದ್ಯಾವಳಿಯಲ್ಲಿ ಇದುವರೆಗೆ 3 ಪಂದ್ಯಗಳಲ್ಲಿ, ಸೂರ್ಯ 15, 51* ಹಾಗೂ 68 ಸ್ಕೋರ್‌ಗಳನ್ನು ದಾಖಲಿಸಿದ್ದಾರೆ. ಸೂರ್ಯ ಅವರು ಈಗ ಬ್ಯಾಟರ್‌ಗಳಿಗಾಗಿ ಐಸಿಸಿ ಟಿ-20 ರ್ಯಾಂಕಿಂಗ್‌ನಲ್ಲಿ ಅಗ್ರಸ್ಥಾನದಲ್ಲಿರುವ ಒಟ್ಟಾರೆ 23 ನೇ ಆಟಗಾರ ಹಾಗೂ ಅಗ್ರ ಸ್ಥಾನವನ್ನು ಪಡೆದ ಎರಡನೇ ಭಾರತೀಯರಾಗಿದ್ದಾರೆ.
Next Story